Karnataka Budget 2023 : ಸಿದ್ದರಾಮಯ್ಯ ಬಜೆಟ್ ನಲ್ಲಿ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಭರ್ಜರಿ ಕೊಡುಗೆ
Karnataka Budget 2023 : ಈ ಹಿಂದೆ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದ್ದ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ ಸ್ಥಗಿತಗೊಂಡ ಹಿನ್ನೆಲೆಯಲ್ಲಿ ಇದೀಗ ಯೋಜನೆ ಮುಂದುವರಿಸಲು ನಿರ್ಧರಿಸಲಾಗಿದೆ. ಈ ಯೋಜನೆಗೆ 60 ಕೋಟಿ ಅನುದಾನ ನೀಡಲಾಗಿದೆ.
ಬೆಂಗಳೂರು : ಸಿದ್ದರಾಮಯ್ಯ ಬಜೆಟ್ ನಲ್ಲಿ ಅಲ್ಪಸಂಖ್ಯಾತರಿಗೆ ಭರ್ಜರಿ ಕೊಡುಗೆಯನ್ನೇ ನೀಡಿದ್ದಾರೆ. ಅದರಲ್ಲೂ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಹಲವು ಯೋಜನ್ಗೆಳನ್ನು ಜಾರಿಗೊಳಿಸಲಾಗಿದೆ. ಈ ಹಿಂದೆ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದ್ದ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ ಸ್ಥಗಿತಗೊಂಡ ಹಿನ್ನೆಲೆಯಲ್ಲಿ ಇದೀಗ ಯೋಜನೆ ಮುಂದುವರಿಸಲು ನಿರ್ಧರಿಸಲಾಗಿದೆ. ಈ ಯೋಜನೆಗೆ 60 ಕೋಟಿ ಅನುದಾನ ನೀಡಲಾಗಿದೆ.
ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ನೀಡಿದ ಕೊಡುಗೆ :
-ಅಲ್ಪಸಂಖ್ಯಾತ ಸಂಖ್ಯಾತ ವಿದ್ಯಾರ್ಥಿಗಳ ವ್ಯಾಸಂಗಕ್ಕಾಗಿ ಶೈಕ್ಷಣಿಕ ಸಾಲ ಯೋಜನೆ ಅಡಿಯಲ್ಲಿ 28 ವೃತ್ತಿಪರ ಕೋರ್ಸ್ ವ್ಯಾಸಂಗ ಮಾಡಲು ಶೇ 2 ಬಡ್ಡಿ ದರದಲ್ಲಿ ಸಾಲ
- ಐದು ಕೋಟಿ ವೆಚ್ಚದಲ್ಲಿ ರಾಜ್ಯದ ಎಲ್ಲಾ ಅಲ್ಪಸಂಖ್ಯಾತ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಭಾಷಾ ಪ್ರಯೋಗಾಲಯ ಸ್ಥಾಪನೆ
- ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಹತ್ತು ತಿಂಗಳು ವಸತಿ ಸಹಿತ ಐಎಎಸ್ ಹಾಗೂ ಕೆ ಎ ಎಸ್ ಮತ್ತು ಇತರ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ
- ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ವಿಶ್ವಮಟ್ಟದ ವಿವಿ ಗಳಲ್ಲಿ ಪದವಿ ಸ್ನಾತಕೋತ್ತರ ವ್ಯಾಸಾಂಗ ಅನುಕೂಲಕ್ಕೆ ಶೂನ್ಯ ಬಡ್ಡಿದರದಲ್ಲಿ 20 ಲಕ್ಷದ ವರಗೆ ಸಾಲ
ಇದನ್ನೂ ಓದಿ : Karnataka Budget: ಸಿಎಂ ಸಿದ್ದರಾಮಯ್ಯ ಬಜೆಟ್‌ನಲ್ಲಿ ಕೃಷಿ-ತೋಟಗಾರಿಕೆಗೆ ನೀಡಿದ್ದೇನು?
ಇತರ ಯೋಜನೆಗಳು :
- ರಾಮನಗರ, ಬೆಳಗಾವಿ, ದಾವಣಗೆರೆ, ಕಲಬುರಗಿ, ದಕ್ಷೀಣ ಕನ್ನಡ ಜಿಲ್ಲೆಗಳಲ್ಲಿ, ಅಲ್ಪಸಂಖ್ಯಾತ ಯುವಜನರಿಗೆ ಕೌಶಲ್ಯ ತರಬೇತಿಯನ್ನು 4 ಕೋಟಿ ವೆಚ್ಚದಲ್ಲಿ ಪ್ರಾರಂಭ
- ಸ್ವಾವಲಂಬಿ ಸಾರಥಿ ಯೋಜನೆ ಅಡಿ ಅಲ್ಪಸಂಖ್ಯಾತ ನಿರುದ್ಯೋಗಿ ಯುವಕರಿಗೆ 4 ಚಕ್ರ ವಾಹನ ಖರೀದಿಸಲು 3ಲಕ್ಷ ರೂ. ಸಹಾಯಧನ
- ಜೈನರ ಪ್ರಮುಖ ಪುಣ್ಯ ಕ್ಷೇತ್ರಗಳ ಅಭಿವೃದ್ಧಿಗೆ 25 ಕೋಟಿ ಅನುದಾನ
- ಕ್ರಿಶ್ಚಿಯನ್ ಸಮುದಾಯದ ಅಭಿವೃದ್ಧಿ ಗೆ ಕರ್ನಾಟಕ ಕ್ರಿಶ್ಚಿಯನ್ ಅಭಿವೃದ್ಧಿ ನಿಗಮ ಸ್ಥಾಪನೆಗೆ 100ಕೋಟಿ ಅನುದಾನ
- ಹಜ್ ಭವನದಲ್ಲಿ ಅಲ್ಪಸಂಖ್ಯಾತ ಯುವಕರಿಗೆ 10 ತಿಂಗಳ ಕಾಲ ವಸತಿ ಸಹಿತ ಐ ಎ ಎಸ್,ಕೆ ಎ ಎಸ್ ತರಬೇತಿಗಳನ್ನ ಪ್ರತಿಷ್ಠಿತ ತರಬೇತಿ ಸಂಸ್ಥೆಗಳಿಂದ ಪ್ರಾರಂಭ
- ಹಲಸೂರಿನಲ್ಲಿರುವ ಗುರುದ್ವಾರ ದ ಅಭಿವೃದ್ಧಿ ಗೆ 25 ಕೋಟಿ ಅನುದಾನ
ಇದನ್ನೂ ಓದಿ : ಬಜೆಟ್ 2023-24: ಮದ್ಯ ಪ್ರಿಯರಿಗೆ ಬರೆ : ಶೇ 20 ಹೆಚ್ಚಳ
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=38l6m8543Vk
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.