ಬೆಂಗಳೂರು: ಸಿಎಂ ಸಿದ್ದರಾಮಯ್ಯನವರು ಶುಕ್ರವಾರದಂದು ದಾಖಲೆಯ 16 ನೇ ಬಜೆಟ್ ಮಂಡನೆ ವೇಳೆ ಮೀನುಗಾರ ಅಭ್ಯುದಯಕ್ಕಾಗಿ ಹಲವಾರು ಕಾರ್ಯಕ್ರಮಗಳನ್ನು ಸಿಎಂ ಘೋಷಿಸಿದ್ದಾರೆ.
ಸರ್ವತೋಮುಖ ಕರ್ನಾಟಕ ಅಭಿವೃಧ್ದಿಯ ಉದ್ದೇಶದಿಂದ, ಸಂಪೂರ್ಣ ಜನರ ಒಳಿತಿಗಾಗಿಯೇ 2025-26 ರ ಬಜೆಟ್ ಇದ್ದು, ಈಗಾಗಲೇ ಕನ್ನಡಿಗರಿಗೆ ಗ್ಯಾರಂಟಿಗಳನ್ನು ಮುಂದುವರೆಸಿಕೊಂಡು ಹೋಗುವ ಭರವಸೆಯನ್ನು ಸಿಎಂ ನೀಡಿದ್ದಾರೆ,
2025-26ನೇ ಸಾಲಿನ ಬಜೆಟ್‌ನಲ್ಲಿ ಮೀನುಗಾರಿಕೆ ವಲಯಕ್ಕೆ ವಿಶೇಷ ಯೋಜನೆಗಳನ್ನು ಸಿಎಂ ಘೋಷಣೆ ಮಾಡಿದ್ದಾರೆ.ಅದರಲ್ಲೂ ಕರಾವಳಿ ಜಿಲ್ಲೆಯಲ್ಲಿನ ಮೀನುಗಾರರಿಗೆ ಕೊಂಡಿ ರಸ್ತೆಗಳನ್ನು ನಿರ್ಮಾಣ ಮಾಡಿಕೊಡಲು 30 ಕೋಟಿ ರೂಪಾಯಿಗಳನ್ನು ಸಿಎಂ ಬಜೆಟ್ ನಲ್ಲಿ ಘೋಷಿಸಿದ್ದಾರೆ. ಇದರ ಜೊತೆಗೆ ಮೋಟರ್ ಅಧಾರಿತ ದೋಣಿಗಳ ದುರಸ್ತಿಗೆ ಸಹಾಯಧನ ಘೋಷಿಸಿದ್ದಾರೆ. ಆ ಮೂಲಕ ಇನ್ಮುಂದೆ 15 ವರ್ಷಗಳಿಗಿಂತ ಹಳೆಯ ಮೋಟರೀಕೃತ ದೋಣಿಗಳ ಇಂಜಿನ್‌ಗಳನ್ನ ಬದಲಾವಣೆ ಮಾಡಲು ಗರಿಷ್ಟ 1 ಲಕ್ಷ ರೂ ಧನ ಸಹಾಯವನ್ನು ರಾಜ್ಯ ಸರ್ಕಾರ ನೀಡಲಾಗಿದೆ.
ಇದಷ್ಟೇ ಅಲ್ಲದೆ ರಾಜ್ಯದಲ್ಲಿ ಮೀನುಗಾರಿಕೆಯನ್ನು ಉತ್ತೇಜಿಸಲು ಹೊಸ ಮೀನುಗಾರಿಕಾ ನೀತಿಯನ್ನು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.









