ಎಸ್​ಸಿ ಎಸ್​ಟಿ ಸಮುದಾಯಕ್ಕೆ ಬಜೆಟ್‌ನಲ್ಲಿ ​ಭರ್ಜರಿ ಗಿಫ್ಟ್ ಕೊಟ್ಟ ಸಿದ್ದರಾಮಯ್ಯ

Karnataka Budget 2025: ಈ ಬಾರಿಯ ಕರ್ನಾಟಕ ಬಜೆಟ್‌ನಲ್ಲಿ ಸಿಎಂ ಸಿದ್ದರಾಮಯ್ಯ ಎಸ್ಸಿ, ಎಸ್‌ಟಿ ಸಮುದಾಯದವರಿಗೆ ಬಂಪರ್‌ ಗಿಫ್ಟ್‌ ನೀಡಿದ್ದಾರೆ.

Written by - Chetana Devarmani | Last Updated : Mar 7, 2025, 11:23 AM IST
  • ಕರ್ನಾಟಕ ಬಜೆಟ್‌ 2025
  • ಎಸ್​ಎಸ್​ಸಿ ಎಸ್​ಟಿ ಸಮುದಾಯಕ್ಕೆ ಗುತ್ತಿಗೆ ಮೀಸಲಾತಿ
  • ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ
ಎಸ್​ಸಿ ಎಸ್​ಟಿ ಸಮುದಾಯಕ್ಕೆ ಬಜೆಟ್‌ನಲ್ಲಿ ​ಭರ್ಜರಿ ಗಿಫ್ಟ್ ಕೊಟ್ಟ ಸಿದ್ದರಾಮಯ್ಯ

Karnataka Budget Highlights: ಸಿಎಂ ಸಿದ್ದರಾಮಯ್ಯ ಇಂದು ಕರ್ನಾಟಕ ಬಜೆಟ್‌ 2025  ಅನ್ನು ಮಂಡಿಸಿದರು. ಡಾ. ಬಿ.ಆರ್. ಅಂಬೇಡ್ಕರ್ ಅವರ ಸಾಂವಿಧಾನಿಕ ಮೌಲ್ಯಗಳು ಮತ್ತು ರಾಜ್ಯದ ಸಾಮಾಜಿಕ ಏಕತೆಯನ್ನು ಒತ್ತಿ ಹೇಳಿದರು. ಖಾತರಿ ಯೋಜನೆಗಳನ್ನು ಸಮರ್ಥಿಸಿಕೊಳ್ಳುತ್ತಾ "ಉಚಿತ ಉಡುಗೊರೆಗಳು" ಬಡತನವನ್ನು ನಿವಾರಿಸುವ ಗುರಿಯನ್ನು ಹೊಂದಿವೆ ಎಂದು ಹೇಳಿದರು. ಬಜೆಟ್‌ನಲ್ಲಿ ​ಎಸ್​ಸಿ, ಎಸ್​ಟಿ ಸಮುದಾಯಕ್ಕೆ ಸಿದ್ದರಾಮಯ್ಯ ಭರ್ಜರಿ ಗಿಫ್ಟ್ ನೀಡಿದ್ದಾರೆ. 

Add Zee News as a Preferred Source

2025-26ನೇ ಸಾಲಿನ ಕರ್ನಾಟಕ ಬಜೆಟ್​ ಗಾತ್ರ 4,09,549 ಕೋಟಿ ರೂಪಾಯಿ ಆಗಿದೆ. ಕಳೆದ ಬಾರಿಯ ಬಜೆಟ್ ಗಾತ್ರ 3,71,383 ಕೋಟಿ ರೂಪಾಯಿ ಆಗಿತ್ತು. ಈ ಬಾರಿಯ ಬಜೆಟ್ ಗಾತ್ರ ಕಳೆದ ಬಜೆಟ್‌ಗಿಂತ 38,166 ಕೋಟಿ ಹೆಚ್ಚಳವಾಗಿದೆ.

ಇದನ್ನೂ ಓದಿ: Karnataka Budget 2025 LIVE : ದಾಖಲೆಯ 16ನೇ ಬಜೆಟ್ ಪ್ರತಿ ಓದುತ್ತಿರುವ ಸಿಎಂ ಸಿದ್ದರಾಮಯ್ಯ..!

ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ತಮ್ಮ ದಾಖಲೆಯ 16ನೇ ಬಜೆಟ್​​ ನಲ್ಲಿ ಎಸ್​ಸಿ ಎಸ್​ಟಿ ಸಮುದಾಯಕ್ಕೆ ಬಹುದೊಡ್ಡ ಕೊಡುಗೆ ಕೊಟ್ಟಿದ್ದಾರೆ. ಸರ್ಕಾರದ 2 ಕೋಟಿ ರೂಪಾಯಿವರೆಗಿನ ಕಾಮಗಾರಿಗಳಲ್ಲಿ ಗುತ್ತಿಗೆ ಮೀಸಲಾತಿಯನ್ನು ಇಂದಿನ ಬಜೆಟ್‌ನಲ್ಲಿ ಘೋಷಣೆ ಮಾಡಿದ್ದಾರೆ. 

ಎಸ್​ಸಿ ಹಾಗೂ ಎಸ್​ಟಿ ಸಮುದಾಯದ ಗುತ್ತಿಗೆದಾರರಿಗೆ ಸರ್ಕಾರದ 2 ಕೋಟಿ ರೂ. ವರೆಗಿನ ಕಾಮಗಾರಿಗಳಲ್ಲಿ ಗುತ್ತಿಗೆಮೀಸಲಾತಿ ನೀಡುವುದಾಗಿ ಸಿಎಂ ಸಿದ್ದರಾಮಯ್ಯ ಬಜೆಟ್‌ನಲ್ಲಿ ತಿಳಿಸಿದ್ದಾರೆ. ಎಸ್​ಸಿಪಿ ಟಿಎಸ್​ಪಿ ಯೋಜನೆಗೆ 42018 ಕೋಟಿ ರೂ. ಮೀಸಲು ಇಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಇದನ್ನೂ ಓದಿ: Karnataka Budget 2025: ಬಿಸಿಯೂಟ ಕಾರ್ಯಕರ್ತೆಯರು, ಸರ್ಕಾರಿ-ಪ್ರೌಢ ಶಾಲೆ ಅತಿಥಿ ಶಿಕ್ಷಕರಿಗೆ ಸಿಹಿ ಸುದ್ದಿ ನೀಡಿದ ಸಿದ್ದರಾಮಯ್ಯ 

ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

About the Author

Chetana Devarmani

" ಚೇತನಾ ದೇವರಮನಿ ಅವರು ಪ್ರಸ್ತುತ ʻಜೀ ಕನ್ನಡ ನ್ಯೂಸ್‌ʼ ವೆಬ್‌ನಲ್ಲಿ Senior Sub Editor ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಚೇತನಾ ದೇವರಮನಿ ಅವರು ಅನುಭವಿ ಪತ್ರಕರ್ತರಾಗಿದ್ದು, ಮಾಧ್ಯಮ ಕ್ಷೇತ್ರದಲ್ಲಿ 7 ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿದ್ದಾರೆ. ಅವರು ಸಿನಿಮಾ, ಕ್ರೈಂ, ಆರೋಗ್ಯ, ಬ್ಯುಸಿನೆಸ್, ಆಧ್ಯಾತ್ಮಿಕ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. 2018ರಲ್ಲಿ ʻರಾಮೋಜಿ ಗ್ರೂಪ್‌ʼನ ಈಟಿವಿ ಭಾರತ ಕರ್ನಾಟಕ ಸಂಸ್ಥೆಯಲ್ಲಿ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು ಮೂರು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಬಳಿಕ 2021 ರಲ್ಲಿ ʻಇಂಡಿಯಾ ಡಾಟ್‌ ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ ತಂಡ ಸೇರಿದರು. ...Read More

Trending News