Karnataka Budget : ಬೊಮ್ಮಾಯಿ ಬಜೆಟಿನಲ್ಲಿ ಆರೋಗ್ಯ ಭಾಗ್ಯ

ಸಿಎಂ ಬೊಮ್ಮಾಯಿ ತಮ್ಮ ಬಜೆಟ್ ನಲ್ಲಿ ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಅನೇಕ ಘೋಷಣೆಗಳನ್ನು ಮಾಡಿದ್ದಾರೆ.   

Written by - Ranjitha R K | Last Updated : Mar 4, 2022, 03:12 PM IST
  • ಸಿಎಂ ಬೊಮ್ಮಾಯಿ ಚೊಚ್ಚಲ ಬಜೆಟ್
  • ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಅನೇಕ ಯೋಜನೆ
  • ಬಡವರಿಗೆ ವೈದ್ಯಕೀಯ ಶಿಕ್ಷಣ ಒದಗಿಸಲು ಕ್ರಮ
Karnataka Budget : ಬೊಮ್ಮಾಯಿ ಬಜೆಟಿನಲ್ಲಿ  ಆರೋಗ್ಯ ಭಾಗ್ಯ title=
ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಅನೇಕ ಯೋಜನೆ (file photo)

ಬೆಂಗಳೂರು : Karnataka Budget 2022 : ರಾಜ್ಯ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಮ್ಮ ಚೊಚ್ಚಲ ಬಜೆಟ್ ಮಂಡಿಸಿದ್ದಾರೆ. ಸಿಎಂ ಬೊಮ್ಮಾಯಿ (CM Basavaraj Bommai) ತಮ್ಮ ಬಜೆಟ್ ನಲ್ಲಿ ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಅನೇಕ ಘೋಷಣೆಗಳನ್ನು ಮಾಡಿದ್ದಾರೆ. ಬಡವರಿಗೆ ವೈದ್ಯಕೀಯ ಶಿಕ್ಷಣ ಒದಗಿಸಲು ನೆರವಾಗುವಂತಹ ಯೋಜನೆಗಳನ್ನು ಪ್ರಕಟಿಸಿದ್ದಾರೆ (Karnataka Budget).  

ಆರೋಗ್ಯ ಕ್ಷೇತ್ರಕ್ಕೆ ನೀಡಿದ ಕೊಡುಗೆ :

-ಬೆಂಗಳೂರಿನ ಎಲ್ಲಾ ವಾರ್ಡ್ ಗಳಲ್ಲಿ ಹಾಗೂ ರಾಜ್ಯದ ಪ್ರಮುಖ ನಗರಗಳಲ್ಲಿ ಅಸಾಂಕ್ರಾಮಿಕ ರೋಗಗಳ ತಪಾಸಣೆಗೆ ಒಟ್ಟು ೪೩೮ ನಮ್ಮ ಕ್ಲಿನಿಕ್ ಸ್ಥಾಪನೆ
-೩೦೦ ಮಹಿಳಾ ಸ್ವಾಸ್ಥ್ಯ ಕೇಂದ್ರಗಳ ಸ್ಥಾಪನೆ
-ಬಡ ಹಿರಿಯ ನಾಗರಿಕರಿಗೆ ಉಚಿತ ನೇತ್ರ ತಪಾಸಣೆ, ಶಸ್ತ್ರ ಚಿಕಿತ್ಸೆ ಮತ್ತು ಕನ್ನಡಕ ಸೌಲಭ್ಯ
-ಹುಬ್ಬಳ್ಳಿಯಲ್ಲಿ ೨೫೦ ಕೋಟಿ  ರೂ ವೆಚ್ಚದಲ್ಲಿ ಜಯದೇವ ಹೃದ್ರೋಗ ಸಂಸ್ಥೆಯ ಪ್ರಾದೇಶಿಕ ಹೃದಯ ಕೇಂದ್ರ ಸ್ಥಾಪನೆ (Karnataka Budget highlights)

ಇದನ್ನೂ ಓದಿ : Karnataka Crime : ಗುಂಡ್ಲುಪೇಟೆಯಲ್ಲಿ‌‌‌ ಕಲ್ಲು ಕ್ವಾರಿ ಕುಸಿತ ; ಲಾರಿಗಳೆಲ್ಲಾ ಪಲ್ಟಿ, 6 ಜನ ಸಿಲುಕಿರುವ ಶಂಕೆ

-ಬೆಳಗಾವಿಯಲ್ಲಿ 50 ಕೋಟಿ  ವೆಚ್ಚದಲ್ಲಿ ಕಿದ್ವಾಯಿ ಪ್ರಾದೇಶಿಕ  ಕ್ಯಾನ್ಸರ್ ಕೇಂದ್ರ ಸ್ಥಾಪನೆ
-10 ವೈದ್ಯಕೀಯ ವಿಜ್ಞಾನ ಸಂಸ್ಥೆಗಳಲ್ಲಿ ಕ್ಯಾನ್ಸರ್ ರೋಗಿಗಳಿಗೆ ಕಿಮೊಥೆರಪಿ ನೀಡುವ nfusion center ಸ್ಥಾಪನೆ (Karnataka budget 2022)
-ಏಳು ತಾಲೂಕು ಆಸ್ಪತ್ರೆಗಳು ೧೦೦ ಹಾಸಿಗೆ ಆಸ್ಪತ್ರೆಗಳಾಗಿ ಮೇಲ್ದರ್ಜೆಗೆ 
-ತುಮಕೂರಿನಲ್ಲಿ ೨೦ ಕಟಿತಿ ರೂ ವೆಚ್ಚದಲ್ಲಿ ಟ್ರಾಮಾ ಕೇರ್ ಸ್ಥಾಪನೆ
- ಮುಖ್ಯಮಂತ್ರಿ ಆರೋಗ್ಯ ವಾಹಿನಿ ಯೋಜನೆಯಡಿ ಮನೆ ಬಾಗಿಲಿಗೆ ವೈದ್ಯಕೀಯ ಸೇವೆ ಒದಗಿಸಲು ಬೀದರ್, ಚಾಮರಾಜನಗರ, ಹಾವೇರಿ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಸಂಚಾರಿ ಕ್ಲಿನಿಕ್
-ಸವಣೂರಿನಲ್ಲಿ ಹೊಸ ಆಯುರ್ವೇದ ಕಾಲೇಜು ಸ್ಥಾಪನೆ

ಇದನ್ನೂ ಓದಿ : Karnataka Budget 2022 : ಸಿಎಂ ಬೊಮ್ಮಾಯಿ‌ ಚೊಚ್ಚಲ ಬಜೆಟ್ ನ ಒಟ್ಟು ಮೌಲ್ಯ ಎಷ್ಟು ಸಾವಿರ ಕೋಟಿ?

ಬಡವರಿಗೆ ವೈದ್ಯಕೀಯ ಶಿಕ್ಷಣ ಒದಗಿಸಲು ಕ್ರಮ:
- ರಾಜ್ಯದ ಎಲ್ಲಾ ತಾಲೂಕುಗಳಲ್ಲಿ  ನೀಟ್ ತರಗತಿ
-ಸರ್ಕಾರಿ ಕೋಟಾದಡಿ ಸರ್ಕಾರಿ ಹಾಗೂ ಖಾಸಗಿ ವೈದ್ಯಕೀಯ ಕಾಲೇಜಿಗೆ ಪ್ರವೇಶ ಪಡೆಯುವ ಬಡ ವಿದ್ಯಾರ್ಥಿಗಳಿಗೆ ಬ್ಯಾಂಕುಗಳಿಂದ ಶಿಕ್ಷನಿಕ ಸಾಲ ಒದಗಿಸಲು ನೆರವು 
-ಖಾಸಗಿ ವೈದ್ಯಕೀಯ ಕಾಲೀಜುಗಳ ವರ್ಗೀಕರಣ ಮತ್ತು ಶುಲ್ಕ ನಿಯಂತ್ರಣ ಸಮಿತಿಯ ಮೂಲಕ ಶುಲ್ಕ ನಿಗದಿಪಡಿಸಲು ಕ್ರಮ 

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News