ಕರ್ನಾಟಕ ಉಪ ಚುನಾವಣೆ: ನಾಳೆ ರಾಜ್ಯದ 15 ಕ್ಷೇತ್ರಗಳಲ್ಲಿ ಮತದಾನ
ನಾಳೆ ಡಿಸೆಂಬರ್ 5 ರಂದು ಕರ್ನಾಟಕದಲ್ಲಿ ನಡೆಯಲಿರುವ 15 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ 128 ಸ್ವತಂತ್ರರು ಸೇರಿದಂತೆ 248 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಡಿಸೆಂಬರ್ 9 ರಂದು ಮತ ಎಣಿಕೆ ನಡೆಯಲಿದೆ.
ಬೆಂಗಳೂರು: ನಾಳೆ ಡಿಸೆಂಬರ್ 5 ರಂದು ಕರ್ನಾಟಕದಲ್ಲಿ ನಡೆಯಲಿರುವ 15 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ 128 ಸ್ವತಂತ್ರರು ಸೇರಿದಂತೆ 248 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಡಿಸೆಂಬರ್ 9 ರಂದು ಮತ ಎಣಿಕೆ ನಡೆಯಲಿದೆ.
ಬಿಜೆಪಿ ಮತ್ತು ವಿರೋಧ ಪಕ್ಷದ ಕಾಂಗ್ರೆಸ್ ಮತ್ತು ಜನತಾದಳ-ಸೆಕ್ಯುಲರ್ (ಜೆಡಿ-ಎಸ್) ಎಲ್ಲಾ 15 ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರತ್ಯೇಕವಾಗಿ ಸ್ಪರ್ಧಿಸುತ್ತಿದ್ದು ತ್ರಿಕೋನ ಸ್ಪರ್ಧೆ ಏರ್ಪಡುವ ಸಾಧ್ಯತೆಯಿದೆ. ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದ ವಿರುದ್ಧ ಬಂಡಾಯ ಸಾರಿ ಕಾಂಗ್ರೆಸಿನ 14 ಮತ್ತು ಜೆಡಿಎಸ್ ನ 3 ಶಾಸಕರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
ಈ ಹಿಂದಿನ ವಿಧಾನಸಭೆಯ ಸ್ಪೀಕರ್ ಕೆ.ಆರ್. ರಮೇಶ್ ಕುಮಾರ್ ತಮ್ಮ ಪಕ್ಷದ ವಿಪ್ ನ್ನು ಧಿಕ್ಕರಿಸಿದ ಕಾರಣಕ್ಕಾಗಿ ಜುಲೈ 25-28ರಂದು 17 ಬಂಡಾಯ ಶಾಸಕರನ್ನು ಅನರ್ಹಗೊಳಿಸಿದರು. ಮಸ್ಕಿ (ರಾಯಚೂರು ಜಿಲ್ಲೆ) ಮತ್ತು ಆರ್.ಆರ್.ನಗರ (ಬೆಂಗಳೂರು ನೈಋತ್ಯ) ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್‌ನಲ್ಲಿ ಅರ್ಜಿ ವಿಚಾರಣೆ ಬಾಕಿ ಇರುವ ಕಾರಣ ಈ ಎರಡೂ ಕ್ಷೇತ್ರಗಳ ಉಪ ಚುನಾವಣೆಗಳನ್ನು ತಡೆಹಿಡಿಯಲಾಗಿದೆ.
ಈ ಎರಡೂ ಕ್ಷೇತ್ರಗಳನ್ನು ಹೊರತುಪಡಿಸಿ ಅಥಣಿ, ಕಾಗವಾಡ, ಗೋಕಾಕ್, ಯೆಲ್ಲಾಪುರ, ಹಿರೇಕೆರೂರ್, ರಾಣಿಬೆನ್ನೂರ್, ವಿಜಯನಗರ, ಚಿಕ್ಕಬಳ್ಳಾಪುರ, ಕೆ.ಆರ್. ಪುರ, ಯಶ್ವಂತಪುರ, ಮಹಾಲಕ್ಷ್ಮಿ ಲೇಔಟ್, ಶಿವಾಜಿನಗರ, ಹೊಸಕೋಟೆ, ಕೆ.ಆರ್. ಪೇಟೆ ಮತ್ತು ಹುಣಸೂರು ವಿಧಾನಸಭಾ ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆಯಲಿದೆ.