ಬೆಂಗಳೂರು : ಮೂರು ಕ್ಷೇತ್ರಗಳ ಉಪಚುನಾವಣೆಯ (By Election) ತಯಾರಿ ಭರದಿಂದ ಸಾಗಿದೆ. ಬಿಜೆಪಿಯಲ್ಲಿ ಸೂಕ್ತ ಅಭ್ಯರ್ಥಿಗಳ ಹುಡುಕಾಟ ನಡೆಯುತ್ತಿದೆ. ಈ ನಿಟ್ಟಿನಲ್ಲಿ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ ನಡೆಸಲಾಯಿತು. ಈ ಸಭೆಯಲ್ಲಿ ಅಭ್ಯರ್ಥಿ ಆಯ್ಕೆ ಕುರಿತಂತೆ ಮಹತ್ವದ ಚರ್ಚೆ ನಡೆದಿದೆ. ಇನ್ನೆರಡು ದಿನಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಪಟ್ಟಿ (BJP Candidate list) ಬಿಡುಗಡೆಯಾಗುವ ಎಲ್ಲಾ ಸಾಧ್ಯತೆಗಳು ಇವೆ ಎನ್ನಲಾಗಿದೆ.  
 
ಶನಿವಾರ ರಾಜ್ಯ ಬಿಜೆಪಿ (BJP) ಕೋರ್ ಕಮಿಟಿ ಸಭೆ ನಡೆದಿದೆ. ಈ ಸಭೆಯಲ್ಲಿ ಮಸ್ಕಿ, ಬಸವಕಲ್ಯಾಣ ವಿಧಾನಸಭಾ ಕ್ಷೇತ್ರ ಹಾಗೂ ಬೆಳಗಾವಿ ಲೋಕಸಭಾ ಕ್ಷೇತ್ರಗಳ ಉಪಚುನಾವಣೆ (BY Election) ಬಗ್ಗೆ ಚರ್ಚೆ ನಡೆದಿದೆ. ಸಭೆಯಲ್ಲಿ ಅಭ್ಯರ್ಥಿಗಳ ಆಯ್ಕೆ ಕುರಿತಂತೆ ಚರ್ಚೆ ನಡೆಸಲಾಗಿದೆ. ಸಭೆ  ಬಳಿಕ ಅಭ್ಯರ್ಥಿಗಳ ಪಟ್ಟಿಯನ್ನು ಹೈಕಮಾಂಡ್'ಗೆ ಕಳುಹಿಸಲಾಗಿದೆ. ಹೈ ಕಮಾಂಡ್ ಗ್ರೀನ್ ಸಿಗ್ನಲ್ ಸಿಕ್ಕಿದ ಕೂಡಲೇ ಪಟ್ಟಿ ಬಿಡುಗಡೆಯಾಗಲಿದೆ.  ಇನ್ನೆರಡು ದಿನಗಳಲ್ಲಿ ಪಟ್ಟಿ ಬಿಡುಗಡೆಯಾಗುವುದು ಬಹುತೇಕ ಖಚಿತ ಎನ್ನಲಾಗಿದೆ.  


COMMERCIAL BREAK
SCROLL TO CONTINUE READING

ಇದನ್ನೂ ಓದಿ Government Employees: ರಾಜ್ಯ ಸರ್ಕಾರಿ ನೌಕರರಿಗೊಂದು ಮಾಹಿತಿ: ‘KGID Online' ಬಳಕೆ ಹೇಗೆ ಗೊತ್ತಾ?


ಮೂಲಗಳ ಪ್ರಕಾರ ಸಭೆಯಲ್ಲಿ ಮಸ್ಕಿ ಕ್ಷೇತ್ರಕ್ಕೆ  ಮಾಜಿ ಶಾಸಕ ಪ್ರತಾಪ್ ಗೌಡ ಪಾಟೀಲ್, ಬಸವಕಲ್ಯಾಣಕ್ಕೆ ಮಾಜಿ ಶಾಸಕ ಮಲ್ಲಿಕಾರ್ಜುನ ಕೂಬಾ ಹಾಗೂ ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಮಾಜಿ ಸಚಿವ ಸುರೇಶ್ ಅಂಗಡಿಯವರ ಪುತ್ರಿ ಶ್ರದ್ಧಾ ಶೆಟ್ಟರ್ ಹೆಸರುಗಳ ಬಗ್ಗೆ ಚರ್ಚೆ ನಡೆದಿದೆ ಎನ್ನಲಾಗಿದೆ. 


ಇದಲ್ಲದೆ, ಅಭ್ಯರ್ಥಿ ಬಗ್ಗೆ ಸ್ಥಳೀಯ ನಾಯಕರ ಅಭಿಪ್ರಾಯವನ್ನು ಸಹ ಸಂಗ್ರಹಿಸಲಾಗಿದ್ದು, ಈ ಅಭಿಪ್ರಾಯವನ್ನು ಕೂಡಾ ಕೇಂದ್ರ ನಾಯಕರಿಗೆ ಕಳುಹಿಸಲಾಗಿದೆ.  ಈ ಎಲ್ಲಾ ಆಭಿಪ್ರಾಯಗಳನ್ನ ಪರಿಶೀಲಿಸಿದ ನಂತರ ಹೈ ಕಮಾಂಡ್ (High command)  ಪಟ್ಟಿ ಬಿಡುಗಡೆ ಮಾಡಲಿದೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಇನ್ನೇನು ಸೋಮವಾರ  ಅಥವಾ ಮಂಗಳವಾರ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿ (Candidate list) ಬಿಡುಗಡೆ ಮಾಡಲಿದೆ ಎನ್ನಲಾಗಿದೆ.  


ಇದನ್ನೂ ಓದಿ Belagavi Lok Sabha: ಬೆಳಗಾವಿ ಲೋಕಸಭೆ ಬೈ ಎಲೆಕ್ಷನ್: ಕಾಂಗ್ರೆಸ್ ಅಭ್ಯರ್ಥಿ ಹೆಸರು ಫೈನಲ್!


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.