Anti-conversion bill: ಮತಾಂತರ ನಿಷೇಧ ಮಸೂದೆಗೆ ರಾಜ್ಯ ಸಚಿವ ಸಂಪುಟ ಅನುಮೋದನೆ, ನಾಳೆಯೇ ಸದನದಲ್ಲಿ ವಿಧೇಯಕ ಮಂಡನೆ!

Anti-conversion bill: 'ಬಲವಂತದ' ಧಾರ್ಮಿಕ ಮತಾಂತರಕ್ಕೆ 10 ವರ್ಷಗಳವರೆಗೆ ಜೈಲು ಶಿಕ್ಷೆಯನ್ನು ಈ ಮಸೂದೆ ಪ್ರಸ್ತಾಪಿಸುತ್ತದೆ.

Edited by - Zee Kannada News Desk | Last Updated : Dec 20, 2021, 04:30 PM IST
  • ಕರ್ನಾಟಕ ಸಚಿವ ಸಂಪುಟ ಸಭೆ ಮುಕ್ತಾಯ
  • ಮತಾಂತರ ನಿಷೇಧ ಮಸೂದೆಗೆ ಅನುಮೋದನೆ
  • ನಾಳೆ ಸದನದಲ್ಲಿ ವಿಧೇಯಕ ಮಂಡನೆಯಾಗುವ ಸಾಧ್ಯತೆ
Anti-conversion bill: ಮತಾಂತರ ನಿಷೇಧ ಮಸೂದೆಗೆ  ರಾಜ್ಯ ಸಚಿವ ಸಂಪುಟ ಅನುಮೋದನೆ, ನಾಳೆಯೇ ಸದನದಲ್ಲಿ ವಿಧೇಯಕ ಮಂಡನೆ! title=
ಕರ್ನಾಟಕ ಸಚಿವ ಸಂಪುಟ ಸಭೆ ಮುಕ್ತಾಯ

ಬೆಳಗಾವಿ: ರಾಜ್ಯ ಸಚಿವ ಸಂಪುಟ (Cabinet Meeting) ಇಂದು (ಡಿ.20) ಮತಾಂತರ ನಿಷೇಧ ಮಸೂದೆಗೆ (Karnataka Anti Conversion Bill) ಅನುಮೋದನೆ ನೀಡಿದ್ದು, ನಡೆಯುತ್ತಿರುವ ವಿಧಾನಮಂಡಲದ ಅಧಿವೇಶನದಲ್ಲಿ ವಿಧೇಯಕ ಮಂಡನೆಗೆ ದಾರಿ ಮಾಡಿಕೊಟ್ಟಿದೆ.  

ನಾಳೆ (ಡಿ.21) ವಿಧಾನಸಭೆಯಲ್ಲಿ ಮತಾಂತರ ನಿಷೇಧ ವಿಧೇಯಕ ಮಂಡನೆಯಾಗುವ ಸಾಧ್ಯತೆ ಇದೆ. ಇಂದಿನ ಸಂಪುಟ ಸಭೆಯಲ್ಲಿ, ಸದನದಲ್ಲಿ ಮತಾಂತರ ನಿಷೇಧ ವಿಧೇಯಕ (Karnataka Anti Conversion Bill) ಮಂಡನೆಗೆ ಅನುಮೋದನೆ ದೊರೆತಿದೆ. 

'ಬಲವಂತದ' ಧಾರ್ಮಿಕ ಮತಾಂತರಕ್ಕೆ 10 ವರ್ಷಗಳವರೆಗೆ ಜೈಲು ಶಿಕ್ಷೆಯನ್ನು ಮಸೂದೆ ಪ್ರಸ್ತಾಪಿಸುತ್ತದೆ. 3 ರಿಂದ 5 ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು 25,000 ರೂ. ದಂಡ. ಅಪ್ರಾಪ್ತ, ಮಹಿಳೆ ಅಥವಾ SC/ST ವ್ಯಕ್ತಿಯನ್ನು ಒಳಗೊಂಡ ಮತಾಂತರಕ್ಕೆ 3 ರಿಂದ 10 ವರ್ಷಗಳ ಜೈಲು ಶಿಕ್ಷೆ, ರೂ 50,000 ದಂಡ ವಿಧಿಸಲು  ಮಸೂದೆ ಪ್ರಸ್ತಾಪಿಸುತ್ತದೆ.

ಇದನ್ನೂ ಓದಿ: ಎಂಇಎಸ್ ವಿರುದ್ಧ ಈ ಬಾರಿ ನಿರ್ಣಾಯಕ ಕ್ರಮ: ಗುಡುಗಿದ ಸಿಎಂ ಬೊಮ್ಮಾಯಿ

ಮತಾಂತರ ನಿಷೇಧ ಮಸೂದೆಯ ಪ್ರಕಾರ, ಯಾವುದೇ ವ್ಯಕ್ತಿ ಅಥವಾ ಸಮುದಾಯದ ಬಲವಂತದ ಮತಾಂತರ ಮಾಡುವಂತಿಲ್ಲ.  ವ್ಯಕ್ತಿ ಮತಾಂತರ ಹೊಂದಬೇಕಾದರೆ ಅಥವಾ  ನಡೆಸಬೇಕಾದರೂ ಸಕ್ಷಮ ಪ್ರಾಧಿಕಾರದ ಮುಂದೆ 2 ತಿಂಗಳ ಮೊದಲು ಅರ್ಜಿ ಸಲ್ಲಿಸಬೇಕು. ಮತಾಂತರ ಆಗಲು ಬಯಸುವ ವ್ಯಕ್ತಿಯ ಖಾಸಗಿತನ ಕಾಪಾಡಲು ಮತ್ತು ಧಾರ್ಮಿಕ ಹಕ್ಕನ್ನು ಕಾಪಾಡಲು ಮತಾಂತರ ಪ್ರಕ್ರಿಯೆ ಗೌಪ್ಯವಾಗಿಡುವಂತಿಲ್ಲ.

ಮತಾಂತರ ಪ್ರಕ್ರಿಯೆಯೊಳಗೆ ಯಾವುದೇ ವ್ಯಕ್ತಿಯನ್ನು ಬಲವಂತವಾಗಿ ತೊಡಗುವಂತೆ ಮಾಡಲು ಅವಕಾಶವಿಲ್ಲ. ಬಲವಂತದ ಮತಾಂತರ ಮಾಡುವ ಅಥವಾ ಮತಾಂತರಕ್ಕೆ ಪ್ರಚೋದನೆ ನೀಡುವ ವ್ಯಕ್ತಿಗೆ ಜಾಮೀನುರಹಿತ ಬಂಧನದ ಶಿಕ್ಷೆಗೆ ಒಳಪಡಿಸಲಾಗುತ್ತದೆ.

ಇದಲ್ಲದೆ, ಮತಾಂತರಕ್ಕೆ ಒಳಗಾದವರಿಗೆ 5 ಲಕ್ಷ ರೂಪಾಯಿಗಳವರೆಗೆ ಪರಿಹಾರವನ್ನು ನೀಡುವಂತೆ ಆರೋಪಿಗಳು ನ್ಯಾಯಾಲಯಕ್ಕೆ ಕೇಳಲು ಮಸೂದೆ ಅವಕಾಶ ನೀಡುತ್ತದೆ. ಸಾಮೂಹಿಕ ಮತಾಂತರಕ್ಕೆ 3-10 ವರ್ಷಗಳ ಜೈಲು ಶಿಕ್ಷೆ ಮತ್ತು ರೂ 1 ಲಕ್ಷದವರೆಗೆ ದಂಡ ವಿಧಿಸಲಾಗುತ್ತದೆ.

ಈ ಮಸೂದೆಯು ವಿರೋಧ ಪಕ್ಷಗಳು ಸೇರಿದಂತೆ ಹಲವರ ವಿರೋಧಕ್ಕೆ ಗುರಿಯಾಗಿದೆ. ಅಲ್ಲದೆ ರಾಜ್ಯಾದ್ಯಂತ ಭಾರೀ ಚರ್ಚೆಗೆ ಒಳಗಾಗಿದೆ.

ಇದನ್ನೂ ಓದಿ: ಕರುನಾಡಿಗೆ Omicron ಆಪತ್ತು: ಹೊಸ ವರ್ಷದ ಸಂಭ್ರಮಾಚರಣೆಗೆ ಬೀಳುತ್ತಾ ಬ್ರೇಕ್! ಜಾರಿಯಾಗುತ್ತಾ ನೈಟ್ ಕರ್ಫ್ಯೂ?

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News