ಚಿತ್ರದುರ್ಗ: ಸಂಪುಟ ವಿಸ್ತರಣೆಯಾಗಬೇಕಾದರೆ ನಾವು ಕಾಯಲೇಬೇಕು ಅದು ಯಾವಾಗ ನಡೆಯಲಿದೆ ಎಂಬುದನ್ನು ನೋಡೋಣ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ಪರೋಕ್ಷವಾಗಿ ಸಂಪುಟ ವಿಸ್ತರಣೆ ಇನ್ನಷ್ಟು ವಿಳಂಬವಾಗುವ ಮುನ್ಸೂಚನೆಯನ್ನು ನೀಡಿದ್ದಾರೆ.


COMMERCIAL BREAK
SCROLL TO CONTINUE READING

ಇದರಿಂದ ನಾಳೆ ಸಚಿವರಾಗುತ್ತೇವೆ ಎಂದು ಆಸೆಯಿಟ್ಟುಕೊಂಡಿದ್ದ ಆಕಾಂಕ್ಷಿಗಳಿಗೆ ನಿರಾಸೆಯಾಗಿದೆ. ಬಿಜೆಪಿಯಲ್ಲಿ ಈಗಾಗಲೇ ಬಂಡಾಯದ ಕಾವು ಏರತೊಡಗಿದೆ. ಉಪಚುನಾವಣೆಯಲ್ಲಿ ಗೆಲುವು ಕಂಡಿರುವ ಶಾಸಕರಿಗೆ ಸೇರಿದಂತೆ ಹಲವು ಶಾಸಕರು ಮಂತ್ರಿಸ್ಥಾನಕ್ಕಾಗಿ ಸಿಎಂ ಯಡಿಯೂರಪ್ಪ(B.S. Yediyurappa)ನವರ ಮುಂದೆ ಬೇಡಿಕೆ ಇಟ್ಟಿದ್ದಾರೆ.


ಸಿಎಂ ಸ್ಥಾನದಿಂದ ಬಿಎಸ್‌ವೈ ಇಳಿಸಲು ಹೈಕಮಾಂಡ್‌ ಪ್ಲ್ಯಾನ್..!?


ಕಾಂಗ್ರೆಸ್, ಜೆಡಿಎಸ್ ಪಕ್ಷಗಳನ್ನು ತೊರೆದು ಬಂದು, ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲು ಕಾರಣರಾದ ವಲಸಿಗರ ಬೇಡಿಕೆಗೂ ಇಲ್ಲವೆನ್ನಲಾಗದೆ, ಮೂಲ ಬಿಜೆಪಿಗರ ವಿರೋಧವನ್ನೂ ಕಟ್ಟಿಕೊಳ್ಳಲಾಗದೆ ಸಿಎಂ ಯಡಿಯೂರಪ್ಪ ಚಡಪಡಿಸುತ್ತಿದ್ದಾರೆ.


ಡಿಕೆಶಿ ವಿರುದ್ಧ 'ಹೊಸ ಬಾಂಬ್' ಸಿಡಿಸಿದ ಹೆಚ್ ಡಿಕೆ!


ಮೂಲಗಳ ಪ್ರಕಾರ ಡಿ.15ರಂದು ಅವೇಶನದ ಮುಗಿಯುವವರೆಗೂ ಸಂಪುಟ ವಿಸ್ತರಣೆ ಪ್ರಕ್ರಿಯೆಗಳು ನಡೆಯುವ ಸಾಧ್ಯತೆ ಇಲ್ಲ ಎನ್ನಲಾಗಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣಾ ಪ್ರಚಾರದಲ್ಲಿ ನಿರತರಾಗಿರುವುದರಿಂದ ಅವರ ಭೇಟಿಯೂ ಸಾಧ್ಯವಾಗುತ್ತಿಲ್ಲ. ಇನ್ನು ಬಿಜೆಪಿ ಡಿ.3 ಮತ್ತು 4ರಂದು ಗ್ರಾಮ ಸ್ವರಾಜ್ ಅಭಿಯಾನ ಹಮ್ಮಿಕೊಂಡಿರುವುದರಿಂದ ಪಕ್ಷದ ಬಹುತೇಕ ಪ್ರಮುಖ ನಾಯಕರು ಅದರಲ್ಲಿ ತೊಡಗಿಕೊಳ್ಳುತ್ತಾರೆ.


ಮತ್ತೆ ನಾಯಕತ್ವ ಬದಲಾವಣೆಯ ಕೂಗು!? ದಿಲ್ಲಿಯಲ್ಲಿ ಬೀಡುಬಿಟ್ಟ ಬಿಜೆಪಿ ಅತೃಪ್ತರ ತಂಡ!


ಡಿ.5ರಂದು ಬೆಳಗಾವಿಯಲ್ಲಿ ಪಕ್ಷದ ವಿಶೇಷ ಕಾರ್ಯಕ್ರಮ ವಿರುವುದರಿಂದ ಅಲ್ಲಿಯೂ ಎಲ್ಲಾ ನಾಯಕರು ಪಾಲ್ಗೊಳ್ಳುವರು. ಈಗಾಗಲೇ ಪಕ್ಷದ ಅಕೃತಕಾರ್ಯಕ್ರಮಗಳು ನಿಗದಿಯಾಗಿರುವುದರಿಂದ ಸಂಪುಟ ವಿಸ್ತರಣೆ ಗಗನ ಕುಸುಮವಾಗಿಯೇ ಉಳಿದಿದೆ. ಡಿ.7ರಿಂದ 15ರವರೆಗೆ ಚಳಿಗಾಲದ ಅವೇಶನ ನಿಗದಿಯಾಗಿದೆ. ಹೀಗೆ ಸರಣಿ ಸಭೆಗಳು ನಡೆಯುತ್ತಿರುವುದರಿಂದ ಸಂಪುಟ ವಿಸ್ತರಣೆ ಸದ್ಯಕ್ಕಂತೂ ಆಗುವುದು ಕನಸಿನ ಮಾತಾಗಿದೆ.


CM ರಾಜಕೀಯ ಕಾರ್ಯದರ್ಶಿ ಆತ್ಮಹತ್ಯೆ ಯತ್ನ: ಸ್ಪೋಟಕ ಮಾಹಿತಿ ಬಿಚ್ಚಿಟ್ಟ ಡಿಕೆಶಿ!