ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ(Karnataka Cabinet Expansion)ಕಸರತ್ತು ಕೊನೆಯ ಹಂತಕ್ಕೆ ಬಂದು ತಲುಪಿದೆ. ದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ನಾಯಕರನ್ನು ಭೇಟಿ ಮಾಡಿ ಚರ್ಚಿಸಿರುವ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ(Basavaraj Bommai)ಇಂದು ಬೆಂಗಳೂರಿಗೆ ವಾಪಸ್ ಆಗಮಿಸುತ್ತಿದ್ದಾರೆ. ಬರುವಾಗ ಅವರು ನೂತನ ಸಚಿವರ ಪಟ್ಟಿಯನ್ನು ತೆಗೆದುಕೊಂಡು ಬರಲಿದ್ದಾರೆ ಎಂದು ಹೇಳಲಾಗುತ್ತಿದೆ. ಯಾರ್ಯಾರಿಗೆ ಮಂತ್ರಿಸ್ಥಾನ ನೀಡಬೇಕೆಂಬುದರ ಅಂತಿಮ ಪಟ್ಟಿ ಇಂದು ಸಂಜೆ ಬಿಡುಗಡೆಯಾಗುವ ನಿರೀಕ್ಷೆ ಇದೆ.  


COMMERCIAL BREAK
SCROLL TO CONTINUE READING

ಹೈಕಮಾಂಡ್ ನಾಯಕರು ಮತ್ತು ಸಿಎಂ ಬೊಮ್ಮಾಯಿ ನಡುವೆ ದೆಹಲಿಯಲ್ಲಿ ಮಹತ್ವದ ಚರ್ಚೆ ನಡೆದಿದೆ. ಸಂಪುಟಕ್ಕೆ ಯಾರನ್ನು ತೆಗೆದುಕೊಳ್ಳಬೇಕು, ಯಾರನ್ನು ಬಿಡಬೇಕು ಎಂಬುದರ ಕುರಿತು ಮಾತುಕತೆಯಾಗಿದೆ ಎಂದು ಹೇಳಲಾಗುತ್ತಿದೆ. ಬೊಮ್ಮಾಯಿ(Basavaraj Bommai)ಯವರು ತೆಗೆದುಕೊಂಡು ಬಂದಿದ್ದ ಲಿಸ್ಟ್ ಪರಿಶೀಲಿಸಿದ ಬಿಜೆಪಿ ವರಿಷ್ಠರು ಕೆಲವರ ಹೆಸರುಗಳನ್ನು ಕೈಬಿಡುವಂತೆ ಸಿಎಂಗೆ ಸೂಚಿಸಿದ್ದಾರೆಂದು ತಿಳಿದು ಬಂದಿದೆ. ಬಹುಮುಖ್ಯವಾಗಿ ನೂತನ ಸಂಪುಟದಲ್ಲಿ ಕಿರಿಯರಿಗೆ ಅವಕಾಶ ನೀಡುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಹೀಗಾಗಿ ಬೊಮ್ಮಾಯಿ ಸಂಪುಟದಲ್ಲಿ ಹಿರಿಯರಿಗೆ ಕೋಕ್ ನೀಡುವ ಸಾಧ್ಯತೆ ಇದೆ.


ಇದನ್ನೂ ಓದಿ: ಅನಾಥೆಯನ್ನು ಮಗಳಂತೆ ಸಾಕಿ ಹಿಂದೂ ಸಂಪ್ರದಾಯದಂತೆ ಮದುವೆ ಮಾಡಿಕೊಟ್ಟ ಮುಸ್ಲಿಂ ವ್ಯಕ್ತಿ!


ಸಂಪುಟಕ್ಕೆ ಹಿರಿಯರ ಎಂಟ್ರಿ ಬೇಡ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ(JP Nadaa) ಸಿಎಂಗೆ ಸೂಚಿಸಿದ್ದಾರಂತೆ. ಆದರೆ ಹೈಕಮಾಂಡ್ ಮನವೊಲಿಸಲು ಬೊಮ್ಮಾಯಿ ಪ್ರಯತ್ನಿಸಿದ್ದಾರೆ. ಹಿರಿಯರನ್ನು ಕೈಬಿಟ್ಟು ಹೊಸ ತಂಡ ಕಟ್ಟಿಕೊಂಡು ಕೆಲಸ ಮಾಡಿ ಎಂದು ಸಿಎಂಗೆ ಹೈಕಮಾಂಡ್ ನಾಯಕರು ಸೂಚಿಸಿದ್ದಾರೆಂದು ತಿಳಿದುಬಂದಿದೆ. ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಪುತ್ರ ಬಿ.ವೈ.ವಿಜಯೇಂದ್ರ ಸಂಪುಟ ಸೇರುವ ಬಗ್ಗೆಯೂ ಜೆ.ಪಿ.ನಡ್ಡಾ ಮತ್ತು ಬೊಮ್ಮಾಯಿ ನಡುವೆ ಮಾತುಕತೆಯಾಗಿದ್ದು, ಈ ಬಗ್ಗೆ ಯಾವುದೇ ಅಂತಿಮ  ನಿರ್ಣಯವಾಗಿಲ್ಲವೆಂದು ತಿಳಿದುಬಂದಿದೆ.  


ಡಿಸಿಎಂ ಪಟ್ಟಕ್ಕೆ ಘಟಾನುಘಟಿಗಳ ಪೈಪೋಟಿ!


ಸಂಪುಟ ವಿಸ್ತರಣೆ ಸರ್ಕಸ್ ಮಧ್ಯೆ ಡಿಸಿಎಂ ಪಟ್ಟಕ್ಕೆ ಘಟಾನುಘಟಿಗಳ ಮಧ್ಯೆ ಭಾರೀ ಪೈಪೋಟಿ ನಡೆಯುತ್ತಿದೆ. ಅನೇಕರು ಉಪಮುಖ್ಯಮಂತ್ರಿ ಸ್ಥಾನಕ್ಕಾಗಿ ಲಾಬಿ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ. ಆರ್.ಅಶೋಕ್(R Ashok) ಪರ ಸಿಎಂ ಬೊಮ್ಮಾಯಿ ಬ್ಯಾಟಿಂಗ್ ಮಾಡಿದ್ದಾರಂತೆ. ಆದರೆ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ್ ಪರ ಹೈಕಮಾಂಡ್ ಒಲವು ತೋರಿದೆಯಂತೆ. ಈ ಇಬ್ಬರು ಒಕ್ಕಲಿಗ ನಾಯಕರ ಮಧ್ಯೆ ಒಂದೇ ಹುದ್ದೆಗೆ ತೀವ್ರ ಪೈಪೋಟಿ ನಡೆಯುತ್ತಿದೆಯಂತೆ. ಇನ್ನೂ ಕೆಲ ನಾಯಕರು ಕೂಡ ತಮ್ಮನ್ನು ಡಿಸಿಎಂ(DCM) ಹುದ್ದೆಗೆ ಪರಿಗಣಿಸುವಂತೆ ಒತ್ತಡ ಹೇರುತ್ತಿದ್ದಾರೆಂದು ತಿಳಿದುಬಂದಿದೆ. ಇದು ಹೈಕಮಾಂಡ್ ಗೆ ದೊಡ್ಡ ತಲೆನೋವಾಗಿದ್ದು, ಡಿಸಿಎಂ ಹುದ್ದೆ ಸೃಷ್ಟಿ ವಿಚಾರವನ್ನೇ ಕೈಬಿಡುವ ಚಿಂತನೆ ನಡೆದಿದೆ ಎಂಬ ಮಾತುಗಳು ಕೇಳಿಬರುತ್ತಿವೆ.


ಇದನ್ನೂ ಓದಿ:  Karnataka Weather: ರಾಜ್ಯದ ಈ ಭಾಗಗಳಲ್ಲಿ ಮಳೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ


ಯಾರಿಗೆ ಸಿಗಲಿದೆ ಮಂತ್ರಿಸ್ಥಾನ..?


ಬೊಮ್ಮಾಯಿ ಕ್ಯಾಬಿನೆಟ್(Bommai Cabinet)ಸೇರಲು ಬಿಜೆಪಿ ಶಾಸಕರು, ಮಾಜಿ ಸಚಿವರು ಭರ್ಜರಿ ಲಾಬಿ ನಡೆಸುತ್ತಿದ್ದಾರೆ. ಈಗಾಗಲೇ ಅನೇಕರು ಸಿಎಂ ಭೇಟಿಯಾಗಿದ್ದು, ತಮ್ಮನ್ನು ಪರಿಗಣಿಸುವಂತೆ ಮನವಿ ಮಾಡಿದ್ದಾರೆ. ಇನ್ನು ಕೆಲವರು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ. ಕೆಲವರು ಹೈಕಮಾಂಡ್ ಮೇಲೆಯೇ ಒತ್ತಡ ಹೇರುವ ಪ್ರಯತ್ನ ನಡೆಸುತ್ತಿದ್ದಾರೆ. ಹೀಗಾಗಿ ನೂತನ ಸಂಪುಟದಲ್ಲಿ ಯಾರ್ಯಾರಿಗೆ ಮಂತ್ರಿಸ್ಥಾನ ಸಿಗುತ್ತದೆ ಅನ್ನೋದು ಕುತೂಹಲ ಮೂಡಿಸಿದೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ