ಕರ್ನಾಟಕ ಸಚಿವ ಸಂಪುಟ ಸಭೆ:ಆಶಾ ಕಾರ್ಯಕರ್ತೆಯರಿಗೆ 1,000 ರೂ. ಪ್ರೋತ್ಸಾಹ ಧನ, ಜಾತಿ ಜನಗಣತಿ ವರದಿ ಬಗ್ಗೆ ಮಹತ್ವದ ಚರ್ಚೆ

 ಸಿದ್ದರಾಮಯ್ಯ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿದೆ.ಇಂದಿನ ಸಭೆಯಲ್ಲಿ ಕೆಲವು ಮಹತ್ವದ ವಿಚಾರಗಳು ಚರ್ಚೆಯಾಗಲಿವೆ.  

Written by - Ranjitha R K | Last Updated : May 9, 2025, 10:46 AM IST
  • ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿದೆ.
  • ಜಾತಿ‌ಜನಗಣತಿ ಬಗ್ಗೆ ಇಂದಿನ ಸಭೆಯಲ್ಲಿ ಮಹತ್ವದ ಚರ್ಚೆ
  • ಆಶಾ ಕಾರ್ಯಕರ್ತೆಯರಿಗೆ 1,000 ರೂ. ಪ್ರೋತ್ಸಾಹ ಧನದ ಬಗ್ಗೆಯೂ ಚರ್ಚೆ
ಕರ್ನಾಟಕ ಸಚಿವ ಸಂಪುಟ ಸಭೆ:ಆಶಾ ಕಾರ್ಯಕರ್ತೆಯರಿಗೆ 1,000 ರೂ. ಪ್ರೋತ್ಸಾಹ ಧನ, ಜಾತಿ ಜನಗಣತಿ ವರದಿ ಬಗ್ಗೆ ಮಹತ್ವದ ಚರ್ಚೆ

ಬೆಂಗಳೂರು : ಇಂದು ಮಹತ್ವದ ಸಚಿವ ಸಂಪುಟ ಸಭೆ ನಡೆಯಲಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಯುವ ಸಂಪುಟ ಸಭೆ ನಡೆಯಲಿದೆ. ಸಭೆಯಲ್ಲಿ ನಡೆಯಲಿದೆ ಜಾತಿ‌ಜನಗಣತಿ ಬಗ್ಗೆ ಮಹತ್ವದ ಚರ್ಚೆಯಾಗಲಿದೆ. ಕೇಂದ್ರದಿಂದ ಜನಗಣತಿ ಘೋಷಣೆ ನಡುವೆಯೇ ರಾಜ್ಯ ಹಿಂದುಳಿದ ವರ್ಗ ಆಯೋಗ ನಡೆಸಿರುವ ಸಮೀಕ್ಷೆ ಬಗ್ಗೆ ಗಂಭೀರ ಚರ್ಚೆ ನಡೆಯಲಿದೆ.  

Add Zee News as a Preferred Source

ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿದೆ. ಇಂದಿನ ಸಭೆಯಲ್ಲಿ ಕೆಲವು ಮಹತ್ವದ ವಿಚಾರಗಳು ಚರ್ಚೆಯಾಗಲಿವೆ. 
ಜಾತಿ‌ಜನಗಣತಿ ಬಗ್ಗೆ ಇಂದಿನ ಸಭೆಯಲ್ಲಿ ಮಹತ್ವದ ಚರ್ಚೆ ನಡೆಯಲಿದೆ. 
ಒಬಿಸಿ,ಎಸ್ಸಿ/ಎಸ್ಟಿ ಸಮುದಾಯಗಳ ಸಚಿವರಿಂದ ಜಾತಿ‌ಜನಗಣತಿ   ವರದಿ ಅಂಗೀಕಾರಕ್ಕೆ ಒತ್ತಡ ಹೆಚ್ಚುವ ಸಾಧ್ಯತೆ ಇದೆ. 

ಇದನ್ನೂ ಓದಿ : ಗಾಲಿ ಜನಾರ್ಧನ ರೆಡ್ಡಿ ಶಾಸಕ ಸ್ಥಾನದಿಂದ ಅನರ್ಹ : ವಿಧಾನ ಸಭೆ ಕಾರ್ಯದರ್ಶಿಯಿಂದ ವಿಶಾಲಾಕ್ಷಿ ಆದೇಶ

ಇನ್ನು ಒಕ್ಕಲಿಗ, ಲಿಂಗಾಯತ ಸಚಿವರಿಂದ ವರದಿಯ ಅಂಕಿ, ಅಂಶಗಳ ಬಗ್ಗೆ ಆಕ್ಷೇಪ ವ್ಯಕ್ತವಾಗುವ ಸಾಧ್ಯತೆಯೂ ಇದೆ. ಆಕ್ಷೇಪಣೆಗಳನ್ನ ಲಿಖಿತವಾಗಿ ಸಲ್ಲಿಸುವಂತೆ  ಕಳೆದ ಸಂಪುಟ ಸಭೆಯಲ್ಲಿ ಸೂಚಿಸಿದ್ದ ಸಿಎಂ ಸಿದ್ದರಾಮಯ್ಯ ಸೂಚಿಸಿದ್ದರು. ಆದರೆ,ಈವರೆಗೂ ಯಾವುದೇ ಸಚಿವರಿಂದ ಆಕ್ಷೇಪಣೆ ಸಲ್ಲಿಕೆಯಾಗಿಲ್ಲ. ಅದಲಾಗಿ ವರದಿ ಕುರಿತು ವ್ಯಾಜ್ಯ ಕೋರ್ಟ್ ಮೆಟ್ಟಿಲೇರಿದೆ. ಈ ಸಂಬಂಧ ಅಭಿಪ್ರಾಯ ತಿಳಿಸುವಂತೆ ಸರ್ಕಾರಕ್ಕೆ ನ್ಯಾಯಾಲಯ ಸೂಚನೆ ನೀಡಿದೆ. 

ಈ ಹಿನ್ನೆಲೆಯಲ್ಲಿ ಅಂತಿಮವಾಗಿ ಸಂಪುಟ ಸಭೆಯಲ್ಲಿ ವರದಿ ಅಂಗೀಕರಿಸಿ ಕೇಂದ್ರಕ್ಕೆ ಶಿಫಾರಸ್ಸು ಮಾಡಲು ಸಿಎಂ  ಸಿದ್ದರಾಮಯ್ಯ ಯತ್ನಿಸುತ್ತಿದ್ದಾರೆ. ಇದೀಗ ಸಿಎಂ ಹಾಗೂ ಎಸ್ಸಿ ಎಸ್ಟಿ/ಒಬಿಸಿ ಸಚಿವರ ಆಗ್ರಹಕ್ಕೆ ಒಪ್ಪಿಗೆ ಸಿಗುತ್ತಾ..ಇಲ್ಲವಾ ಎನ್ನುವುದು ಕುತೂಹಲ ಮೂಡಿಸಿದೆ. 

ಇದನ್ನೂ ಓದಿ : ರಾಜ್ಯದ ಎಲ್ಲಾ ಅಣೆಕಟ್ಟುಗಳಿಗೆ ಭದ್ರತೆಗೆ ಸೂಚನೆ

ಇದೇ ವೇಳೆ,  ಆಶಾ ಕಾರ್ಯಕರ್ತೆಯರಿಗೆ 1,000 ರೂ. ಪ್ರೋತ್ಸಾಹ ಧನ ನೀಡುವ ಬಗ್ಗೆಯೂ ಚರ್ಚೆ ನಡೆಯಲಿದೆ. ಆಶಾ ಕಾರ್ಯಕರ್ತೆಯರಿಗೆ ಇಂದಿನ ಸಭೆಯಲ್ಲಿ ಒಂದು ಸಾವಿರ ಪ್ರೋತ್ಸಾಹ ಧನ ಬಿಡುಗಡೆ ಮಾಡುವ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಿದೆ. 

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ

About the Author

Ranjitha R K

ರಂಜಿತಾ ಆರ್.ಕೆ ಪ್ರಸ್ತುತ `ಜೀ ಕನ್ನಡ ನ್ಯೂಸ್‌' ವೆಬ್‌ನಲ್ಲಿ ಚೀಫ್ ಸಬ್ ಎಡಿಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮ ಕ್ಷೇತ್ರದಲ್ಲಿ 19 ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿರುವ ಇವರು 2020 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ರಾಜಕೀಯ, ಬ್ಯುಸಿನೆಸ್, ಟೆಕ್ನಾಲಜಿ, ಹೆಲ್ತ್ ಅಂಡ್ ಲೈಫ್ ಸ್ಟೈಲ್, ಸ್ಪಿರಿಚ್ಯುವಲ್ ವಿಭಾಗಗಲ್ಲಿ ಆಸಕ್ತಿಕರ ಲೇಖನಗಳನ್ನು ಒದಗಿಸುವ ಅನುಭವವನ್ನು ಹೊಂದಿರುತ್ತಾರೆ. 2006ರಲ್ಲಿ ʼರಾಮೋಜಿ ಗ್ರೂಪ್‌ʼನ ಈಟಿವಿ  ಕನ್ನಡ ವಾಹಿನಿಯಿಂದ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು, ನಂತರ ಜನಶ್ರೀ, ಸಮಯ, ಸುವರ್ಣ ವಾಹಿನಿಗಳಲ್ಲಿಯೂ ಕಾರ್ಯ ನಿರ್ವಹಿಸಿದ್ದಾರೆ. ...Read More

Trending News