ರಾಜಕೀಯ ಬೆಳವಣಿಗೆಗಳನ್ನಾಧರಿಸಿ ನನ್ನ ಪರವಾಗಿ ಹೇಳಿಕೆ ನೀಡಬೇಡಿ-ಬಿಎಸ್ವೈ

ಕಳೆದ ವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾದ ನಂತರ ನಿರ್ಗಮನ ವದಂತಿಗಳ ಒತ್ತಡದ ಮಧ್ಯೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ಸಂಜೆ ಬಿಜೆಪಿಯಲ್ಲಿ ತಮ್ಮ ಸಹೋದ್ಯೋಗಿಗಳಿಗೆ ಯಾವುದೇ ಅಶಿಸ್ತು ತೋರದಂತೆ ಮನವಿ ಮಾಡಿದ್ದಾರೆ.

Written by - Zee Kannada News Desk | Last Updated : Jul 21, 2021, 10:08 PM IST
  • ಕಳೆದ ವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾದ ನಂತರ ನಿರ್ಗಮನ ವದಂತಿಗಳ ಒತ್ತಡದ ಮಧ್ಯೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ಸಂಜೆ ಬಿಜೆಪಿಯಲ್ಲಿ ತಮ್ಮ ಸಹೋದ್ಯೋಗಿಗಳಿಗೆ ಯಾವುದೇ ಅಶಿಸ್ತು ತೋರದಂತೆ ಮನವಿ ಮಾಡಿದ್ದಾರೆ.
  • ಸಿಎಂ ಯಡಿಯೂರಪ್ಪನವರ ಈ ಟ್ವೀಟ್ ಪ್ರಮುಖವಾಗಿ ಮಠಾಧೀಪತಿಗಳು ಹಾಗೂ ಕಾಂಗ್ರೆಸ್ ಪಕ್ಷದ ನಾಯಕರು ಅವರಿಗೆ ಬೆಂಬಲ ನೀಡುತ್ತಿರುವ ಸಂದರ್ಭದಲ್ಲಿ ಬಂದಿದೆ.
ರಾಜಕೀಯ ಬೆಳವಣಿಗೆಗಳನ್ನಾಧರಿಸಿ ನನ್ನ ಪರವಾಗಿ ಹೇಳಿಕೆ ನೀಡಬೇಡಿ-ಬಿಎಸ್ವೈ  title=
ಸಂಗ್ರಹ ಚಿತ್ರ

ಬೆಂಗಳೂರು: ಕಳೆದ ವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾದ ನಂತರ ನಿರ್ಗಮನ ವದಂತಿಗಳ ಒತ್ತಡದ ಮಧ್ಯೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ಸಂಜೆ ಬಿಜೆಪಿಯಲ್ಲಿ ತಮ್ಮ ಸಹೋದ್ಯೋಗಿಗಳಿಗೆ ಯಾವುದೇ ಅಶಿಸ್ತು ತೋರದಂತೆ ಮನವಿ ಮಾಡಿದ್ದಾರೆ.

ಸಿಎಂ ಯಡಿಯೂರಪ್ಪ (BS Yediyurappa) ನವರ ಈ ಟ್ವೀಟ್ ಪ್ರಮುಖವಾಗಿ ಮಠಾಧೀಪತಿಗಳು ಹಾಗೂ ಕಾಂಗ್ರೆಸ್ ಪಕ್ಷದ ನಾಯಕರು ಅವರಿಗೆ ಬೆಂಬಲ ನೀಡುತ್ತಿರುವ ಸಂದರ್ಭದಲ್ಲಿ ಬಂದಿದೆ.

ಇದನ್ನೂ ಓದಿ: ರಾಜ್ಯದ ನಾಯಕತ್ವದಲ್ಲಿ ಯಾವುದೇ ಬದಲಾವಣೆ ಇಲ್ಲ-ಸದಾನಂದ ಗೌಡ

ತಮ್ಮನ್ನು ನಿಷ್ಠಾವಂತ ಕಾರ್ಯಕರ್ತ ಎಂದು ಕರೆದುಕೊಂಡಿರುವ ಅವರು ಪಕ್ಷದ ಗೌರವಕ್ಕೆ ಚ್ಯುತಿ ತರದಿರಲು ಮನವಿ ಮಾಡಿಕೊಂಡಿದ್ದಾರೆ."ರಾಜಕೀಯ ಬೆಳವಣಿಗೆಗಳನ್ನಾಧರಿಸಿ ನನ್ನ ಪರವಾಗಿ ಹೇಳಿಕೆ, ಪ್ರತಿಭಟನೆಗಳಿಗೆ ಯಾರೂ ಮುಂದಾಗಬಾರದೆಂದು ವಿನಂತಿಸುತ್ತೇನೆ. ಅಭಿಮಾನ ಶಿಸ್ತಿನ ವ್ಯಾಪ್ತಿ ಮೀರಬಾರದು.ಪಕ್ಷ ನನಗೆ ಮಾತೃ ಸಮಾನ,ಅದರ ಗೌರವಕ್ಕೆ ಚ್ಯುತಿ ತರುವ ಘಟನೆಗಳು ನನಗೆ ಅತೀವ ನೋವು ತರುತ್ತದೆ. ನಿಜವಾದ ಹಿತೈಷಿಗಳು ಈ ನಿಟ್ಟಿನಲ್ಲಿ ನನ್ನ ಭಾವನೆಗೆ ಸ್ಪಂದಿಸುತ್ತಾರೆಂದು ನಂಬಿರುವೆ" ಎಂದು ಅವರು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಬಿ.ಎಸ್.ಯಡಿಯೂರಪ್ಪ ಬದಲಾದರೆ ಬಿಜೆಪಿಗೆ ದೊಡ್ಡ ಹೊಡೆತ: ಮಠಾಧಿಪತಿಗಳ ಖಡಕ್ ಎಚ್ಚರಿಕೆ..!

ಬಿಜೆಪಿಯ ಉನ್ನತ ನಾಯಕರನ್ನು ಭೇಟಿ ಮಾಡಲು ಮುಖ್ಯಮಂತ್ರಿ ಕಳೆದ ವಾರ ದೆಹಲಿಗೆ ಹೋದಾಗ ಅವರು ತಮ್ಮ ಹುದ್ದೆಯಲ್ಲಿ ಎಷ್ಟು ದಿನ ಮುಂದುವರಿಯುತ್ತಾರೆ ಎಂಬ ಪ್ರಶ್ನೆಗಳು ಎದ್ದಿದ್ದವು.ಆದರೆ ಈ ವಿಚಾರದ ಬಗ್ಗೆ ಅವರನ್ನು ಕೇಳಿದಾಗ ಇದರಲ್ಲಿ ಯಾವುದೇ ಸತ್ಯವಿಲ್ಲ ಎಂದು ಹೇಳಿ ನಿರಾಕರಿಸಿದ್ದರು.ದಕ್ಷಿಣ ಭಾರತದ ಬಿಜೆಪಿಯ ಮೊದಲ ಮತ್ತು ಏಕೈಕ ಮುಖ್ಯಮಂತ್ರಿಯಾಗಿದ್ದ ಯಡಿಯೂರಪ್ಪ ಅವರು ಜುಲೈ 2019 ರಲ್ಲಿ ಕಾಂಗ್ರೆಸ್-ಜನತಾದಳ (ಜಾತ್ಯತೀತ) ಒಕ್ಕೂಟದಿಂದ ಅಧಿಕಾರ ವಹಿಸಿಕೊಂಡ ನಂತರ ಸುಮಾರು ಎರಡು ವರ್ಷ ಮುಖ್ಯಮಂತ್ರಿಯಾಗಿ ಅಧಿಕಾರ ಅವಧಿಯನ್ನು ಪೂರೈಸಿದ್ದಾರೆ.

ಇದನ್ನೂ ಓದಿ: BS Yediyurappa : ನಾಯಕತ್ವದ ಬದಲಾವಣೆ ಮಧ್ಯ ಬಿಜೆಪಿ ಶಾಸಕರಿಗೆ ಭೋಜನ ಕೂಟ ಕರೆದ ಸಿಎಂ ಬಿಎಸ್‌ವೈ

ಇನ್ನೊಂದೆಡೆಗೆ ಈಗ ಅವರ ಪಕ್ಷದಲ್ಲಿಯೇ ಯಡಿಯೂರಪ್ಪನವರ ವಿರುದ್ಧವಾಗಿ ಹೇಳಿಕೆಗಳನ್ನು ನೀಡುತ್ತಿದ್ದಾರೆ.ಪಕ್ಷದ ಎಚ್ಚರಿಕೆ ನಡುವೆಯೂ ಕೂಡ ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್, ಪ್ರವಾಸೋದ್ಯಮ ಸಚಿವ ಸಿ.ಪಿ. ಯೋಗೇಶ್ವರ ಮತ್ತು ಎಚ್.ವಿಶ್ವನಾಥ್ ಸೇರಿದಂತೆ ಕೆಲವು ನಾಯಕರು ಯಡಿಯೂರಪ್ಪನವರ ವಿರುದ್ಧ ಬಹಿರಂಗ ಹೇಳಿಕೆ ನೀಡುತ್ತಿದ್ದಾರೆ. 

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

 

Trending News