ಬೆಂಗಳೂರು: ಸಿಎಂ ಯಡಿಯೂರಪ್ಪಗೆ ಕೊರೊನಾ ಸೋಂಕು ತಗುಲಿರುವುದು ಧೃಡಪಟ್ಟಿದೆ. ಈ ವಿಷಯವನ್ನು ಸ್ವತಃ ಅವರೇ ತಮ್ಮ ಅಧಿಕೃತ ಟ್ವಿಟ್ಟರ್ ನಲ್ಲಿ ತಿಳಿಸಿದ್ದಾರೆ.


COMMERCIAL BREAK
SCROLL TO CONTINUE READING

"ನನ್ನ ಕೊರೋನಾ ಪರೀಕ್ಷಾ ವರದಿಯಲ್ಲಿ ಪಾಸಿಟಿವ್ ಎಂದು ಬಂದಿದ್ದು, ರೋಗಲಕ್ಷಣಗಳು ಇಲ್ಲದಿದ್ದರೂ ಮುನ್ನೆಚ್ಚರಿಕೆ ದೃಷ್ಟಿಯಿಂದ, ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ. ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದಿರುವವರು, ಕ್ವಾರಂಟೈನ್ ನಲ್ಲಿದ್ದು ಮುಂಜಾಗ್ರತೆ ವಹಿಸಿ ಎಂದು ಕೋರುತ್ತೇನೆ' ಎಂದು ಟ್ವೀಟ್ ಮಾಡಿದ್ದಾರೆ.



ಈಗ ಅವರ ಸಹೋದ್ಯೋಗಿ ಶಾಸಕರು ಹಾಗೂ ಸಚಿವರು ಬಿಎಸ್ವೈ ಅವರಿಗೆ ಶೀಘ್ರ ಗುಣಮುಖವಾಗಲಿ ಎಂದು ಹಾರೈಸಿದ್ದಾರೆ. ರಾಜ್ಯದ ವೈದಕೀಯ ಸಚಿವ ಡಾ.ಸುಧಾಕರ್.ಕೆ  "ಹುಟ್ಟು ಹೋರಾಟಗಾರರು, ಜನನಾಯಕರು, ರಾಜ್ಯದ ಜನಪ್ರಿಯ ಮುಖ್ಯಮಂತ್ರಿಗಳಾದ ಶ್ರೀ  @BSYBJP ರವರಿಗೆ ಕೊರೋನಾ ಪಾಸಿಟಿವ್ ಬಂದಿದ್ದು, ಆದಷ್ಟು ಬೇಗನೆ ಅವರು ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ. ರಾಜ್ಯದ ಜನತೆಯ ಹಾರೈಕೆ, ಪ್ರಾರ್ಥನೆಗಳು ನಿಮ್ಮೊಂದಿಗಿದೆ. ಶೀಘ್ರದಲ್ಲಿ ಚೇತರಿಸಿಕೊಂಡು ಮತ್ತೆ ಎಂದಿನಂತೆ ಕರ್ತವ್ಯದಲ್ಲಿ ತೊಡಗಿಕೊಳ್ಳಲಿದ್ದೀರಿ ಎಂದು ಟ್ವೀಟ್ ಮಾಡಿದ್ದಾರೆ