ಬೆಂಗಳೂರು : ಅಧರ್ಮದ-ಅಮಾನವೀಯ ಕೆಲಸ ಮಾಡಿ ನಾಟಕೀಯವಾಗಿ ಪೂಜೆ ಮಾಡಿದರೆ ಆ ಪೂಜೆಯನ್ನು ದೇವರು ಒಪ್ಪಿಕೊಳ್ಳಲ್ಲ. ಸಕಲ ಜೀವಗಳೂ ಸಮಾನತೆ, ಪ್ರೀತಿಯಿಂದ ಬಾಳಬೇಕು ಎನ್ನುವುದು ಆದರ್ಶ ಶ್ರೀರಾಮ ಆಶಯ ಎಂದು ಮುಖ್ಯಮಂತ್ರಿ  ಸಿದ್ದರಾಮಯ್ಯ ಹೇಳಿದರು.  


COMMERCIAL BREAK
SCROLL TO CONTINUE READING

ಬಿದರಹಳ್ಳಿ ಹೋಬಳಿಯ, ಹಿರಂಡಹಳ್ಳಿ ಶ್ರೀರಾಮ ಟೆಂಪಲ್ ಟ್ರಸ್ಟ್ ನಿರ್ಮಿಸಿದ್ದ ಸಕುಟುಂಬ ಸಮೇತನಾಗಿರುವ ರಾಮ ಸೀತ ಲಕ್ಷ್ಮಣ ದೇವಾಲಯ ಹಾಗೂ 33 ಅಡಿ ಎತ್ತರದ ಏಕಶಿಲಾ ಆಂಜನೇಯ ಸ್ವಾಮಿ ವಿಗ್ರಹದ ಶಿಲಾ ಪ್ರತಿಷ್ಠಾಪನಾ ಕಾರ್ಯಕ್ರಮವನ್ನು ಉದ್ಘಾಟಿಸಿ, ಬಳಿಕ ಮಹಾ ಕುಂಭಾಭಿಷೇಕದಲ್ಲಿ ಪಾಲ್ಗೊಂಡು ಮಾತನಾಡಿದರು. 


ಇದನ್ನೂ ಓದಿ: PINEWZ Launch: ರಾಮಮಂದಿರ ಪ್ರಾಣ ಪ್ರತಿಷ್ಠಾಪನೆ ಸಂದರ್ಭದಲ್ಲಿ ಹೊಸ ಆಪ್ ಬಿಡುಗಡೆ ಮಾಡಿದ ಡಾ.ಸುಭಾಷ್ ಚಂದ್ರ 


ನಾನು ನಾಸ್ತಿಕನಲ್ಲ-ಆಸ್ತಿಕ. ನಮ್ಮೂರಲ್ಲೂ ರಾಮನ ಗುಡಿ ಕಟ್ಟಿಸಿದ್ದೇನೆ. ರಾಜ್ಯದ ಹಳ್ಳಿ ಹಳ್ಳಿಗಳಲ್ಲೂ ರಾಮನ ಗುಡಿಗಳು ಇವೆ. ಪ್ರತಿಯೊಬ್ಬರೂ ಅವರವರ ನಂಬಿಕೆಯಂತೆ ರಾಮನನ್ನು ಪೂಜಿಸುತ್ತಾತ್ತೇವೆ, ಗುಡಿ ಕಟ್ಟುತ್ತೇವೆ,  ಪೂಜಿಸುತ್ತೇವೆ ಎಂದರು. 


ಯಾವುದೇ ಧರ್ಮ ಜಾತಿ-ಧರ್ಮ ಆಧಾರದ ಮನುಷ್ಯ ದ್ವೇಷವನ್ನು ಹೇಳುವುದಿಲ್ಲ. ಶ್ರೀರಾಮ ಸಮಾಜಮುಖಿ ಆಗಿದ್ದರು. ಒಬ್ಬ ಮಡಿವಾಳನ ಮಾತಿಗೂ ಬೆಲೆ ಕೊಟ್ಟರು. ಪಿತೃವಾಕ್ಯ ಪರಿಪಾಲನೆಗೆ ವನವಾಸಕ್ಕೆ ಹೋದರು. ಶ್ರೀರಾಮ, ಲಕ್ಷ್ಮಣ, ಸೀತೆ, ಆಂಜನೇಯರನ್ನು ಬೇರ್ಪಡಿಸಲು ಸಾಧ್ಯವಿಲ್ಲ. ಇವರೆಲ್ಲಾ ಸಕುಟುಂಬಸ್ಥರು ಎಂದು ವಿವರಿಸಿದರು. 


ಕುವೆಂಪು ಅವರ ಸರ್ವ ಜನಾಂಗದ ಶಾಂತಿಯ ತೋಟ ಎನ್ನುವ ಆಶಯ ಶ್ರೀರಾಮನ ಆದರ್ಶ ಮತ್ತು ವ್ಯಕ್ತಿತ್ವದಲ್ಲಿದೆ. ಮನುಷ್ಯ ಮನುಷ್ಯನನ್ನು ದ್ವೇಷಿಸಬಾರದು ಎನ್ನುವುದೇ ರಾಮಾಯಣ, ಮಹಾಭಾರತದ ಸಂದೇಶ ಎಂದು ವಿವರಿಸಿದರು. 


ಇದನ್ನೂ ಓದಿ: ರಾಮನ ಎದುರು ಭಾವುಕರಾಗಿ ಸಾಷ್ಟಾಂಗ ನಮಸ್ಕಾರ ಹಾಕಿದ ಪ್ರಧಾನಿ ಮೋದಿ‌ 


ಪರಿಶಿಷ್ಠ ಪಂಗಡ ಸಮುದಾಯದ ವಾಲ್ಮೀಕಿ ಅವರು ರಾಮಾಯಣವನ್ನು ಬರೆದು ವಿಶ್ವಕ್ಕೆ ಕೊಟ್ಟರು. ದೇವರು ನಮ್ಮ ಆತ್ಮ ಮತ್ತು ಶರೀರದಲ್ಲೇ ಇದ್ದಾನೆ ಎಂದು ಬಸವಣ್ಣನವರು ನುಡಿದರು.  ದೇಹವೇ ದೇಗುಲ ಎನ್ನುವ ಸಂದೇಶವನ್ನು ಮನುಷ್ಯ ಪ್ರಪಂಚಕ್ಕೆ ನೀಡಿದ್ದಾರೆ ಎಂದು ವಚನಗಳನ್ನು ಉದಾಹರಿಸಿದರು. 


ಜೈ ಶ್ರೀರಾಮ್ ಎನ್ನುವುದು ಯಾರದ್ದೋ ಖಾಸಗಿ ಸ್ವತ್ತಲ್ಲ. ಅದು ಪ್ರತಿಯೊಬ್ಬ ಭಕ್ತರ ಸ್ವತ್ತು ಎನ್ನುತ್ತಾ ತಾವೂ ಜೈ ಶ್ರೀರಾಮ್ ಘೋಷಣೆ ಕೂಗಿ ನೆರೆದಿದ್ದ ಸಾರ್ವಜನಿಕರಿಗೂ ಘೋಷಣೆ ಕೂಗಿಸಿದರು. 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.