ಮೈಸೂರು : ನಮ್ಮಲ್ಲಿ ಒಳಜಗಳ ಇಲ್ಲ. ಹಾಗಿದ್ದಿದ್ದರೆ ಲೋಕಸಭಾ ಚುನಾವಣೆಯಲ್ಲಿ ಒಗ್ಗಟ್ಟಿನಿಂದ ಕೆಲಸ ಮಾಡಲು ಸಾಧ್ಯವಾಗುತ್ತಿರಲಿಲ್ಲ ಎಂದು  ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದಲ್ಲಿ  ಜಗಳವಾಗಿ ಸರ್ಕಾರ ಪತನವಾಗಲಿದೆ ಎಂದು ಬಿಜೆಪಿ ನಾಯಕರು ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಅವರು ರಾಜಕೀಯವಾಗಿ ಹೇಳಿಕೆ ನೀಡುತ್ತಿದ್ದಾರೆ  ಎಂದರು.  


COMMERCIAL BREAK
SCROLL TO CONTINUE READING

ಪರಿಷತ್ ಚುನಾವಣೆಯ ವಾತಾವರಣ ಉತ್ತಮವಾಗಿದ್ದು,  ಈ ಬಾರಿ ಕಾಂಗ್ರೆಸ್ ಪಕ್ಷ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿದೆ. ಅದಕ್ಕಾಗಿ ಅಭ್ಯರ್ಥಿಗಳನ್ನು ಆರು ತಿಂಗಳು ಮುಂಚಿತವಾಗಿಯೇ ಆಯ್ಕೆ ಮಾಡಲಾಗಿತ್ತು. ಅಭ್ಯರ್ಥಿಗಳಿಗೆ ಸಮಯ ಸಿಕ್ಕು, ಮತದಾರರನ್ನು ಭೇಟಿಯಾಗಲು ಅವಕಾಶ ದೊರೆಯಿತು ಎಂದರು. 


ಮೈತ್ರಿ ಪರಿಣಾಮ ಚುನಾವಣೆಯ ಮೇಲೆ ಆಗಲಿದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ ಲೋಕಸಭೆ ಚುನಾವಣೆಯಲ್ಲಿಯೂ ಕೆಡಿಎಎ ಬಿಜೆಪಿ ಮೈತ್ರಿ ಮಾಡಿಕೊಂಡಿದ್ದು, ಯಾವುದೇ ಪರಿಣಾಮ ಬೀರುವುದಿಲ್ಲ ಎಂದರು.


ಇದನ್ನೂ ಓದಿ: ರಾಜಧಾನಿ ಬೆಂಗಳೂರಿನಲ್ಲಿ ಮುಂದಿನ ಐದು ದಿನ ಬಿರುಗಾಳಿ ಸಹಿತ ಮಳೆ:ಈ ಜಿಲ್ಲೆಗಳಲ್ಲಿಯೂ ಅಬ್ಬರಿಸಲಿದ್ದಾನೆ ವರುಣ


ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣ ಚುನಾವಣೆಯ ಮೇಲೆ ಪರಿಣಾಮ ಬೀರಲಿದೆಯೇ ಎಂಬ ಪ್ರಶ್ನೆಗೆ ಉತ್ತರ ನೀಡಿ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಮತದಾರರು ರಾಜಕೀಯವಾಗಿ ಪ್ರಬುದ್ಧರಾಗಿರುವವರು ಯಾವುದು ಸರಿ, ತಪ್ಪು ಎನ್ನುವ ಬಗ್ಗೆ ಅರಿವು ಹೊಂದಿದವರು. ಕೇಂದ್ರ ಸರ್ಕಾರದ ಸಾಧನೆಗಳು  ಹಾಗೂ ನಮ್ಮ ಸರ್ಕಾರದ ಸಾಧನೆಗಳ ಬಗ್ಗೆ ತುಲನೆ ಮಾಡುವ ಶಕ್ತಿ ಅವರಿಗಿದೆ ಎಂದರು.


ಬೇರೆ ರಾಜ್ಯಗಳ ಚುನಾವಣೆಯ ಪ್ರಚಾರಕ್ಕೆ ತೆರಳುವ ಬಗ್ಗೆ ಮಾತನಾಡಿ ಪ್ರಚಾರಕ್ಕೆ ಆಹ್ವಾನ ಬಂದಿದೆ ಎಂದರು. 


ಕುಮಾರಸ್ವಾಮಿಯವರದ್ದು ಸದಾ ಹಿಟ್ ಅಂಡ್ ರನ್ ಕೇಸ್. ಮಹಾರಾಷ್ಟ್ರ ಸಿಎಂ ಕರ್ನಾಟಕ ಸರ್ಕಾರ ಪತನವಾಗುವ ಬಗ್ಗೆ ಮಾತನಾಡಿ ನಮ್ಮ ಸರ್ಕಾರದ ಬಗ್ಗೆ ಮಾತನಾಡುವ ಬದಲು ಅವರ ಸರ್ಕಾರವನ್ನು ಮೊದಲು ಉಳಿಸಿಕೊಳ್ಳಲಿ ಎಂದರು.


ಇದನ್ನೂ ಓದಿ: ದೇಶದಲ್ಲಿ ಇಂಡಿಯಾ ಒಕ್ಕೂಟದ ಸರ್ಕಾರ ರಚನೆ ಆಗಲಿದೆ: ಡಿಸಿಎಂ ಡಿ.ಕೆ. ಶಿವಕುಮಾರ್ ವಿಶ್ವಾಸ 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.