ಬೆಂಗಳೂರು: ಕರ್ನಾಟಕದ ಕಾಲೇಜುಗಳು ಹಿಜಾಬ್ (Headscarf) ವಿಚಾರದಲ್ಲಿ ಅನಗತ್ಯ ವಿವಾದ ಸೃಷ್ಟಿಸುತ್ತಿದ್ದು, ಮುಸ್ಲಿಮರ ಧಾರ್ಮಿಕ ಸ್ವಾತಂತ್ರ್ಯವನ್ನು ಉಲ್ಲಂಘಿಸುತ್ತಿವೆ ಎಂದು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ (Popular Front of India) ಕರ್ನಾಟಕ ರಾಜ್ಯ ಪ್ರಧಾನ ಕಾರ್ಯದರ್ಶಿ ನಾಸಿರ್ ಪಾಷಾ ಭಾನುವಾರ ಆರೋಪಿಸಿದ್ದಾರೆ.
ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ (PFI) ಕರ್ನಾಟಕ ರಾಜ್ಯ ಪ್ರಧಾನ ಕಾರ್ಯದರ್ಶಿ ನಾಸಿರ್ ಪಾಷಾ (Nasir Pasha) ಅವರು ರಾಜ್ಯದ ವಿವಿಧ ಕಾಲೇಜುಗಳಲ್ಲಿ ಚಾಲ್ತಿಯಲ್ಲಿರುವ ಹಿಜಾಬ್ ವಿವಾದಗಳ ಕುರಿತು, "ಕೆಲವು ಕಾಲೇಜುಗಳು ಹಿಜಾಬ್ ಬಗ್ಗೆ ಅನಗತ್ಯ ವಿವಾದಗಳನ್ನು ಸೃಷ್ಟಿಸುತ್ತಿವೆ ಮತ್ತು ಮುಸ್ಲಿಮರ ಮೂಲಭೂತ, ಧಾರ್ಮಿಕ ಸ್ವಾತಂತ್ರ್ಯವನ್ನು ಉಲ್ಲಂಘಿಸುತ್ತಿವೆ" ಎಂದು ಹೇಳಿದ್ದಾರೆ.
ಇದನ್ನೂ ಓದಿ: ಸಂಪುಟ ವಿಸ್ತರಣೆಗೆ ಅಂಕಿತ ಪಡೆಯಲು ಶೀಘ್ರದಲ್ಲೇ ದೆಹಲಿಗೆ ಸಿ ಎಂ ಬೊಮ್ಮಾಯಿ
ಉಡುಪಿಯ ಸರ್ಕಾರಿ ಪಿಯು ಕಾಲೇಜಿನಲ್ಲಿ ತಲೆಗೆ ರುಮಾಲು ಧರಿಸಿದ್ದ ಕಾರಣಕ್ಕೆ 6 ಮುಸ್ಲಿಂ ಸಮುದಾಯದ ವಿದ್ಯಾರ್ಥಿಗಳಿಗೆ ತರಗತಿಗೆ ಪ್ರವೇಶ ನಿರಾಕರಿಸಿ ಹೊರಗೆ ಕೂರಿಸಲಾಗಿದೆ. ಇದನ್ನು ಅನುಸರಿಸಿ ಮಂಗಳೂರಿನ ಐಕಳದ ಪೊಂಪೈ ಕಾಲೇಜಿನ ಕೆಲವು ವಿದ್ಯಾರ್ಥಿಗಳು ಕೇಸರಿ ಶಾಲು ಹಾಕಿಕೊಂಡು ಕಾಲೇಜಿಗೆ ಬಂದು ಹಿಜಾಬ್ ನಿಷೇಧಿಸುವಂತೆ ಒತ್ತಾಯಿಸಿದರು ಎಂದು ಆರೋಪಿಸಿದ್ದಾರೆ.
ಚಿಕ್ಕಮಗಳೂರಿನ ಕೊಪ್ಪದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿಯೂ ಇಂತಹದ್ದೇ ವಿವಾದ ಸೃಷ್ಟಿಯಾಗಿದ್ದು, ವಾಸ್ತವಿಕವಾಗಿ ಎಸ್‌ಎಸ್‌ಎಲ್‌ಸಿವರೆಗೆ ಮಾತ್ರ ವಸ್ತ್ರ ಸಂಹಿತೆ ಕಡ್ಡಾಯವಾಗಿ ಜಾರಿಯಲ್ಲಿದೆ ಎಂದು ಹೇಳಿದ್ದಾರೆ.
ಹಿಜಾಬ್ (hijab) ಧರಿಸಿ ತರಗತಿಗೆ ಪ್ರವೇಶಿಸಲು ಕಾಲೇಜಿನ ಪ್ರಾಂಶುಪಾಲರು ನಿರಾಕರಿಸಿರುವುದು ಅತ್ಯಂತ ಅಸಮಂಜಸ ಕ್ರಮವಾಗಿದೆ. ಪ್ರಮುಖವಾಗಿ, ಮುಸ್ಲಿಂ ಸಮುದಾಯದ ವಿದ್ಯಾರ್ಥಿಗಳು ಕಾಲೇಜಿನಲ್ಲಿ ಅಸ್ತಿತ್ವದಲ್ಲಿರುವ ಬಟ್ಟೆ ನೀತಿಯನ್ನು ಅನುಸರಿಸಿ ತರಗತಿಗಳಿಗೆ ಹಾಜರಾಗುತ್ತಿದ್ದಾರೆ ಎಂದಿದ್ದಾರೆ.
ನಾವು ಧರಿಸುವ ಬಟ್ಟೆಯ ಮೂಲಕ ಸಮಾನತೆಯನ್ನು ತರಲು ಅಸಾಧ್ಯವಾಗಿದೆ. ಆಂತರಿಕ ಪೂರ್ವಾಗ್ರಹದಿಂದ ಹಿಜಾಬ್ ಬಗ್ಗೆ ವಿವಾದಗಳನ್ನು ಸೃಷ್ಟಿಸುವ ಬದಲು, ಅಧ್ಯಯನ ಮಾಡುವುದು ಒಳಿತು. ಮೌಲ್ಯಾಧಾರಿತ, ಗುಣಮಟ್ಟದ ಶಿಕ್ಷಣವನ್ನು ಒದಗಿಸುವುದು ಮುಖ್ಯ ಎಂದು ನಾಸಿರ್ ಪಾಷಾ ಹೇಳಿದ್ದಾರೆ.
ಇದನ್ನೂ ಓದಿ: ಕೊರೊನಾ ಸಮಯದಲ್ಲಿ ವಿಶ್ವದ 10 ಶ್ರೀಮಂತರ ಸಂಪತ್ತು ದ್ವಿಗುಣ, ಇಲ್ಲಿದೆ ಆ ಬಿಲಿಯನೇರ್‌ಗಳ ಪಟ್ಟಿ
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.