Laxman Savadi : 'ಟೂರಿಸ್ಟ್ ವಾಹನ ಮಾಲೀಕ'ರಿಗೆ ಗುಡ್ ನ್ಯೂಸ್..! 

ಈ ಕುರಿತು ಮಾಹಿತಿ ನೀಡಿದ ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ್ ಸವದಿ

Last Updated : May 31, 2021, 11:45 AM IST
  • ವಾಹನ ಚಾಲಕರಿಗೆ ರಾಜ್ಯ ಸರ್ಕಾರ ವಿಶೇಷ ಆರ್ಥಿಕ ಪ್ಯಾಕೇಜ್
  • 3 ಸಾವಿರ ರೂ. ಪರಿಹಾರಧನ ಘೋಷಣೆ ಮಾಡಿ
  • ಇದರ ನಂತ್ರ, ಮತ್ತೊಂದು ಗುಡ್ ನ್ಯೂಸ್ ನೀಡಿದೆ
Laxman Savadi : 'ಟೂರಿಸ್ಟ್ ವಾಹನ ಮಾಲೀಕ'ರಿಗೆ ಗುಡ್ ನ್ಯೂಸ್..!  title=

ಬೆಂಗಳೂರು : ಲಾಕ್ ಡೌನ್ ನಿಂದಾಗಿ ಸಂಕಷ್ಟಕ್ಕೆ ಒಳಗಾಗಿರುವ ಆಟೋ, ಟ್ಯಾಕ್ಸಿ ಹಾಗೂ ಮ್ಯಾಕ್ಸಿ ಕ್ಯಾಬ್ ಚಾಲಕರಿಗೆ ರಾಜ್ಯ ಸರ್ಕಾರ ವಿಶೇಷ ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡಿದೆ. 3 ಸಾವಿರ ರೂ. ಪರಿಹಾರಧನ ಘೋಷಣೆ ಮಾಡಿ, ಸಿಹಿಸುದ್ದಿ ನೀಡಿತ್ತು. ಇದರ ನಂತ್ರ, ಮತ್ತೊಂದು ಗುಡ್ ನ್ಯೂಸ್ ನೀಡಿದೆ. 

ಇದನ್ನೂ ಓದಿ : Heavy Rainfall in Karnataka : ಜೂ. 3ಕ್ಕೆ ಮುಂಗಾರು ಪ್ರವೇಶ; ನಾಳೆಯಿಂದ ರಾಜ್ಯದಲ್ಲಿ ಭಾರೀ ಮಳೆ!

ಹೌದ.. ಪ್ರಯಾಣಿಕ ವಾಹನಗಳಿಗೆ ಮೇ, 2021ರ ತೆರಿಗೆ ಪಾವತಿಯಿಂದ ವಿನಾಯಿತಿ ಘೋಷಿಸಿಸಿದೆ. ಈ ಕುರಿತು ಮಾಹಿತಿ ನೀಡಿದ ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ್ ಸವದಿ(Laxman Savadi), ಕೋವಿಡ್-19ರ 2ನೇ ಅಲೆಯ ಹಿನ್ನೆಲೆಯಲ್ಲಿ ಸರ್ಕಾರವು ಪ್ರಯಾಣಿಕ ವಾಹನ ಸಂಚಾರಕ್ಕೆ ನಿರ್ಬಂಧಗಳನ್ನು ವಿಧಿಸಿ ಆದೇಶಿಸಿರುವುದರಿಂದ ಇದೊಂದು ವಿಶೇಷ ಪ್ರಕರಣವೆಂದು ಪರಿಗಣಿಸಿ ಕರ್ನಾಟಕ ಮೋಟಾರು ವಾಹನ ತೆರಿಗೆ(Motor Vehicle Tax) ಕಾಯ್ದೆ 1957ರ ಕಲಂ16(1) ರನ್ವಯ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ರಾಜ್ಯದಲ್ಲಿ ನೊಂದಾಯಿಸಿರುವ (ಹೊಸ ವಾಹನಗಳ ನೋಂದಣಿಯನ್ನು ಹೊರತುಪಡಿಸಿ) ಎಲ್ಲಾ ಸಾರಿಗೆ ಪ್ರಯಾಣಿಕ ವಾಹನಗಳಿಗೆ ಮಾತ್ರ ಅನ್ವಯಿಸುವಂತೆ ಮೇ 2021ರ ಮಾಹೆಯ ಒಂದು ತಿಂಗಳ ಅವಧಿಗೆ ಮೋಟಾರು ವಾಹನ ತೆರಿಗೆ ಪಾವತಿಯಿಂದ ವಿನಾಯಿತಿ ನೀಡಿ ಆದೇಶಿಸಲಾಗಿದೆ ಎಂದು ತಿಳಿಸಿದ್ದಾರೆ. ಈ ಮೂಲಕ ಪ್ರವಾಸಿ ವಾಹನ(Tourist Vehicle) ಮಾಲೀಕರಿಗೆ ಗುಡ್ ನ್ಯೂಸ್ ನೀಡಿದ್ದಾರೆ.

ಇದನ್ನೂ ಓದಿ : ರಾಜ್ಯದ ಇಬ್ಬರು ಮಕ್ಕಳಲ್ಲಿ ಕಪ್ಪು ಶೀಲಿಂದ್ರ ಸೋಂಕು ಪತ್ತೆ

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

Trending News