Karnataka Politics: ದೆಹಲಿಗೆ ರಾಜ್ಯ ಕಾಂಗ್ರೆಸ್ ನಾಯಕರ ದಂಡು; ಬಣ ರಾಜಕೀಯ ಶಮನಕ್ಕೆ ಹೈಕಮಾಂಡ್ ಸರ್ಕಸ್
Karnataka congress leaders in delhi: ಸದ್ಯ ಕಾಂಗ್ರೆಸ್ ನಲ್ಲಿ ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಬಣ ಇದೆ. ಇದರಿಂದ ಉಭಯ ನಾಯಕರ ನಡುವೆ ಮುಕುಕಿನ ಗುದ್ದಾಟ ಹೆಚ್ಚಾಗುತ್ತಲೇ ಇದೆ, ಚುನಾವಣೆಯ ಹೊಸ್ತಿಲಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಸಿದ್ದು - ಡಿಕೆಶಿ ಆಂತರಿಕ ಕಚ್ಚಾಟಕ್ಕೆ ಬ್ರೇಕ್ ಹಾಕಬೇಕಾದ ಅನಿವಾರ್ಯತೆ ಎದುರಾಗಿದೆ. ಹೀಗಾಗಿ ಹೈಕಮಾಂಡ್ ನಿಂದ ಒಗ್ಗಟ್ಟಿನ ಪಾಠ ಬೋಧನೆ ಮಾಡಿಸಲಿದ್ದು, ಒಗ್ಗಟ್ಟು ಮೂಡಿಸಲು ಸಮನ್ವಯ ಸಮಿತಿ ರಚನೆ ಬಗ್ಗೆ ಪ್ರಸ್ತಾಪಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಬೆಂಗಳೂರು: ಇಂದು ಮದ್ಯಾಹ್ನ 3:30ಕ್ಕೆ ರಾಜ್ಯ ಕಾಂಗ್ರೆಸ್ ನಾಯಕರೊಂದಿಗೆ ರಾಹುಲ್ ಗಾಂಧಿ ಸಭೆ ನಡೆಸಲಿದ್ದು, 2023 ಚುನಾವಣೆ ಸೇರಿದಂತೆ ಹಿಜಾಬ್ ವಿವಾದ ಹಾಗೂ ಶಿವಮೊಗ್ಗ ಕೋಮುಗಲಭೆ ವಿಚಾರಗಳನ್ನು ಚರ್ಚೆ ನಡೆಸಲಿದ್ದಾರೆ. ಈ ಹಿನ್ನಲೆಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ, ಪರಿಷತ್ ವಿಪಕ್ಷ ನಾಯಕ ಬಿಕೆ ಹರಿಪ್ರಸಾದ್, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಎಂಬಿ ಪಾಟೀಲ್ ಸೇರಿದಂತೆ 15 ನಾಯಕರು ಡೆಲ್ಲಿಗೆ ತಲುಪಿದ್ದಾರೆ.
ಬಣ ರಾಜಕೀಯಕ್ಕೆ ಬ್ರೇಕ್ ಹಾಕಲು ಪ್ರಯತ್ನ; ಯುದ್ಧ ವಿರಾಮ ನೀಡುತ್ತಾರಾ ವರಿಷ್ಠರು?
ಸದ್ಯ ಕಾಂಗ್ರೆಸ್ ನಲ್ಲಿ ಡಿಕೆ ಶಿವಕುಮಾರ್ (DK Shivakumar) ಮತ್ತು ಸಿದ್ದರಾಮಯ್ಯ (Siddaramaiah) ಬಣ ಇದೆ. ಇದರಿಂದ ಉಭಯ ನಾಯಕರ ನಡುವೆ ಮುಕುಕಿನ ಗುದ್ದಾಟ ಹೆಚ್ಚಾಗುತ್ತಲೇ ಇದೆ, ಚುನಾವಣೆಯ ಹೊಸ್ತಿಲಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಸಿದ್ದು - ಡಿಕೆಶಿ ಆಂತರಿಕ ಕಚ್ಚಾಟಕ್ಕೆ ಬ್ರೇಕ್ ಹಾಕಬೇಕಾದ ಅನಿವಾರ್ಯತೆ ಎದುರಾಗಿದೆ. ಹೀಗಾಗಿ ಹೈಕಮಾಂಡ್ ನಿಂದ ಒಗ್ಗಟ್ಟಿನ ಪಾಠ ಬೋಧನೆ ಮಾಡಿಸಲಿದ್ದು, ಒಗ್ಗಟ್ಟು ಮೂಡಿಸಲು ಸಮನ್ವಯ ಸಮಿತಿ ರಚನೆ ಬಗ್ಗೆ ಪ್ರಸ್ತಾಪಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಇದನ್ನೂ ಓದಿ- ಮೊರಾರ್ಜಿ ಹಾಗೂ ಇತರ ವಸತಿ ಶಾಲೆಗಳ ಪ್ರವೇಶಕ್ಕಾಗಿ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ
ಹಿಜಾಬ್ ವಿವಾದ, ಕೋಮು ಗಲಭೆ:
ಇಂದು ಕಾಂಗ್ರೆಸ್ (Congress) ವರಿಷ್ಠರೊಂದಿಗಿನ ಸಭೆಯಲ್ಲಿ ಪ್ರಸ್ತುತ ರಾಜ್ಯದಲ್ಲಿ ನಡೆಯುತ್ತಿರುವ ಹಿಜಾಬ್ ವಿವಾದವನ್ನು ಹೇಗೆ ನಿಭಾಯಿಸಬೇಕು. ಪಕ್ಷಕ್ಕೆ ಡ್ಯಾಮೇಜ್ ಆಗದ ರೀತಿಯಲ್ಲಿ ಬಿಜೆಪಿಗೆ ತಿರುಗೇಟು ನೀಡುವ ಬಗ್ಗೆ ಚರ್ಚೆ ಆಗಲಿದೆ. ಇದರ ಜೊತೆಗೆ ಶಿವಮೊಗ್ಗ ಹರ್ಷ ಹತ್ಯೆ ಪ್ರಕರಣದಲ್ಲಿ ಸರ್ಕಾರ ನಡೆದುಕೊಂಡ ರೀತಿಯನ್ನು ಹೈಕಮಾಂಡ್ ಗೆ ತಿಳಿಸಲಿರುವ ಕೈ ಪಡೆ, ಸರ್ಕಾರದ ಮೇಲೆ ಸವಾರಿ ಹೇಗೆ ನಡೆಸುತ್ತೇವೆ ಎಂದು ಹೇಳಲಿದ್ದಾರೆ.
ರಾಜಕೀಯ ಅಸ್ತ್ರವಾಗಿ ಈಶ್ವರಪ್ಪ ಹೇಳಿಕೆ:
ಸಚಿವ ಕೆ.ಎಸ್. ಈಶ್ವರಪ್ಪ (KS Eshwarappa) ಕೊಟ್ಟ ರಾಷ್ಟ್ರಧ್ವಜದ ಹೇಳಿಕೆಯನ್ನು ಚುನಾವಣೆ ಸಂದರ್ಭದಲ್ಲಿ ರಾಜಕೀಯ ಅಸ್ತ್ರವಾಗಿ ಹೇಗೆ ಬಳಕೆ ಮಾಡಿಕೊಳ್ಳಬಹುದು ಎಂಬ ಬಗ್ಗೆಯೂ ಇಂದಿನ ಸಭೆಯಲ್ಲಿ ಚರ್ಚಿಸುವ ಸಾಧ್ಯತೆ ಇದೇ ಎಂದು ಹೇಳಲಾಗುತ್ತಿದೆ.
ಇದನ್ನೂ ಓದಿ- Hijab row:ರಾಜ್ಯ ಸರ್ಕಾರದಿಂದ CFI ಬಗ್ಗೆ ವಿವರಗಳನ್ನು ಕೇಳಿದ ಕರ್ನಾಟಕ ಹೈಕೋರ್ಟ್
2023ರ ಕರ್ನಾಟಕ ವಿಧಾನಸಭಾ ಚುನಾವಣೆ:
ಇದಲ್ಲದೆ, ಮೈತ್ರಿ ಸರ್ಕಾರವನ್ನು ಉರುಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಕೆಲ ನಾಯಕರು ಪಕ್ಷಕ್ಕೆ ವಾಪಸ್ ಮರಳಳಿದ್ದಾರೆ ಎಂದು ಹೇಳಲಾಗುತ್ತಿದ್ದು, ಈ ಬಗ್ಗೆ ಸಮಾಲೋಚನೆ ನಡೆಯುವ ಸಾಧ್ಯತೆ ಇದೆ. ಪಕ್ಷಕ್ಕೆ ಯಾರು ವಾಪಸ್ ಬರ್ತಾರೆ, ಅವರಿಂದ ಪಕ್ಷಕ್ಕೆ ಆಗಬಹುದಾದ ಲಾಭದ ಲೆಕ್ಕಾಚಾರ ಹಾಕುವ ಸಾಧ್ಯತೆ ಇದೆ.
ಒಟ್ಟಾರೆಯಾಗಿ ಮುಂಬರುವ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಜೊತೆ ರಾಜ್ಯ ಕಾಂಗ್ರೆಸ್ ನಾಯಕರ ಇಂದಿನ ಸಭೆ ಬಹಳ ಮಹತ್ವದ್ದಾಗಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.