ರಾಜ್ಯಪಾಲರ ಕಚೇರಿಯನ್ನೇ ಯಮಾರಿಸುವಷ್ಟು BJPಯ ನಕಲಿ ಪತ್ರಕೋರರು ನಿಷ್ಣಾತರಾಗಿದ್ದಾರೆ!: ಕಾಂಗ್ರೆಸ್
N Chaluvaraya Swamy bribery case: ನಕಲಿ ಪೆನ್ ಡ್ರೈವ್ ಆಯ್ತು, ಶಾಸಕ ಬಿ.ಆರ್.ಪಾಟೀಲ್ ಹೆಸರಿನ ನಕಲಿ ಪತ್ರ ಆಯ್ತು, ಈಗ ಅಧಿಕಾರಿಗಳ ಹೆಸರಲ್ಲಿ ನಕಲಿ ದೂರು! ಸರ್ಕಾರವನ್ನು ಎದುರಿಸಲು ಅಸಲಿ ವಿಷಯಗಳಿಲ್ಲದೆ ವಿಪಕ್ಷಗಳು ನಕಲಿ ವಿಷಯ ಸೃಷ್ಟಿಸಿ ಹೆದರಿಸಲು ಮುಂದಾಗಿವೆ ಎಂದು ಕಾಂಗ್ರೆಸ್ ಕಿಡಿಕಾರಿದೆ.
ಬೆಂಗಳೂರು: ಲಂಚದ ಆರೋಪದಡಿ ಕೃಷಿ ಸಚಿವ ಎನ್.ಚೆಲುವರಾಯಸ್ವಾಮಿ ವಿರುದ್ಧ ಮಂಡ್ಯ ಜಿಲ್ಲೆಯ ಕೃಷಿ ಅಧಿಕಾರಿಗಳು ರಾಜ್ಯಪಾಲರಿಗೆ ಬರೆದಿದ್ದಾರೆ ಎನ್ನಲಾಗಿರುವ ಪತ್ರದ ಕುರಿತು ಸಿಐಡಿ ತನಿಖೆ ನಡೆಸಲು ಸರ್ಕಾರ ತೀರ್ಮಾನಿಸಿದೆ. ಈ ವಿಚಾರವಾಗಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಟ್ವೀಟ್ ವಾರ್ ನಡೆಯುತ್ತಿದೆ.
ಬಿಜೆಪಿ ಆರೋಪಕ್ಕೆ ತಿರುಗೇಟು ನೀಡಿರುವ ಕಾಂಗ್ರೆಸ್ ಮಂಗಳವಾರ ಸರಣಿ ಟ್ವೀಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿದೆ. ‘ರಾಜ್ಯಪಾಲರ ಕಚೇರಿಯನ್ನೇ ಯಮಾರಿಸುವಷ್ಟು ಬಿಜೆಪಿಯ ನಕಲಿ ಪತ್ರಕೋರರು ನಿಷ್ಣಾತರಾಗಿದ್ದಾರೆ! ಈ ಹಿಂದೆ ಸಂತೋಷ್ ಪಾಟೀಲ್ ಎಂಬ ಗುತ್ತಿಗೆದಾರ ಬರೆದ ಅಸಲಿ ಪತ್ರದ ಬಗ್ಗೆ ಚಕಾರ ಎತ್ತದ ಬಿಜೆಪಿ ಆತನ ಸಾವಿಗೆ ಕಾರಣವಾಗಿತ್ತು. ನಕಲಿ ಪತ್ರದ ಬಗ್ಗೆ ಪ್ರತಾಪ ತೋರಿಸುವ ಪೆನ್‍ಡ್ರೈವ್ ಶೂರರು ಆಗ ಅಸಲಿ ಪತ್ರದ ಬಗ್ಗೆ ತುಟಿ ಬಿಚ್ಚಲಿಲ್ಲ ಏಕೆ?’ ಎಂದು ಪ್ರಶ್ನಿಸಿದೆ.
ವೈಮಾನಿಕ ತರಬೇತಿ ಶಾಲೆಯ ಅಭಿವೃದ್ಧಿಗೆ ವಿಶೇಷ ಕಾಳಜಿ ವಹಿಸಿ: ಅಧಿಕಾರಿಗಳಿಗೆ ಸಚಿವ ಬಿ.ನಾಗೇಂದ್ರ ಸೂಚನೆ
ಅಧಿಕಾರಿಗಳ ಬಳಿ 6-8 ಲಕ್ಷ ಕಮಿಷನ್ ಆರೋಪ-ಕೃಷಿ ಸಚಿವ ಚಲುವರಾಯಸ್ವಾಮಿ ವಜಾಗೆ ಆಗ್ರಹ
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=uzXzteRDY-k
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.