ಬೆಂಗಳೂರು: ಸುಳ್ಳು ಹೇಳಿಕೊಂಡು ತಿರುಗುವ ಮೊದಲು ಬಿ.ಎಲ್.ಸಂತೋಷ್ ಅವರು ತಮ್ಮ ಪಕ್ಷದ ಶಾಸಕರೊಂದಿಗೆ ಸಂಪರ್ಕ ಹಾಗೂ ವಿಶ್ವಾಸವನ್ನು ಹೊಂದಲು ಪ್ರಯತ್ನಿಸಲಿ ಎಂದು ಕಾಂಗ್ರೆಸ್ ಟೀಕಿಸಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪನವರಿಗೆ ಸೆಡ್ಡು ಹೊಡೆಯಲು ನಡೆಸಿದ ಸಭೆಗೆ ಹಲವು ಬಿಜೆಪಿ ಶಾಸಕರು, ನಾಯಕರೇ ಗೈರಾಗಿದ್ದರು’ ಎಂದು ಕುಟುಕಿದೆ.


COMMERCIAL BREAK
SCROLL TO CONTINUE READING

ಬಿ.ಎಲ್.ಸಂತೋಷ್ ಅವರು ಸ್ವತಃ ಬಿಜೆಪಿ ಶಾಸಕರೊಂದಿಗೇ ಸಂಪರ್ಕ ಸಾಧಿಸಲು ಸಾಧ್ಯವಾಗಿಲ್ಲ, ಇನ್ನೂ ಕಾಂಗ್ರೆಸ್ ಶಾಸಕರು ಸಂಪರ್ಕದಲ್ಲಿದ್ದಾರೆ ಎನ್ನುವುದು ಶತಮಾನದ ಜೋಕ್!. ವಿರೋಧ ಪಕ್ಷದ ನಾಯಕನ ಆಯ್ಕೆಯಾಗಿಲ್ಲ, ರಾಜ್ಯಾಧ್ಯಕ್ಷನ ಆಯ್ಕೆ ಆಗಿಲ್ಲ ಎಂದು ಸ್ವತಃ ಬಿಜೆಪಿ ಶಾಸಕರು, ನಾಯಕರು ಬಹಿರಂಗವಾಗಿಯೇ ಅಸಮಾಧಾನ ಹೊರಹಾಕುತ್ತಿದ್ದಾರೆ. ಬಿ.ಎಲ್.ಸಂತೋಷ್ ಅವರು ಮಾತ್ರ ಈ ಬಗ್ಗೆ ಮಾತೇ ಆಡಬೇಡಿ ಎಂದು ಫಾರ್ಮಾನು ಹೊರಡಿಸಿದ್ದಾರೆ’ ಎಂದು ಕಾಂಗ್ರೆಸ್ ಟೀಕಿಸಿದೆ.


ಇಡೀ ಭಾರತ ದೇಶದಲ್ಲಿ ಕಲಾವಿದರ ಸಂಘಕ್ಕೆ ಜಾಗ ಇರೋದು ಕರ್ನಾಟಕದಲ್ಲಿ ಮಾತ್ರ


‘ಇದರ ಅರ್ಥ ವಿರೋಧ ಪಕ್ಷದ ನಾಯಕನ ಆಯ್ಕೆ ಸದ್ಯಕ್ಕಂತೂ ಸಾಧ್ಯವಿಲ್ಲ ಎನ್ನುವುದಾಗಿದೆ. ತಮ್ಮಲ್ಲಿನ ಹುಳುಕುಗಳೇ ಕೊಳೆತು ನಾರುತ್ತಿದೆ, ಅದನ್ನು ಸರಿಪಡಿಸುವ ಯೋಗ್ಯತೆ ಇಲ್ಲದವರು ಕಾಂಗ್ರೆಸ್ ಶಾಸಕರನ್ನು ಸಂಪರ್ಕಿಸಿ ಸಾಧಿಸುವುದಾದರೂ ಏನು!?’ ಎಂದು ಕಾಂಗ್ರೆಸ್ ಕುಟುಕಿದೆ.


ಸಿ.ಟಿ.ರವಿ, ಬಸವರಾಜ ಬೊಮ್ಮಾಯಿ, ವಿ.ಸೋಮಣ್ಣ, ಎಸ್.ಟಿ.ಸೋಮಶೇಖರ್, ಬಿ.ಎಸ್.ಯಡಿಯೂರಪ್ಪ, ಶಂಕರ್ ಪಾಟೀಲ್ ಮುನೇನಕೊಪ್ಪ, ಶಿವರಾಂ ಹೆಬ್ಬಾರ್ ಮತ್ತು ಎಂ.ಪಿ.ರೇಣುಕಾಚಾರ್ಯ ಇನ್ನೂ ಹಲವರಿದ್ದಾರೆ. ಬಿ.ಎಲ್.ಸಂತೋಷ್ ಅವರೇ ನಿಮ್ಮವರೇ ನಿಮಗೆ ಸಂಪರ್ಕಕ್ಕೆ ಸಿಗಲಿಲ್ಲವೇ? ಮೊದಲು ನಿಮ್ಮವರನ್ನು ಸಂಪರ್ಕಿಸಲು ಪ್ರಯತ್ನಿಸಿ’ ಎಂದು ಕಾಂಗ್ರೆಸ್ ಟೀಕಿಸಿದೆ.


ADITYA L1 LAUNCH: ಆದಿತ್ಯ ಉಪಗ್ರಹ ಯಶಸ್ಸಿಗೆ ಹಾರೈಸಿ ಯೋಗಪಟುಗಳಿಂದ ಸೂರ್ಯ ನಮಸ್ಕಾರ


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.