ಬಿಜೆಪಿಯ 66 ಶಾಸಕರಲ್ಲಿ ಒಬ್ಬರಿಗೂ ವಿಪಕ್ಷ ನಾಯಕನಾಗುವ ಯೋಗ್ಯತೆ ಇಲ್ಲವೇ?: ಕಾಂಗ್ರೆಸ್
Congress Vs BJP: ಬಿಜೆಪಿಯ ಕಮಿಷನ್ ಸರ್ಕಾರದ ಆಡಳಿತದಲ್ಲಿ ಗುತ್ತಿಗೆ ಪಡೆದು ಕಳಪೆ ಮೊಟ್ಟೆ ಪೂರೈಕೆ ಮಾಡಿದ ಸರಬರಾಜುದಾರರನ್ನು ಕಪ್ಪುಪಟ್ಟಿಗೆ ಸೇರಿಸುವ ಮೂಲಕ ನಮ್ಮ ಸರ್ಕಾರ ಭ್ರಷ್ಟಾಚಾರವನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂಬುದನ್ನು ನಿರೂಪಿಸಿದೆ.
ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ಮುಗಿದು, ಸರ್ಕಾರ ರಚನೆಯಾಗಿ 2 ತಿಂಗಳಾದರೂ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಲಾಗದಿರುವುದಕ್ಕೆ ಕಾರಣಗಳೇನು? ಎಂದು ಬಿಜೆಪಿಗೆ ಕಾಂಗ್ರೆಸ್ ಪ್ರಶ್ನಿಸಿದೆ.
‘ರಾಜ್ಯ ಬಿಜೆಪಿಯ ಬಗ್ಗೆ ಹೈಕಮಾಂಡಿನ ತಿರಸ್ಕಾರವೇ?, 66 ಶಾಸಕರಲ್ಲಿ ಒಬ್ಬರಿಗೂ ಯೋಗ್ಯತೆ ಇಲ್ಲವೇ?, ಆಂತರಿಕ ಕಚ್ಚಾಟದಲ್ಲಿ ಯಾರೊಬ್ಬರನ್ನು ಆಯ್ಕೆ ಮಾಡಲಾಗದ ತೊಳಲಾಟವೇ?, ಆ ಹುದ್ದೆಯನ್ನೂ ಮಾರಾಟಕ್ಕೆ ಇಡಲಾಗಿದೆಯೇ, ಇನ್ನೂ ನಿಗದಿಪಡಿಸಿದ ಮೊತ್ತಕ್ಕೆ ಬಿಡ್ಡಿಂಗ್ ಆಗಿಲ್ಲವೇ?’ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.
ಇದನ್ನೂ ಓದಿ: ಬೆತ್ತಲೆ ಮಾಡಿ ಯುವಕನ ಹಲ್ಲೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್: ವಿಡಿಯೋ ವೈರಲ್
ಬಿಜೆಪಿಯ ಕಮಿಷನ್ ಸರ್ಕಾರದ ಆಡಳಿತದಲ್ಲಿ ಗುತ್ತಿಗೆ ಪಡೆದು ಕಳಪೆ ಮೊಟ್ಟೆ ಪೂರೈಕೆ ಮಾಡಿದ ಸರಬರಾಜುದಾರರನ್ನು ಕಪ್ಪುಪಟ್ಟಿಗೆ ಸೇರಿಸುವ ಮೂಲಕ ನಮ್ಮ ಸರ್ಕಾರ ಭ್ರಷ್ಟಾಚಾರವನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂಬುದನ್ನು ನಿರೂಪಿಸಿದೆ. ಬಿಜೆಪಿ ಅವಧಿಯಲ್ಲಿ ಇಂತಹ ಹಲವು ಆರೋಪ ಕೇಳಿಬಂದಿದ್ದವು, ಆದರೆ ಈ ರೀತಿಯ ಕಠಿಣ ಕ್ರಮ ಕೈಗೊಂಡ ಒಂದೇ ಒಂದು ಉದಾಹರಣೆ ಸಿಗುವುದಿಲ್ಲ’ವೆಂದು ಕಾಂಗ್ರೆಸ್ ಟೀಕಿಸಿದೆ.
ಇದನ್ನೂ ಓದಿ: ʼನಮಸ್ಕಾರ ದೇವ್ರುʼ Dr Bro ವಿಡಿಯೋ ಮಾಡಿದ್ದಕ್ಕೆ ಅಲ್ಲಿನ ಜನ ಏನ್ ಮಾಡಿದ್ರು ನೀವೆ ನೋಡಿ..!
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.