ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದ ನಮೋ ಬ್ರಿಗೇಡ್ ಮುಖ್ಯಸ್ಥ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ. ಈ ಬಗ್ಗೆ ಶುಕ್ರವಾರ ಟ್ವೀಟ್ ಮಾಡಿರುವ ಕಾಂಗ್ರೆಸ್, ‘ಖರ್ಗೆ ಬಗ್ಗೆ ಹಗುರವಾಗಿ ಮಾತನಾಡಿರುವ ಸೂಲಿಬೆಲೆಯನ್ನು ಗಡಿಪಾರು ಮಾಡಬೇಕು ಎಂದು ಆಗ್ರಹಿಸಿದೆ.
‘ಚಕ್ರವರ್ತಿ ಸೂಲಿಬೆಲೆ ಎನ್ನುವ ಸಮಾಜದ ಕೊಳಕು ಕ್ರಿಮಿಯೊಂದು ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ್ ಖರ್ಗೆ ಅವರ ಬಗ್ಗೆ ಹಗುರವಾಗಿ ಮಾತನಾಡಿರುವುದು ಖಂಡನೀಯ. ಬಾಡಿಗೆ ಭಾಷಣ ಮಾಡಿಕೊಂಡು ಬದುಕುವ ಪರಾವಲಂಬಿ ಜೀವಿಗಳಿಗೆ ಶೋಷಿತ ಸಮುದಾಯದ ನಾಯಕರೊಬ್ಬರು ಅತ್ಯುನ್ನತ ಸ್ಥಾನಕ್ಕೆ ಏರುವುದನ್ನು ಸಹಿಸಲು ಸಾಧ್ಯವಾಗುತ್ತಿಲ್ಲ ಎನ್ನುವುದು ಇದರಿಂದ ಸ್ಪಷ್ಟವಾಗುತ್ತದೆ’ ಎಂದು ಕಾಂಗ್ರೆಸ್ ಕಿಡಿಕಾರಿದೆ.
ಇದನ್ನೂ ಓದಿ: ಇಂದು ಬೆಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮನ
ಅಯೋಗ್ಯ @astitvam ಎನ್ನುವ ಸಮಾಜದ ಕೊಳಕು ಕ್ರಿಮಿಯೊಂದು ಎಐಸಿಸಿ ಅಧ್ಯಕ್ಷರಾದ @kharge ಅವರ ಬಗ್ಗೆ ಹಗುರವಾಗಿ ಮಾತನಾಡಿರುವುದು ಖಂಡನೀಯ.
ಬಾಡಿಗೆ ಭಾಷಣ ಮಾಡಿಕೊಂಡು ಬದುಕುವ ಪರಾವಲಂಬಿ ಜೀವಿಗಳಿಗೆ ಶೋಷಿತ ಸಮುದಾಯದ ನಾಯಕರೊಬ್ಬರು ಅತ್ಯುನ್ನತ ಸ್ಥಾನಕ್ಕೆ ಏರುವುದನ್ನು ಸಹಿಸಲು ಸಾಧ್ಯವಾಗುತ್ತಿಲ್ಲ ಎನ್ನುವುದು ಇದರಿಂದ ಸ್ಪಷ್ಟವಾಗುತ್ತದೆ.…
— Karnataka Congress (@INCKarnataka) January 19, 2024
ಸುಳ್ಳುಗಳನ್ನು ಹಬ್ಬಿಸುತ್ತಾ ಸಮಾಜದ ಸ್ವಾಸ್ಥ್ಯ ಕೆಡಿಸುತ್ತಿರುವ ಇಂತಹ ಕ್ರಿಮಿಗಳನ್ನು ಗಡಿಪಾರು ಮಾಡಲು ಕ್ರಮ ಕೈಗೊಳ್ಳಬೇಕೆಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರಲ್ಲಿ ಮನವಿ ಮಾಡುತ್ತೇವೆ’ ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.
ಚಕ್ರವರ್ತಿ ಸೂಲಿಬೆಲೆ ಹೇಳಿದ್ದೇನು?
ರಾಯಚೂರಿನ ಸಿರವಾರದಲ್ಲಿ ನಡೆದ ‘ನಮೋ ಭಾರತ’ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಚಕ್ರವರ್ತಿ ಸೂಲಿಬೆಲೆ ಅವರು ಖರ್ಗೆ ಫ್ಯಾಮಿಲಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದರು. ಕಲಬುರಗಿಯ ESI ಆಸ್ಪತ್ರೆ ನಿರ್ಮಾಣದ ವಿಚಾರವಾಗಿ ಖರ್ಗೆ ಕುಟುಂಬದ ವಿರುದ್ಧ ಏಕವಚನದಲ್ಲಿಯೇ ವಾಗ್ದಾಳಿ ನಡೆಸಿದ ಸೂಲಿಬೆಲೆ, ಆಕ್ರೋಶ ಹೊರಹಾಕಿದ್ದರು.
ಖರ್ಗೆ ಸಾಹೇಬರ ಕಾಲದಲ್ಲಿ ESI ಆಸ್ಪತ್ರೆ ನಿರ್ಮಾಣ ಮಾಡಲಾಯಿತು. ಆಸ್ಪತ್ರೆ ಮೇಲ್ಭಾಗದಲ್ಲಿ ಡ್ರೋನ್ ಕ್ಯಾಮರಾದಿಂದ ನೋಡಿದರೆ ಈ ಚಿತ್ರ ಕಾಣುತ್ತದೆ. ಮೊದಲ ಅಕ್ಷರ ಖ, ಎರಡನೇ ಅಕ್ಷರ ಗೆ, ಆ ಮೇಲೆ ಅರ್ಧ ಅಕ್ಷರ ಖರ್ಗೆ ಅಂತಾ. ಅವರು ಕಟ್ಟಿದ ಬಿಲ್ಡಿಂಗ್ ಮೇಲೆ ಖರ್ಗೆ ಅಂತಾ ಕಾಣಬೇಕು. ಕಟ್ಟಡ ಇರೋವರೆಗೆ ಅವರ ಹೆಸರು ಉಳಿಬೇಕು ಅಂತಾ ಈ ರೀತಿ ಮಾಡಲಾಗಿದೆ. ಇದು ಅವರ ಸ್ವಂತ ದುಡ್ಡಲ್ಲ, ಪಾರ್ಟಿ ದುಡ್ಡಲ್ಲ ಜನರ ತೆರಿಗೆ ದುಡ್ಡಲ್ಲಿ ತಮ್ಮ ಹೆಸರು ಶಾಶ್ವತಗೊಳಿಸುವಂತ ಅಯೋಗ್ಯರಿದ್ದಾರೆ ಎಂದು ಕಿಡಿಕಾರಿದ್ದರು.
ಇದನ್ನೂ ಓದಿ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ನಾನು ತಟಸ್ಥʼ
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.