ಕುಮಾರಸ್ವಾಮಿ ಮಾತಿಗೆ ಅವರದ ಪಕ್ಷದಲ್ಲೇ ನಯಾಪೈಸೆ ಕಿಮ್ಮತ್ತಿಲ್ಲ: ಕಾಂಗ್ರೆಸ್ ಟೀಕೆ
BJP-JDS Alliance: ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ನಾನೇ ಜೆಡಿಎಸ್ ರಾಜ್ಯಾಧ್ಯಕ್ಷ ಪಕ್ಷದ ತೀರ್ಮಾನಗಳನ್ನು ತೆಗೆದುಕೊಳ್ಳುವುದು ಎಂದು ಕುಮಾರಸ್ವಾಮಿಯವರಿಗೆ ನೀವು `ಲೆಕ್ಕಕ್ಕಿಲ್ಲ` ಎಂದು ಹೇಳಿದ್ದಾರೆ. ಪರಿಸ್ಥಿತಿ ಹೀಗಿರುವಾಗ ಕುಮಾರಸ್ವಾಮಿಯವರದ್ದು ಅಬ್ಬೇಪಾರಿ ಸ್ಥಿತಿಗಿಂತ ಭಿನ್ನವಾಗಿಲ್ಲವೆಂದು ಕಾಂಗ್ರೆಸ್ ವ್ಯಂಗ್ಯವಾಡಿದೆ.
ಬೆಂಗಳೂರು: ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರವಾಗಿ ಇದೀಗ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಮತ್ತು ಸಿಎಂ ಇಬ್ರಾಹಿಂ ನಡುವೆ ಸಮರ ನಡೆಯುತ್ತಿದೆ. ಇದೇ ವಿಚಾರವಾಗಿ ಮಂಗಳವಾರ ಟ್ವೀಟ್ ಮಾಡಿರುವ ಕಾಂಗ್ರೆಸ್, ‘ಕುಮಾರಸ್ವಾಮಿಯವರದ್ದು ಅಬ್ಬೇಪಾರಿ ಸ್ಥಿತಿಗಿಂತ ಭಿನ್ನವಾಗಿಲ್ಲ’ವೆಂದು ವ್ಯಂಗ್ಯವಾಡಿದೆ.
‘ಇತ್ತೀಚಿನ ದಿನಗಳಲ್ಲಿ ಹೊರಬರುತ್ತಿರುವ ಸತ್ಯ ಏನೆಂದರೆ ಮೈತ್ರಿ ಇರುವುದು ಅಮಿತ್ ಶಾ ಹಾಗೂ ಎಚ್.ಡಿ.ಕುಮಾರಸ್ವಾಮಿ ನಡುವೆ ಹೊರತು ಬಿಜೆಪಿ ಮತ್ತು ಜೆಡಿಎಸ್ ನಡುವೆ ಅಲ್ಲ! ಇತ್ತ ಬಿಜೆಪಿ ನಾಯಕರಿಗೂ ಮೈತ್ರಿ ಬಗ್ಗೆ ಅಸಮಧಾನ, ಅತ್ತ ಒರಿಜಿನಲ್ ಜೆಡಿಎಸ್ನವರಿಗೂ ಅಸಮಧಾನ. ಇಂತಹದ್ದನ್ನು ಮೈತ್ರಿ ಎನ್ನಲಾದೀತೆ?’ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.
ಕೆಪಿಸಿಸಿ ಕಾರ್ಯಾಧ್ಯಕ್ಷರ ನೇಮಕ ವಿಚಾರ ಚರ್ಚೆ
‘ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ನಾನೇ ಜೆಡಿಎಸ್ ರಾಜ್ಯಾಧ್ಯಕ್ಷ ಪಕ್ಷದ ತೀರ್ಮಾನಗಳನ್ನು ತೆಗೆದುಕೊಳ್ಳುವುದು ಎಂದು ಕುಮಾರಸ್ವಾಮಿಯವರಿಗೆ ನೀವು "ಲೆಕ್ಕಕ್ಕಿಲ್ಲ" ಎಂದು ಹೇಳಿದ್ದಾರೆ. ಪರಿಸ್ಥಿತಿ ಹೀಗಿರುವಾಗ ಕುಮಾರಸ್ವಾಮಿಯವರದ್ದು ಅಬ್ಬೇಪಾರಿ ಸ್ಥಿತಿಗಿಂತ ಭಿನ್ನವಾಗಿಲ್ಲ!’ವೆಂದು ಕಾಂಗ್ರೆಸ್ ವ್ಯಂಗ್ಯವಾಡಿದೆ.
ಬಿಬಿಎಂಪಿ ನಿರ್ಧಾರಕ್ಕೆ ಅಕ್ಕ ಪಕ್ಕದ ನಗರಗಳ ಜನರಿಂದ ಆಕ್ರೋಶ
ಕಾಂಗ್ರೆಸ್ ಕುಟುಕಿದೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.