ಬೆಂಗಳೂರು: ನಂಬಿದವರಿಗೆ ನಾಮ ಬಳಿಯುವ ಕುಮಾರಸ್ವಾಮಿ, ನಿಮ್ಮ ಬಾಯಲ್ಲಿರುವುದು ನಾಲಿಗೆಯೋ ಅಥವಾ ಕೊಳಕು ಮಂಡಲ ಹಾವೋ?! ಜಾತ್ಯತೀತತೆ ನಾಟ್ಯಕ್ಕೆ ಬೆರಗಾಗಿ ತೆನೆಹೊತ್ತ ಮಹಿಳೆಯೇ "ಕೋಮು-ಕುಂಡ"ದಲ್ಲಿ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಕಾಂಗ್ರೆಸ್‍ ವಾಗ್ದಾಳಿ ನಡೆಸಿದೆ.


COMMERCIAL BREAK
SCROLL TO CONTINUE READING

ಈ ಬಗ್ಗೆ ಗುರುವಾರ ಟ್ವೀಟ್ ಮಾಡಿರುವ ಕಾಂಗ್ರೆಸ್, ‘ಕೈ’ ಹಿಡಿದವರ ತಲೆ ಕಡಿಯುವ, ಹೆಗಲು ಕೊಟ್ಟವರ ಬೆನ್ನಿಗೆ ಚೂರಿ ಹಾಕುವ, ನಂಬಿದವರಿಗೆ ನಾಮ ಬಳಿಯುವ ಕುಮಾರಸ್ವಾಮಿ ರಾಮಾಯಣದ ಮಂಥರೆ, ಮಹಾಭಾರತದ ಶಕುನಿಯೇ ಸರಿ! ಕ್ಷಣಕ್ಕೊಂದು ಬಣ್ಣ, ದಿನಕ್ಕೊಂದು ವೇಷ ತೊಡುವ ನಿಮ್ಮ ಬಣ್ಣದೋಕುಳಿಯಾಟಕ್ಕೆ ಗೋಸುಂಬೆಯೇ ಲಾಗ ಹೊಡೆದಿದೆ! ಹಿಂದಿನ ನಿಮ್ಮ ಎಲ್ಲಾ ಅಕ್ರಮ, ಅನಾಚಾರ, ಅವ್ಯವಹಾರಗಳು ಹೊರಬರುತ್ತವೆ ಎಂದು ಹೆದರಿ ಬಿಜೆಪಿ ಸೆರಗಿನೊಳಗೆ ಸೇರಿಕೊಂಡಿರುವ ನಿಮ್ಮ ಜಾತ್ಯತೀತತೆ ನಾಟ್ಯಕ್ಕೆ ಬೆರಗಾಗಿ ತೆನೆಹೊತ್ತ ಮಹಿಳೆಯೇ "ಕೋಮು-ಕುಂಡ"ದಲ್ಲಿ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ’ ಎಂದು ಟೀಕಿಸಿದೆ.


‘ಕುಮಾರಸ್ವಾಮಿಯವರೇ ಮೊದಲ ಬಾರಿ ನಿಮ್ಮನ್ನು ಸಿಎಂ ಮಾಡಿದ ಬಿ.ಎಸ್.ಯಡಿಯೂರಪ್ಪ ಅವರಿಗೆ ಅಧಿಕಾರ ಹಸ್ತಾಂತರಿಸದೆ ವಚನ ಭ್ರಷ್ಟರಾದಿರಿ, ದ್ರೋಹ ಮಾಡಿದಿರಿ. ಕಾಂಗ್ರೆಸ್ ನಿಮ್ಮನ್ನು ಸಿಎಂ ಮಾಡಿದಾಗ ಯಡಿಯೂರಪ್ಪ ಅಸೆಂಬ್ಲಿಯಲ್ಲಿ ಹೇಳಿದ್ದರು. "ಶಿವಕುಮಾರ್, ಈ ಅಪ್ಪ ಮಕ್ಕಳನ್ನು ನಂಬಬೇಡಿ, ಬಳಸಿ ಬಿಸಾಡುತ್ತಾರೆ. ಹಾವು ಇವರ ಲಾಂಚನ" ಎಂದು. ಆದರೆ ಸಿದ್ಧಾಂತಕ್ಕಾಗಿ ಕಾಂಗ್ರೆಸ್ ನಿಮ್ಮ ಜೊತೆ ನಿಂತಿತ್ತು. ಕಾಂಗ್ರೆಸ್ ದಯಾಭಿಕ್ಷೆಯಿಂದ 2ನೇ ಬಾರಿಗೆ ಸಿಎಂ ಆದ ನಿಮಗೆ ಕಿಂಚಿತ್ತಾದರೂ ನಿಯತ್ತು ಬೇಡವೇ? ಓಹ್.. ಕ್ಷಮಿಸಿ, ಆತ್ಮಸಾಕ್ಷಿ ಮಾರಿಕೊಂಡೇ ರಾಜಕೀಯ ಬಯಲಾಟ ಆಡುವ ನಿಮ್ಮಂತವರಿಂದ ನೀತಿ-ನಿಯತ್ತು, ನೈತಿಕತೆ ನಿರೀಕ್ಷೆ ಮಾಡುವುದೇ ಮಹಾಪಾಪ!’ವೆಂದು ಕಾಂಗ್ರೆಸ್ ಕುಟುಕಿದೆ.


ಇದನ್ನೂ ಓದಿ: ಆಪರೇಷನ್ ಹಸ್ತದ ಅವಶ್ಯಕತೆ ಕಾಂಗ್ರೆಸ್‌ ಪಕ್ಷಕ್ಕೆ ಇಲ್ಲ


‘ಕುಮಾರಸ್ವಾಮಿಯವರೇ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಅವರನ್ನು ಅನ್ಯ ರಾಜ್ಯದ ಪೇಶ್ವೆ ಎಂದು ನಿಂದಿಸಿದಿರಿ. 2.50 ಕೋಟಿಯಂತೆ ಸರಕಾರಿ ಹುದ್ದೆ ಮಾರಿಕೊಂಡ ಭ್ರಷ್ಟ ಎಂದಿರಿ. ಸಿಟಿ ರವಿಯನ್ನು ಲೂಟಿ ರವಿ ಎಂದು ನಾಮಕರಣ ಮಾಡಿದವರೂ ನೀವೇ. ಇವತ್ತು ಅವರದ್ದೇ ಅಂಗಿ ಚುಂಗು ಹಿಡಿದು ನಿಂತಿದ್ದೀರಲ್ಲಾ... ನಿಮಗೇನಾದರೂ ಆತ್ಮಗೌರವ ಇದೆಯೇ?’ ಎಂದು ಕಾಂಗ್ರೆಸ್ ಪ್ರಶ್ನಿಸಿದೆ. ‘ಇಡೀ ರಾಜ್ಯದ ಜನಕ್ಕೆ ಅರ್ಥವಾಗಿದೆ. ಅಧಿಕಾರದ ಕನಸು ನುಚ್ಚುನೂರಾದ ನಂತರ ನೀವೆಷ್ಟು ಹತಾಶರಾಗಿದ್ದೀರಿ, ಮತಿಭ್ರಂಶರಾಗಿದ್ದೀರಿ ಎಂದು. ನೀವಾಡುವ ಒಂದೊಂದು ನುಡಿಯಲ್ಲೂ ಅದರದೇ ಪ್ರತಿಫಲನ. ಪಾಪ ನಿಮ್ಮ ಸ್ಥಿತಿ ಕಂಡು ಅಯ್ಯೋ ಅನ್ನಿಸುತ್ತದೆ. ಇದೇ ಸ್ಥಿತಿ ಮುಂದುವರೆದರೆ ಬೀದಿಯಲ್ಲಿ ಅಂಗಿ ಹರಿದುಕೊಂಡು ಓಡಾಡುವ ದಿನ ದೂರವಿಲ್ಲ ಎಂಬುದನ್ನು ನೆನೆದು ಭಯವೂ ಆಗುತ್ತದೆ’ ಎಂದು ಕಾಂಗ್ರೆಸ್ ಟೀಕಿಸಿದೆ.


ಹೈಕೋರ್ಟ್‌ ಆದೇಶದಂತೆ ಶಿಕ್ಷಕರ ನೇಮಕಾತಿ ಪ್ರಕ್ರಿಯೆ


‘ನಿಯತ್ತು ಮತ್ತು ಕುಮಾರಸ್ವಾಮಿ ಎರಡೂ ವಿರುದ್ಧ ಪದಗಳು ಎಂಬುದು ಜಗಜ್ಜಾಹಿರು! ನಿಮ್ಮ ಕುಟುಂಬಕ್ಕೂ ನೀವು ನಿಯತ್ತಾಗಿಲ್ಲ. ನಿಮ್ಮ ಪಕ್ಷದ ಸಿದ್ಧಾಂತಕ್ಕೂ ನೀವು ನಿಯತ್ತಾಗಿಲ್ಲ. ನಿಮ್ಮ ಪಕ್ಷದ ಮುಖಂಡರು, ಕಾರ್ಯಕರ್ತರಿಗೂ ನಿಯತ್ತಾಗಿಲ್ಲ. ನಿಮ್ಮನ್ನು "ಕೈ ಹಿಡಿದ" ಜನರಿಗೂ ನಿಯತ್ತಾಗಿಲ್ಲ. ನಿಮ್ಮನ್ನು ನಂಬಿದ ಸಮುದಾಯಕ್ಕೂ ನಿಯತ್ತಾಗಿಲ್ಲ. ಕುಲದ ಮಠಕ್ಕೂ ಕೊಡಲಿ ಕಾವಾದಿರಿ. ಕೊನೇ ಪಕ್ಷ ನಿಮ್ಮ ಆತ್ಮಸಾಕ್ಷಿಗಾದರೂ ನಿಯತ್ತಾಗಿದ್ದೀರಾ? ಅದೂ ಇಲ್ಲ. ಹತಾಶೆ ಆತ್ಮಸಾಕ್ಷಿಯನ್ನೇ ಕೊಂದಿದೆ!’ ಎಂದು ಕಾಂಗ್ರೆಸ್ ಟೀಕಿಸಿದೆ.


‘ಹೀಗಾಗಿ ನಿಮ್ಮಂತವರ ಮಾತಿಗೆ ಕವಡೆ ಕಾಸಿನ ಕಿಮ್ಮತ್ತು ಕೊಡುವ ಅಗತ್ಯವಿಲ್ಲ. ನೀವೀಗ ನಿರುದ್ಯೋಗಿ, ಪರರ ನಿಂದನೆಗೆ ಸಾಕಷ್ಟು ಸಮಯವಿದೆ. ಮಾತಾಡುತ್ತಾ ಹೋಗಿ. ನಾವು ತಲೆ ಕೆಡಿಸಿಕೊಳ್ಳುವುದಿಲ್ಲ. ನಮಗೆ ಕೆಲಸವಿದೆ, ಜನ ಜವಾಬ್ದಾರಿ ಕೊಟ್ಟಿದ್ದಾರೆ. ಅದನ್ನು ಮರೆತು ಹಾದಿ ಬೀದಿಯಲ್ಲಿ ಹೋಗುವವರಿಗೆಲ್ಲ ಉತ್ತರ ಕೊಡುತ್ತಾ ಹೋದರೆ ನಿಮಗೂ ನಮಗೂ ವ್ಯತ್ಯಾಸ ಇರುವುದಿಲ್ಲ. ನೀವು ಮಾತಾಡಿ, ಮಾತಾಡುತ್ತಾ ಹೋಗಿ... ಅಲ್ ದ ಬೆಸ್ಟ್!’ ಎಂದು ಕಾಂಗ್ರೆಸ್ ಕುಟುಕಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.