BJP-JDS Alliance: ಜೆಡಿಎಸ್ ಪಕ್ಷದ ಹೆಸರನ್ನು KD ಎಂದು ಬದಲಿಸಿಕೊಳ್ಳಲಿ- ಕಾಂಗ್ರೆಸ್
BJP-JDS Alliance: ಬಿಜೆಪಿಯ ‘ಬಿ’ ಟೀಮ್ ಜೆಡಿಎಸ್ ಎಂಬುದಕ್ಕೆ ಇಂದು ಅಧಿಕೃತ ಮುದ್ರೆ ಬಿದ್ದಿದೆ. ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಕದ್ದುಮುಚ್ಚಿ ಅಫೇರ್ ಇಟ್ಟುಕೊಂಡಿದ್ದ ಜೆಡಿಎಸ್ ಇಂದು ಬಹುರಂಗವಾಗಿ ಜೊತೆಗೂಡಿದೆ ಎಂದು ಕಾಂಗ್ರೆಸ್ ಟೀಕಿಸಿದೆ.
ಬೆಂಗಳೂರು: ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯ ಬಗ್ಗೆ ವ್ಯಂಗ್ಯವಾಡಿರುವ ಕಾಂಗ್ರೆಸ್, ಜೆಡಿಎಸ್ ಪಕ್ಷದ ಹೆಸರನ್ನು ಇನ್ಮುಂದೆ KD ಎಂದು ಬದಲಿಸಿಕೊಳ್ಳಲಿ ಎಂದು ಸಲಹೆ ನೀಡಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್, ‘ಜೆಡಿಎಸ್ ಅಧಿಕೃತವಾಗಿ NDA ಮೈತ್ರಿಕೂಟದೊಳಗೆ ವಿಲೀನವಾಗಿದೆ. ಇನ್ಮುಂದೆ JDS ಪಕ್ಷವು ತನ್ನ ಹೆಸರಿನ ಮುಂದಿರುವ “ಸೆಕ್ಯೂಲರ್ ಪದವನ್ನು ಕೈಬಿಡುವುದು ಒಳ್ಳೆಯದು’ ಎಂದು ಕುಟುಕಿದೆ.
‘ಜೆಡಿಎಸ್ ಕೇವಲ JD ಎಂದು ಇಟ್ಟುಕೊಳ್ಳಬಹುದು ಇಲ್ಲವೇ KD ಎಂದು ಬದಲಿಸಿಕೊಳ್ಳಬಹುದು, ಕೆಡಿ ಅಂದರೆ ಅಪಾರ್ಥ ಬೇಡ! KD ಅಂದರೆ “ಕಮಲ ದಳ”! ಪಕ್ಷ ವಿಸರ್ಜಿಸುತ್ತೇನೆ ಎಂದವರು ಜಾತ್ಯತೀತತೆಯನ್ನು ವಿಸರ್ಜಿಸಿದ್ದಾರೆ, ಅಭಿನಂದನೆಗಳು’ ಎಂದು ಕಾಂಗ್ರೆಸ್ ಕುಟುಕಿದೆ.
ರಾಷ್ಟ್ರೀಯ ಹೆದ್ದಾರಿಯಲ್ಲಿ ಉರುಳು ಸೇವೆ ನಡೆಸಿ ಆಕ್ರೋಶ ಹೊರಹಾಕಿದ ಕನ್ನಡಪರ ಸಂಘಟನೆಗಳು
‘ಬಿಜೆಪಿಯ ‘ಬಿ’ ಟೀಮ್ ಜೆಡಿಎಸ್ ಎಂಬುದಕ್ಕೆ ಇಂದು ಅಧಿಕೃತ ಮುದ್ರೆ ಬಿದ್ದಿದೆ. ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಕದ್ದುಮುಚ್ಚಿ ಅಫೇರ್ ಇಟ್ಟುಕೊಂಡಿದ್ದ ಜೆಡಿಎಸ್ ಇಂದು ಬಹುರಂಗವಾಗಿ ಜೊತೆಗೂಡಿದೆ. ಬಿಜೆಪಿ ಜೊತೆ ಹೋಗುವ ದಾರಿದ್ರ್ಯ ಬಂದಿಲ್ಲ ಎಂದಿದ್ದ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿಯವರು ಇಂದು ದರಿದ್ರ ಬಂದಿದೆ ಎಂದು ಒಪ್ಪಿಕೊಂಡಂತಾಗಿದೆ’ ಎಂದು ಕಾಂಗ್ರೆಸ್ ವ್ಯಂಗ್ಯವಾಡಿದೆ.
ಗಂಗಾವತಿ ನಗರಸಭೆ ವ್ಯಾಪ್ತಿಗೆ ಹಳ್ಳಿಗಳನ್ನು ಸೇರಿಸಲು ಮುಂದಾದ ಜಿಲ್ಲಾಡಳಿತ, ಗ್ರಾಮಸ್ಥರ ಆಕ್ರೋಶ
ಕಾಂಗ್ರೆಸ್ ಪ್ರಶ್ನಿಸಿದೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://t.co/lCSPNypK2U
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.