ಸಂಸದ ಅನಂತಕುಮಾರ್ ಹೆಗಡೆ ಕುಂಭಕರ್ಣನಿದ್ದಂಗೆ: ಕಾಂಗ್ರೆಸ್ ಟೀಕೆ
Ananth Kumar Hegde VS Siddaramaiah: ಕಾಂಗ್ರೆಸ್ ಪಕ್ಷದ ಬಗ್ಗೆ, ಸಿಎಂ ಸಿದ್ದರಾಮಯ್ಯ ಅವರ ಬಗ್ಗೆ ತನ್ನ ಕೊಳಕು ನಾಲಿಗೆ ಹರಿಬಿಡುವ ಮೊದಲು ಸಂಸದನಾಗಿ ತನ್ನ ಸಾಧನೆ ಏನು ಎಂಬುದನ್ನು ಜನತೆಗೆ ತಿಳಿಸಲಿ. ಈ ಅಸಹ್ಯದ ವ್ಯಕ್ತಿಯಲ್ಲಿ ಪುರೋಹಿತಶಾಹಿಯ ಅಹಂಕಾರ ಮಿತಿ ಮೀರಿ ನರ್ತಿಸುತ್ತಿದೆ, ಈ ಅಹಂಕಾರದ ಮದ ಇಳಿಸುವ ತಾಕತ್ತು ಕನ್ನಡಿಗರಿಗೆ ಇದೆ ಎಂದು ಕಾಂಗ್ರೆಸ್ ಕಿಡಿಕಾರಿದೆ.
ಬೆಂಗಳೂರು: ರಾಮಮಂದಿರ ಉದ್ಘಾಟನಾ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯರ ವಿರುದ್ಧ ಏಕವಚನದಲ್ಲಿಯೇ ವಾಗ್ದಾಳಿ ನಡೆಸಿದ್ದ ಬಿಜೆಪಿಯ ಸಂಸದ ಅನಂತಕುಮಾರ್ ಹೆಗಡೆಗೆ ಕಾಂಗ್ರೆಸ್ ತಿರುಗೇಟು ನೀಡಿದೆ.
ಈ ಬಗ್ಗೆ ಸೋಮವಾರ ಟ್ವೀಟ್ ಮಾಡಿರುವ ಕಾಂಗ್ರೆಸ್, ‘ಸಂಸದ ಅನಂತಕುಮಾರ್ ಹೆಗಡೆ ಕುಂಭಕರ್ಣನಿದ್ದಂಗೆ. ನಾಲ್ಕೂವರೆ ವರ್ಷ ಮಲಗುವುದು, ಚುನಾವಣೆ ಬಂದಾಗ ಏಳುವುದು! ದಲಿತ, ಹಿಂದುಳಿದ ಸಮುದಾಯಗಳ ಸಾಮಾಜಿಕ, ಆರ್ಥಿಕ ಹಾಗೂ ರಾಜಕೀಯ ಏಳಿಗೆಯನ್ನು ಸಹಿಸದ ವಿಕೃತ ಮನಸ್ಥಿತಿಯ ಪರಂಪರೆಯನ್ನು ಮುಂದುವರಿಸುವ ಅನಂತಕುಮಾರ್ ಹೆಗಡೆಯಂತಹ ಕ್ರಿಮಿ ಕೀಟಗಳು ಈ ದೇಶಕ್ಕೆ ಕ್ಯಾನ್ಸರ್‍ನಂತೆ ಕಾಡುತ್ತವೆ, ಈ ಕ್ಯಾನ್ಸರ್‍ಗೆ ಸಂವಿಧಾನದಲ್ಲಿ ಔಷಧವಿದೆ’ ಎಂದು ಟೀಕಿಸಿದೆ.
ಇದನ್ನೂ ಓದಿ: ಲೋಕಸಭೆಗೆ ಮತಬೇಟೆ: ಇಂದಿನಿಂದ ‘ಭಾರತ್ ಜೋಡೋ ನ್ಯಾಯ್ ಯಾತ್ರೆ’ ಪ್ರಾರಂಭಿಸಲಿರುವ ರಾಹುಲ್ ಗಾಂಧಿ!
Crime News: ಪ್ರಿಯಕರನೊಂದಿಗೆ ಬೆಡ್ ರೂಮ್‌ನಲ್ಲಿದ್ದಾಗ ಬಂದ ಪತಿಯ ಕೊಂದ ಪತ್ನಿ.. ಹೃದಯಾಘಾತ ಎಂದು ಹೈಡ್ರಾಮಾ!
ರಾಮಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಹೋಗುವುದಿಲ್ಲವೆಂದು ಹೇಳಿದ್ದಾರೆ. ‘ನೀನು ಬಾ, ಇಲ್ಲ ಅಂದ್ರೆ ಬಿಡು, ರಾಮಮಂದಿರ ನಿಲ್ಲಲ್ಲ ಮಗನೇ’ ಅಂತಾ ಏಕವಚನದಲ್ಲೇ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದರು. ಏಕವಚನದಲ್ಲಿ ಸಿಎಂ ನಿಂದಿಸಿದ ಅನಂತಕುಮಾರ್ ಹೆಗಡೆ ಹೇಳಿಕೆಗೆ ಕಾಂಗ್ರೆಸ್ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದರು.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.