Parliament Attack: ಸಂಸದ ಪ್ರತಾಪ್ ಸಿಂಹ ಅಡಗಿ ಕುಳಿತಿರುವುದೇಕೆ..?

Lok Sabha Security Breach: ದಾಳಿಕೋರರ ಮೇಲೆ UAPAಯಂತಹ ಗಂಭೀರ ಪ್ರಕಾರಣ ದಾಖಲಿಸಲಾಗಿದೆ, ಅಪರಾಧಕ್ಕೆ ಸಹಕಾರ ನೀಡಿದವರನ್ನೂ ತನಿಖೆಗೆ ಒಳಪಡಿಸುವುದು ಸಹಜ ಕಾನೂನು ಪ್ರಕ್ರಿಯೆ. ಇಂತಹ ಸಹಜ ಕಾನೂನು ಪ್ರಕ್ರಿಯೆಯನ್ನೂ ಮಾಡದೆ ಪ್ರತಾಪ್ ಸಿಂಹರವರ ರಕ್ಷಣೆಗೆ ನಿಂತಿರುವುದೇಕೆ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

Written by - Puttaraj K Alur | Last Updated : Dec 15, 2023, 03:22 PM IST
  • ಸಂಸತ್ ದಾಳಿಕೋರರಿಗೆ ಸಂಸದ ಪ್ರತಾಪ್ ಸಿಂಹ 3 ಬಾರಿ ಸಂಸತ್ ಪಾಸ್ ನೀಡಿದ್ದಾರೆ
  • ಪರಿಚಯ, ಆತ್ಮೀಯ ಒಡನಾಟ ಇಲ್ಲದೆ ಇದ್ದರೆ ಮೂರು ಬಾರಿ ಪಾಸ್ ವಿತರಿಸಲು ಸಾಧ್ಯವೇ ಇಲ್ಲ
  • ಪ್ರತಾಪ್ ಸಿಂಹರಿಗೂ ದಾಳಿಕೋರರಿಗೂ ಇರುವ ನಿಗೂಢ ಸಂಬಂಧದ ಬಗ್ಗೆ ತನಿಖೆ ಮಾಡದಿರುವುದೇಕೆ?
Parliament Attack: ಸಂಸದ ಪ್ರತಾಪ್ ಸಿಂಹ ಅಡಗಿ ಕುಳಿತಿರುವುದೇಕೆ..? title=
ಪ್ರತಾಪ್ ಸಿಂಹ ವಿರುದ್ಧ ಕಾಂಗ್ರೆಸ್ ಆಕ್ರೋಶ!

ಬೆಂಗಳೂರು: ಡಿಸೆಂಬರ್‌ 13ರಂದು ಹೊಸ ಸಂಸತ್‌ ಭವನದೊಳಗೆ ನಡೆದ ಭದ್ರತಾ ಲೋಪ ಘಟನೆ ವಿಚಾರವಾಗಿ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಮತ್ತು ಬಿಜೆಪಿ ವಿರುದ್ಧ ಕಾಂಗ್ರೆಸ್ ತೀವ್ರ ವಾಗ್ದಾಳಿ ನಡೆಸಿದೆ.

ಈ ಬಗ್ಗೆ ಶುಕ್ರವಾರ ಟ್ವೀಟ್ ಮಾಡಿರುವ ಕಾಂಗ್ರೆಸ್, ‘ಸಂಸತ್ ದಾಳಿಕೋರರಿಗೆ ಸಂಸದ ಪ್ರತಾಪ್ ಸಿಂಹ ಮೂರು ಬಾರಿ ಸಂಸತ್ ಪಾಸ್ ನೀಡಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ. ಪರಿಚಯ, ಆತ್ಮೀಯ ಒಡನಾಟ ಇಲ್ಲದೆ ಇದ್ದರೆ ಮೂರು ಬಾರಿ ಪಾಸ್ ವಿತರಿಸಲು ಸಾಧ್ಯವೇ ಇಲ್ಲ. ಪ್ರತಾಪ್ ಸಿಂಹ ಅವರಿಗೂ ದಾಳಿಕೋರರಿಗೂ ಇರುವ ನಿಗೂಢ ಸಂಬಂಧದ ಬಗ್ಗೆ ತನಿಖೆ ಮಾಡದಿರುವುದೇಕೆ? ಪ್ರತಾಪ್ ಸಿಂಹ ಅಡಗಿ ಕುಳಿತಿರುವುದೇಕೆ?’ ಎಂದು ಪ್ರಶ್ನಿಸಿದೆ.

ಇದನ್ನೂ ಓದಿ: ಕಬ್ಬು ಬೆಳೆಗಾರರ ವಿಷಯದಲ್ಲಿ ಸರ್ಕಾರ ರಾಜಕೀಯ ಮಾಡುತ್ತಿದೆ: ಶ್ರೀಮಂತ ಪಾಟೀಲ್ ಆರೋಪ

‘ದಾಳಿಕೋರರ ಮೇಲೆ UAPAಯಂತಹ ಗಂಭೀರ ಪ್ರಕಾರಣ ದಾಖಲಿಸಲಾಗಿದೆ, ಅಪರಾಧಕ್ಕೆ ಸಹಕಾರ ನೀಡಿದವರನ್ನೂ ತನಿಖೆಗೆ ಒಳಪಡಿಸುವುದು ಸಹಜ ಕಾನೂನು ಪ್ರಕ್ರಿಯೆ. ಇಂತಹ ಸಹಜ ಕಾನೂನು ಪ್ರಕ್ರಿಯೆಯನ್ನೂ ಮಾಡದೆ ಪ್ರತಾಪ್ ಸಿಂಹರವರ ರಕ್ಷಣೆಗೆ ನಿಂತಿರುವುದೇಕೆ? ಕೇವಲ ಭದ್ರತಾ ಲೋಪ ಎನ್ನುವುದನ್ನು ಬಿಂಬಿಸಿ ಕೈ ತೊಳೆದುಕೊಳ್ಳಲು ಹೊರಟಿರುವುದೇಕೆ ಕೇಂದ್ರ ಸರ್ಕಾರ’ ಎಂದು ಕಾಂಗ್ರೆಸ್ ಟೀಕಿಸಿದೆ.

‘ಸಂಸತ್ತಿನ ಮೇಲೆ ದಾಳಿಯಾಗಲು ಸಹಕರಿಸಿದ ಸಂಸದ ಪ್ರತಾಪ್ ಸಿಂಹ ಅವರನ್ನು ಅಮಾನತು ಮಾಡುವುದಿರಲಿ ಕನಿಷ್ಠ ವಿಚಾರಣೆಗೂ ಒಳಪಡಿಸಲಿಲ್ಲ. ಭದ್ರತಾ ಲೋಪವನ್ನು ಚರ್ಚಿಸಬೇಕು ಎಂದು ಒತ್ತಾಯಿಸಿದ ಕಾಂಗ್ರೆಸ್ ನ 5 ಸಂಸದರನ್ನು ಕಲಾಪದಿಂದ ಅಮಾನಾತು ಮಾಡಲಾಗಿದೆ. ಭದ್ರತಾ ಲೋಪದ ಬಗ್ಗೆ ಮಾತನಾಡಲು ಬಿಜೆಪಿಗೆ, ಕೇಂದ್ರ ಸರ್ಕಾರಕ್ಕೆ ಹಾಗೂ ಲೋಕಸಭಾ ಸ್ಪೀಕರ್ ಗೆ ಯಾಕಿಷ್ಟು ಭಯ. ಇದು ಬಿಜೆಪಿ ಪ್ರಾಯೋಜಿತ ಘಟನೆಯೇ?’ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ಇದನ್ನೂ ಓದಿಉತ್ತರ ಕರ್ನಾಟಕದ ಅಭಿವೃದ್ಧಿಗಾಗಿ ಹೊಸ ಘೋಷಣೆಗಳನ್ನು ಘೋಷಿಸಿದ ಸಿಎಂ ಸಿದ್ದರಾಮಯ್ಯ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News