Parliament Attack: ಸಂಸದ ಪ್ರತಾಪ್ ಸಿಂಹ ಅಡಗಿ ಕುಳಿತಿರುವುದೇಕೆ..?
Lok Sabha Security Breach: ದಾಳಿಕೋರರ ಮೇಲೆ UAPAಯಂತಹ ಗಂಭೀರ ಪ್ರಕಾರಣ ದಾಖಲಿಸಲಾಗಿದೆ, ಅಪರಾಧಕ್ಕೆ ಸಹಕಾರ ನೀಡಿದವರನ್ನೂ ತನಿಖೆಗೆ ಒಳಪಡಿಸುವುದು ಸಹಜ ಕಾನೂನು ಪ್ರಕ್ರಿಯೆ. ಇಂತಹ ಸಹಜ ಕಾನೂನು ಪ್ರಕ್ರಿಯೆಯನ್ನೂ ಮಾಡದೆ ಪ್ರತಾಪ್ ಸಿಂಹರವರ ರಕ್ಷಣೆಗೆ ನಿಂತಿರುವುದೇಕೆ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.
ಬೆಂಗಳೂರು: ಡಿಸೆಂಬರ್ 13ರಂದು ಹೊಸ ಸಂಸತ್ ಭವನದೊಳಗೆ ನಡೆದ ಭದ್ರತಾ ಲೋಪ ಘಟನೆ ವಿಚಾರವಾಗಿ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಮತ್ತು ಬಿಜೆಪಿ ವಿರುದ್ಧ ಕಾಂಗ್ರೆಸ್ ತೀವ್ರ ವಾಗ್ದಾಳಿ ನಡೆಸಿದೆ.
ಈ ಬಗ್ಗೆ ಶುಕ್ರವಾರ ಟ್ವೀಟ್ ಮಾಡಿರುವ ಕಾಂಗ್ರೆಸ್, ‘ಸಂಸತ್ ದಾಳಿಕೋರರಿಗೆ ಸಂಸದ ಪ್ರತಾಪ್ ಸಿಂಹ ಮೂರು ಬಾರಿ ಸಂಸತ್ ಪಾಸ್ ನೀಡಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ. ಪರಿಚಯ, ಆತ್ಮೀಯ ಒಡನಾಟ ಇಲ್ಲದೆ ಇದ್ದರೆ ಮೂರು ಬಾರಿ ಪಾಸ್ ವಿತರಿಸಲು ಸಾಧ್ಯವೇ ಇಲ್ಲ. ಪ್ರತಾಪ್ ಸಿಂಹ ಅವರಿಗೂ ದಾಳಿಕೋರರಿಗೂ ಇರುವ ನಿಗೂಢ ಸಂಬಂಧದ ಬಗ್ಗೆ ತನಿಖೆ ಮಾಡದಿರುವುದೇಕೆ? ಪ್ರತಾಪ್ ಸಿಂಹ ಅಡಗಿ ಕುಳಿತಿರುವುದೇಕೆ?’ ಎಂದು ಪ್ರಶ್ನಿಸಿದೆ.
ಇದನ್ನೂ ಓದಿ: ಕಬ್ಬು ಬೆಳೆಗಾರರ ವಿಷಯದಲ್ಲಿ ಸರ್ಕಾರ ರಾಜಕೀಯ ಮಾಡುತ್ತಿದೆ: ಶ್ರೀಮಂತ ಪಾಟೀಲ್ ಆರೋಪ
‘ದಾಳಿಕೋರರ ಮೇಲೆ UAPAಯಂತಹ ಗಂಭೀರ ಪ್ರಕಾರಣ ದಾಖಲಿಸಲಾಗಿದೆ, ಅಪರಾಧಕ್ಕೆ ಸಹಕಾರ ನೀಡಿದವರನ್ನೂ ತನಿಖೆಗೆ ಒಳಪಡಿಸುವುದು ಸಹಜ ಕಾನೂನು ಪ್ರಕ್ರಿಯೆ. ಇಂತಹ ಸಹಜ ಕಾನೂನು ಪ್ರಕ್ರಿಯೆಯನ್ನೂ ಮಾಡದೆ ಪ್ರತಾಪ್ ಸಿಂಹರವರ ರಕ್ಷಣೆಗೆ ನಿಂತಿರುವುದೇಕೆ? ಕೇವಲ ಭದ್ರತಾ ಲೋಪ ಎನ್ನುವುದನ್ನು ಬಿಂಬಿಸಿ ಕೈ ತೊಳೆದುಕೊಳ್ಳಲು ಹೊರಟಿರುವುದೇಕೆ ಕೇಂದ್ರ ಸರ್ಕಾರ’ ಎಂದು ಕಾಂಗ್ರೆಸ್ ಟೀಕಿಸಿದೆ.
ಕಾಂಗ್ರೆಸ್ ಪ್ರಶ್ನಿಸಿದೆ.
ಇದನ್ನೂ ಓದಿ: ಉತ್ತರ ಕರ್ನಾಟಕದ ಅಭಿವೃದ್ಧಿಗಾಗಿ ಹೊಸ ಘೋಷಣೆಗಳನ್ನು ಘೋಷಿಸಿದ ಸಿಎಂ ಸಿದ್ದರಾಮಯ್ಯ
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.