ಸಂಸತ್ ದಾಳಿಯ ಹಿಂದೆ ಪ್ರತಾಪ್ ಸಿಂಹರದ್ದು ಪ್ರಮುಖ ಪಾತ್ರವಿದೆ: ಕಾಂಗ್ರೆಸ್ ಗಂಭೀರ ಆರೋಪ
Parliament Attack: ಈ ದಾಳಿಯಲ್ಲಿ ಪ್ರತಾಪ್ ಸಿಂಹರ ಹೆಸರು ಮೇಲ್ನೋಟದಲ್ಲೇ ಕಂಡುಬಂದಿದೆ. ಸ್ಪೀಕರ್ ಓಂ. ಬಿರ್ಲಾ ಅವರು ಈ ಕೂಡಲೇ ಪ್ರತಾಪ್ ಸಿಂಹ ಅವರನ್ನು ಸಂಸತ್ ಸದಸ್ಯ ಸ್ಥಾನದಿಂದ ವಜಾಗೊಳಿಸಿ ತನಿಖೆ ನಡೆಸಬೇಕು ಎಂದು ಕಾಂಗ್ರೆಸ್ ಆಗ್ರಹಿಸಿದೆ.
ಬೆಂಗಳೂರು: ಸಂಸತ್ ಭವನದೊಳಗೆ ಟಿಯರ್ ಗ್ಯಾಸ್ ಸ್ಪೋಟಿಸಿದ ಆಗಂತುಕರಿಗೆ ಅಕಸ್ಮಾತ್ ಕಾಂಗ್ರೆಸ್ ಸಂಸದರಿಂದ ಪಾಸ್ ಸಿಕ್ಕಿದಿದ್ದರೆ ಬಿಜೆಪಿಗರು ಹೇಗೆ ವರ್ತಿಸುತ್ತಿದ್ದರು? ಈಗೇಕೆ ಬಿಜೆಪಿ ನಾಯಕರು ಏನೂ ಆಗಿಯೇ ಇಲ್ಲ ಎಂಬಂತೆ ಮುಗುಮ್ಮಾಗಿದ್ದಾರೆ? ಭದ್ರತಾ ಲೋಪದ ಬಗ್ಗೆ ಬಿಜೆಪಿ ನಾಯಕರು ತುಟಿ ಬಿಚ್ಚದಿರುವುದೇಕೆ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.
ಲೋಕಸಭೆಯಲ್ಲಿ ಕಲಾಪ ನಡೆಯುವ ವೇಳೆ ಭಾರೀ ಭದ್ರತಾ ಲೋಪವಾಗಿರುವ ಘಟನೆ ಸಂಬಂಧ ಬಿಜೆಪಿ ವಿರುದ್ಧ ಕಾಂಗ್ರೆಸ್ ತೀವ್ರ ವಾಗ್ದಾಳಿ ನಡೆಸಿದೆ. ಈ ಬಗ್ಗೆ ಬುಧವಾರ ಸರಣಿ ಟ್ವೀಟ್ ಮಾಡಿರುವ ಕಾಂಗ್ರೆಸ್, ‘ದೇಶದ ರಕ್ಷಣೆಯಲ್ಲಿ ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿರುವುದಕ್ಕೆ ಇದು ಸ್ಪಷ್ಟ ಉದಾಹರಣೆಯಲ್ಲವೇ ಬಿಜೆಪಿ? ಸಂಸತ್ತಿಗೆ ನುಗ್ಗಿದ ಘಾತುಕರು ಪಾಸ್ ಪಡೆದಿದ್ದು ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹರಿಂದ. ಈ ದಾಳಿಕೊರರು ಪ್ರತಾಪ್ ಸಿಂಹರವರ ಆಪ್ತ ವಲಯದವರೇ? ಪ್ರತಾಪ್ ಸಿಂಹರಿಂದಲೂ ಈ ದಾಳಿಯ ಷಡ್ಯಂತ್ರ ನಡೆದಿತ್ತೇ?’ ಎಂದು ಪ್ರಶ್ನಿಸಿದೆ.
ಪ್ರಥಮ ಬಾರಿಗೆ ಶಾಸಕನಾದ ವ್ಯಕ್ತಿಗೆ ಮುಖ್ಯಮಂತ್ರಿ ಪಟ್ಟ ಕಟ್ಟಿದ ಬಿಜೆಪಿ..! ಏಕೆ ಗೊತ್ತೆ..?
‘ಈ ಎಲ್ಲಾ ಸಂಗತಿಗಳ ತನಿಖೆ ನಡೆಸಲು ಇದುವರೆಗೂ ಪ್ರತಾಪ್ ಸಿಂಹರನ್ನು ವಶಕ್ಕೆ ಪಡೆದಿಲ್ಲವೇಕೆ? ದೇಶದಲ್ಲಿ ಭದ್ರತಾ ಲೋಪವಷ್ಟೇ ಅಲ್ಲ, ತನಿಖೆಯಲ್ಲಿ ಲೋಪವೂ ನಡೆಯುತ್ತಿರುವುದೇಕೆ? ಈ ಹಿಂದೆ 2001ರಲ್ಲಿ ಇದೇ ದಿನ ಸಂಸತ್ ಭವನದ ಮೇಲೆ ಉಗ್ರರ ದಾಳಿಯಾಗಿತ್ತು, ಆಗಲೂ ಬಿಜೆಪಿ ಆಡಳಿತವಿತ್ತು. ಈಗ ಸಂಸತ್ ಭವನದ ಒಳಗೆಯೇ ಭದ್ರತಾ ಲೋಪವಾಗಿದೆ. ಪುಲ್ವಾಮದಲ್ಲಿ ಯೋಧರನ್ನು ರಕ್ಷಿಸಲಾಗಲಿಲ್ಲ, ಸಂಸತ್ತಿನಲ್ಲಿ ಸಂಸದರನ್ನೂ ರಕ್ಷಿಸಲು ವಿಫಲವಾಗಿದೆ’ ಎಂದು ಕಾಂಗ್ರೆಸ್ ಟೀಕಿಸಿದೆ.
ಸ್ಪೋಟಕ ವಸ್ತು ಯಾವುದೇ ಅಡೆತಡೆ ಇಲ್ಲದೆ ಸಂಸತ್ತಿನೊಳಗೆ ಬರುತ್ತದೆ, ಸಂಸತ್ತನ್ನೇ ಕಾಯಲಾಗದ ಚೌಕಿದಾರ್‍ನಿಗೆ ದೇಶ ಕಾಯಲು ಸಾಧ್ಯವೇ? ಈ ಮಟ್ಟಿಗೆ ಭದ್ರತಾ ಲೋಪವಾಗಿದ್ದು ಹೇಗೆ? ಯಾಕೆ? ಈ ಸಂಸತ್ ದಾಳಿಯ ಹಿಂದೆ ಪ್ರತಾಪ್ ಸಿಂಹರದ್ದು ಪ್ರಮುಖ ಪಾತ್ರವಿದೆ’ ಎಂದು ಆರೋಪಿಸಿದೆ.
ಸಾಂವಿಧಾನಿಕವೇ ಅಥವಾ ಕಾನೂನುಬಾಹಿರವೇ?
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.