ಬೆಂಗಳೂರು: ಕುಟುಂಬ ರಾಜಕಾರಣ ವಿರೋಧಿಸಿ ಮಾತನಾಡುವ ಪ್ರಧಾನಿ ಮೋದಿ ಬೂಟಾಟಿಕೆ ಮನುಷ್ಯ ಎಂದು ಕಾಂಗ್ರೆಸ್ ಟೀಕಿಸಿದೆ. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ, ಎಚ್.ಡಿ.ರೇವಣ್ಣ, ಮತ್ತು ಪ್ರಜ್ವಲ್ ರೇವಣ್ಣರನ್ನು ಪ್ರಧಾನಿ ಮೋದಿ ಭೇಟಿ ಮಾಡಿರುವ ವಿಚಾರವಾಗಿ ಸರಣಿ ಟ್ವೀಟ್ ಮೂಲಕ ಕಾಂಗ್ರೆಸ್ ಕಿಡಿಕಾರಿದೆ.
‘ಭದ್ರತಾ ವೈಫಲ್ಯದಿಂದ ಸಂಸತ್ ಭವನ ಅಪಾಯದಲ್ಲಿದೆ, ವಿಪಕ್ಷ ಸಂಸದರ ಅನೈತಿಕ ಅಮಾನತಿನಿಂದ ಪ್ರಜಾಪ್ರಭುತ್ವ ಅಪಾಯದಲ್ಲಿದೆ. ನಮ್ಮ ಪ್ರಧಾನಿ ಮೋದಿಯವರಿಗೆ ಸಂಸತ್ ಕಲಾಪದಲ್ಲಿ ಭಾಗವಹಿಸಿ ದೇಶದ ಪ್ರಶ್ನೆಗಳಿಗೆ ಉತ್ತರಿಸುವುದಕ್ಕಿಂತ ದೇವೇಗೌಡರ ಕುಟುಂಬದೊಂದಿಗೆ ಸೇರಿ ರಾಜಕೀಯ ಲಾಭ ಹುಡುಕುವುದೇ ಪ್ರಾಶಸ್ತ್ಯದ ಕೆಲಸ! ಕುಟುಂಬ ರಾಜಕಾರಣ ವಿರೋಧಿಸಿ ಬೂಟಾಟಿಕೆಯ ಮಾತಾಡುವ ಮೋದಿಯವರು "ದೇವೇಗೌಡರ ರಾಜಕೀಯ ಕುಟುಂಬ"ದೊಂದಿಗೆ ಪೋಸ್ ಕೊಡುವ ಮೂಲಕ ತಮ್ಮನ್ನು ತಾವೇ ವ್ಯಂಗ್ಯ ಮಾಡಿಕೊಳ್ಳುತ್ತಿದ್ದಾರೆ’ ಎಂದು ಕಾಂಗ್ರೆಸ್ ಕುಟುಕಿದೆ.
ಭದ್ರತಾ ವೈಫಲ್ಯದಿಂದ ಸಂಸತ್ ಭವನ ಅಪಾಯದಲ್ಲಿದೆ, ವಿಪಕ್ಷ ಸಂಸದರ ಅನೈತಿಕ ಅಮಾನತಿನಿಂದ ಪ್ರಜಾಪ್ರಭುತ್ವ ಅಪಾಯದಲ್ಲಿದೆ.
ನಮ್ಮ ಪ್ರಧಾನಿ @narendramodi ಅವರಿಗೆ ಸಂಸತ್ ಕಲಾಪದಲ್ಲಿ ಭಾಗವಹಿಸಿ ದೇಶದ ಪ್ರಶ್ನೆಗಳಿಗೆ ಉತ್ತರಿಸುವುದಕ್ಕಿಂತ ದೇವೇಗೌಡರ ಕುಟುಂಬದೊಂದಿಗೆ ಸೇರಿ ರಾಜಕೀಯ ಲಾಭ ಹುಡುಕುವುದೇ ಪ್ರಾಶಸ್ತ್ಯದ ಕೆಲಸ!
ಕುಟುಂಬ ರಾಜಕಾರಣ… pic.twitter.com/riqROmk4fB
— Karnataka Congress (@INCKarnataka) December 21, 2023
ಇದನ್ನೂ ಓದಿ: ನಾನು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೆ ಹೋಗಿಲ್ಲ
‘ಪ್ರಧಾನಿ ಮೋದಿಯವರೇ, ಬಹಳ ದಿನಗಳ ಬೇಡಿಕೆಯ ನಂತರ ಸಿಎಂ ಸಿದ್ದರಾಮಯ್ಯನವರನ್ನು ಭೇಟಿಯಾಗಿದ್ದಕ್ಕೆ ಧನ್ಯವಾದಗಳು. ಮಾಜಿ ಪ್ರಧಾನಿ ದೇವೇಗೌಡರನ್ನು ಕರೆಸಿಕೊಂಡು ಭೇಟಿಯಾಗಿದ್ದಕ್ಕೂ ಧನ್ಯವಾದಗಳು. ನಿಮ್ಮ ಹೊಸ ಬ್ರದರ್ ಕುಮಾರಸ್ವಾಮಿಯವರನ್ನು ಕರೆಸಿಕೊಂಡು ಭೇಟಿಯಾಗಿದ್ದಕ್ಕೂ ಧನ್ಯವಾದಗಳು. ನಿಮ್ಮ ಹೊಸ ಬ್ರದರ್ನ ಬ್ರದರ್ ರೇವಣ್ಣನವರನ್ನು ಹಾಗೂ ಅವರ ಮಗನನ್ನು ಭೇಟಿಯಾಗಿದ್ದಕ್ಕೂ ಧನ್ಯವಾದಗಳು. ಹೀಗೆಯೇ ಕರ್ನಾಟಕದ ಮರ್ಯಾದೆ ತೆಗೆದಿರುವ ನಿಮ್ಮ ಸಂಸದ ಪ್ರತಾಪ್ ಸಿಂಹರನ್ನೂ ಕರೆಸಿಕೊಂಡು ಯಾಕಪ್ಪಾ ಸಂಸತ್ತಿನ ಭದ್ರತೆಯನ್ನು ಪರೀಕ್ಷೆ ಮಾಡಿದೆ? ಯಾಕಪ್ಪಾ ದಾಳಿಕೋರರೊಂದಿಗೆ ಕೈಜೋಡಿಸಿದೆ? ಎಂದು ಕೇಳುವುದು ಯಾವಾಗ?’ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.
'@narendramodi ಅವರೇ,
ಬಹಳ ದಿನಗಳ ಬೇಡಿಕೆಯ ನಂತರ ಸಿಎಂ ಸಿದ್ದರಾಮಯ್ಯನವರನ್ನು ಭೇಟಿಯಾಗಿದ್ದಕ್ಕೆ ಧನ್ಯವಾದಗಳು.
ಮಾಜಿ ಪ್ರಧಾನಿ ದೇವೇಗೌಡರನ್ನು ಕರೆಸಿಕೊಂಡು ಭೇಟಿಯಾಗಿದ್ದಕ್ಕೂ ಧನ್ಯವಾದಗಳು.
ನಿಮ್ಮ ಹೊಸ ಬ್ರದರ್ ಕುಮಾರಸ್ವಾಮಿಯವರನ್ನು ಕರೆಸಿಕೊಂಡು ಭೇಟಿಯಾಗಿದ್ದಕ್ಕೂ ಧನ್ಯವಾದಗಳು.
ನಿಮ್ಮ ಹೊಸ ಬ್ರದರ್ನ ಬ್ರದರ್ ರೇವಣ್ಣನವರನ್ನು… pic.twitter.com/r8BnFiTIjo
— Karnataka Congress (@INCKarnataka) December 21, 2023
ಪ್ರಜಾಪ್ರಭುತ್ವದ ಕತ್ತು ಹಿಸುಕಿ ಕೊಲ್ಲುವ ಕಾರ್ಯ!
‘ಸಂಸತ್ತಿನಲ್ಲಿ ಪ್ರಜಾಪ್ರಭುತ್ವದ ಕತ್ತು ಹಿಸುಕಿ ಕೊಲ್ಲುವ ಕಾರ್ಯ ಮುಂದುವರೆದಿದೆ, ಸರ್ವಾಧಿಕಾರದೆಡೆಗಿನ ಪ್ರಧಾನಿ ಮೋದಿಯವರ ನಡಿಗೆ ವೇಗ ಪಡೆದುಕೊಂಡಿದೆ. ಸರ್ಕಾರದ ಆಜ್ಞಾವರ್ತಿಯಂತಿರುವ ಲೋಕಸಭಾ ಸ್ಪೀಕರ್ ಇಂದು ಸಂಸದ ಡಿ.ಕೆ.ಸುರೇಶ್ ಅವರನ್ನು ಅಮಾನತು ಮಾಡುವ ಮೂಲಕ ಪ್ರಜಾಪ್ರಭುತ್ವವನ್ನು ಶವಪೆಟ್ಟಿಗೆಗೆ ತುಂಬುವ ಕೆಲಸವನ್ನು ಯಶಸ್ವಿಯಾಗಿ ಮಾಡುತ್ತಿದ್ದಾರೆ. ಈ ಅಮಾನತು ಪರ್ವ ಭಾರತದ ಕರಾಳ ಚರಿತ್ರೆಯಾಗಿ ಉಳಿಯಲಿದೆ’ ಎಂದು ಕಾಂಗ್ರೆಸ್ ಟೀಕಿಸಿದೆ.
ಸಂಸತ್ತಿನಲ್ಲಿ ಪ್ರಜಾಪ್ರಭುತ್ವದ ಕತ್ತು ಹಿಸುಕಿ ಕೊಲ್ಲುವ ಕಾರ್ಯ ಮುಂದುವರೆದಿದೆ,
ಸರ್ವಾಧಿಕಾರದೆಡೆಗಿನ ಮೋದಿಯ ನಡಿಗೆ ವೇಗ ಪಡೆದುಕೊಂಡಿದೆ.ಸರ್ಕಾರದ ಆಜ್ಞಾವರ್ತಿಯಂತಿರುವ ಲೋಕಸಭಾ ಸ್ಪೀಕರ್ ಇಂದು ಸಂಸದ @DKSureshINC ಅವರನ್ನು ಅಮಾನತು ಮಾಡುವ ಮೂಲಕ ಪ್ರಜಾಪ್ರಭುತ್ವವನ್ನು ಶವಪೆಟ್ಟಿಗೆಗೆ ತುಂಬುವ ಕೆಲಸವನ್ನು ಯಶಸ್ವಿಯಾಗಿ…
— Karnataka Congress (@INCKarnataka) December 21, 2023
ಇದನ್ನೂ ಓದಿ: ಲೋಕಸಭೆ ಚುನಾವಣೆ ಗೆಲ್ಲಲು ಕಾಂಗ್ರೆಸ್ ರಣತಂತ್ರ
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.