ಪರಿಹಾರದ ಹಣ ತರುತ್ತಿರೋ ಅಥವಾ ಬರಿಗೈ ಬೀಸಿ ಹೋಗುತ್ತೀರೋ: ಪ್ರಧಾನಿ ಮೋದಿಗೆ ಕಾಂಗ್ರೆಸ್ ಪ್ರಶ್ನೆ
ಇಂದು ಮಧ್ಯಾಹ್ನ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಪ್ರಧಾನಿ ಮೋದಿ ಅವರನ್ನು ಸಿಎಂ ಸಿದ್ದರಾಮಯ್ಯನವರು ಸ್ವಾಗತಿಸಲಿದ್ದಾರೆ. ಬೋಯಿಂಗ್ ಇಂಡಿಯಾ ಇಂಜಿನಿಯರಿಂಗ್ ಕೇಂದ್ರ ಉದ್ಘಾಟನೆ ಕಾರ್ಯಕ್ರಮದಲ್ಲಿ ಮೋದಿ ಜೊತೆಗೆ ಸಿದ್ದರಾಮಯ್ಯನವರೂ ಭಾಗಿಯಾಗಲಿದ್ದಾರೆ.
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು ಇಂದು(ಜ.19) ಕರ್ನಾಟಕ ಪ್ರವಾಸ ಕೈಗೊಂಡಿದ್ದಾರೆ. ಶುಕ್ರವಾರ ಮಧ್ಯಾಹ್ನ ಬೆಂಗಳೂರಿಗೆ ಆಗಮಿಸಲಿರುವ ಮೋದಿ, 43 ಎಕರೆ ಕ್ಯಾಂಪಸ್‌ನಲ್ಲಿ 1,600 ಕೋಟಿ ರೂ. ಬಂಡವಾಳದೊಂದಿಗೆ ನಿರ್ಮಿಸಲಾದ ಹೊಸ ಅತ್ಯಾಧುನಿಕ ಬೋಯಿಂಗ್ ಇಂಡಿಯಾ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕೇಂದ್ರ (ಬಿಐಇಟಿಸಿ)ವನ್ನು ಉದ್ಘಾಟಿಸಲಿದ್ದಾರೆ.
ಇದರೊಂದಿಗೆ ಬೋಯಿಂಗ್ ಸುಕನ್ಯಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದು, ಇದು ಹೆಣ್ಣು ಮಕ್ಕಳಿಗೆ ವಾಯುಯಾನ ಕ್ಷೇತ್ರದಲ್ಲಿ ಕೌಶಲ್ಯ ತರಬೇತಿಯನ್ನು ಪಡೆಯಲು ವಿಫುಲ ಅವಕಾಶಗಳನ್ನು ಒದಗಿಸುತ್ತದೆ. ರಾಜ್ಯ ಪ್ರವಾಸ ಕೈಗೊಂಡಿರುವ ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ಟೀಕಾಪ್ರಹಾರ ನಡೆಸಿದೆ.
ಇದನ್ನೂ ಓದಿ: ಖರ್ಗೆ ಫ್ಯಾಮಿಲಿ ವಿರುದ್ಧ ಚಕ್ರವರ್ತಿ ಸೂಲಿಬೆಲೆ ವಾಗ್ದಾಳಿ
ಆರ್ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್‌ಗೆ ಜಾಮೀನು ಪ್ರಕರಣ
ಮಧ್ಯಾಹ್ನ 2.10ಕ್ಕೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತಲುಪಲಿದ್ದಾರೆ. 2.15ಕ್ಕೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣನಿಂದ ರಸ್ತೆ ಮಾರ್ಗವಾಗಿ ದೇವನಹಳ್ಳಿ ತಾಲೂಕಿನ ಭಟ್ಟರ ಮಾರನಹಳ್ಳಿಗೆ ಪ್ರಯಾಣಿಸಲಿದ್ದಾರೆ. ಪ್ರಧಾನಿ ಮೋದಿ ಅವರನ್ನು ಸಿಎಂ ಸಿದ್ದರಾಮಯ್ಯನವರು ಸ್ವಾಗತಿಸಲಿದ್ದಾರೆ. ಬೋಯಿಂಗ್ ಇಂಡಿಯಾ ಇಂಜಿನಿಯರಿಂಗ್ ಕೇಂದ್ರ ಉದ್ಘಾಟನೆ ಕಾರ್ಯಕ್ರಮದಲ್ಲಿ ಮೋದಿ ಜೊತೆಗೆ ಸಿದ್ದರಾಮಯ್ಯನವರೂ ಭಾಗಿಯಾಗಲಿದ್ದಾರೆ.
ಪ್ರಧಾನಿ ಮೋದಿ ಆಗಮನ ಹಿನ್ನೆಲೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯಿರುವ ವಿಮಾನ ನಿಲ್ದಾಣದ ಸುತ್ತಮುತ್ತಲಿನ ರಸ್ತೆಗಳಲ್ಲಿ ವಾಹನ ಸಂಚಾರವನ್ನು ಇಂದು ಬೆಳಗ್ಗೆ 8 ರಿಂದ ಸಂಜೆ 6 ಗಂಟೆವರೆಗೆ ನಿರ್ಬಂಧಿಸಲಾಗಿದೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.