ಬಚ್ಚಾ ಅಮಿತ್ ಶಾ ಎದುರು ನೀವು ಕೈಕಟ್ಟಿ ನಿಲ್ಲುವುದು ಸರಿಯೇ : ಬಿಎಸ್‌ವೈಗೆ ʼಕೈʼ ಪ್ರಶ್ನೆ

ಬಚ್ಚಾ ಅಮಿತ್‌ ಶಾ ಎದುರು ನೀವು ಕೈಕಟ್ಟಿ ನಿಲ್ಲುವುದು ಸರಿಯೇ.. ಮೋದಿಯೂ ನಿಮ್ಮ ಮುಂದೆ ಬಚ್ಚಾ ಅಲ್ಲವೇ ಎಂದು ರಾಜ್ಯ ಕಾಂಗ್ರೆಸ್‌ ಮಾಜಿ ಮುಖ್ಯಮಂತ್ರಿ ಬಿ. ಎಸ್.‌ ಯಡಿಯೂರಪ್ಪ ವಿರುದ್ಧ ಗುಡುಗಿದೆ.

Written by - Krishna N K | Last Updated : Oct 12, 2022, 03:36 PM IST
  • ಬಚ್ಚಾ ಅಮಿತ್‌ ಶಾ ಎದುರು ನೀವು ಕೈಕಟ್ಟಿ ನಿಲ್ಲುವುದು ಸರಿಯೇ
  • ಮೋದಿಯೂ ನಿಮ್ಮ ಮುಂದೆ ಬಚ್ಚಾ ಅಲ್ಲವೇ
  • ರಾಹುಲ್‌ ಗಾಂಧಿಯವರನ್ನು ಬಚ್ಚಾ ಎಂದು ಕರೆದ ಬಿಎಸ್‌ವೈ ವಿರುದ್ಧ ಕೈ ಆಕ್ರೋಶ
ಬಚ್ಚಾ ಅಮಿತ್ ಶಾ ಎದುರು ನೀವು ಕೈಕಟ್ಟಿ ನಿಲ್ಲುವುದು ಸರಿಯೇ : ಬಿಎಸ್‌ವೈಗೆ ʼಕೈʼ ಪ್ರಶ್ನೆ title=

ಬೆಂಗಳೂರು : ಬಚ್ಚಾ ಅಮಿತ್‌ ಶಾ ಎದುರು ನೀವು ಕೈಕಟ್ಟಿ ನಿಲ್ಲುವುದು ಸರಿಯೇ.. ಮೋದಿಯೂ ನಿಮ್ಮ ಮುಂದೆ ಬಚ್ಚಾ ಅಲ್ಲವೇ ಎಂದು ರಾಜ್ಯ ಕಾಂಗ್ರೆಸ್‌ ಮಾಜಿ ಮುಖ್ಯಮಂತ್ರಿ ಬಿ. ಎಸ್.‌ ಯಡಿಯೂರಪ್ಪ ವಿರುದ್ಧ ಗುಡುಗಿದೆ.

ನಿನ್ನೆ ರಾಯಚೂರಿನಲ್ಲಿ ನಡೆದ ಜನಸಂಕಲ್ಪ ಯಾತ್ರೆಯಲ್ಲಿ ಮಾತನಾಡುವಾಗ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿಯವರನ್ನು ಬಚ್ಚಾ ಎಂದು ಕರೆದರು. ಸದ್ಯ ಬಿಎಸ್‌ವೈ ಈ ಹೇಳಿಕೆ ಕೈ ಕಲಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರನ್ನು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಟೀಕೆ ಮಾಡುವುದನ್ನು ವ್ಯಂಗ್ಯವಾಡಿದ್ದ ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ವಿರುದ್ಧ ಕಾಂಗ್ರೆಸ್‌ ವಾಗ್ದಾಳಿ ನಡೆಸಿದೆ.

ಇದನ್ನೂ ಓದಿ: ಬಿಗ್‌ಬಾಸ್‌ನಲ್ಲಿ ನೋಣಗಳ ಗಣಗಣ : ಫನ್ನಿಯಾಗಿತ್ತು ಟಂಗ್ ಟ್ವಿಸ್ಟಿಂಗ್ ಟಾಸ್ಕ್

ಮಾನ್ಯ  ಬಿ.ಎಸ್‌.ಯಡಿಯೂರಪ್ಪನವರೇ, ಈ ಭಾಷೆ ನಿಮ್ಮ ಘನತೆಗೆ ತಕ್ಕುದಲ್ಲ, ಪ್ರಧಾನಿ ಮೋದಿ ಬಿಜೆಪಿಗೆ ಪ್ರಶ್ನಾತೀತರು, ಟೀಕಾತೀತರು ಇರಬಹುದು, ಆದರೆ ಭಾರತ ಪ್ರಜಾಪ್ರಭುತ್ವದ ದೇಶ ಎಂಬುದನ್ನು ಮರೆಯದಿರಿ. ಅಂದಹಾಗೆ ನಿಮ್ಮ ಮುಂದಿನ ಬಚ್ಛಾ ಅಮಿತ್ ಶಾ ಎದುರು ನೀವು ಕೈಕಟ್ಟಿ ನಿಲ್ಲುವುದು ಸರಿಯೇ? ಮೋದಿಯೂ ನಿಮ್ಮ ಮುಂದೆ ಬಚ್ಛಾ ಅಲ್ಲವೇ? ಎಂದು ಬಿಎಸ್‌ವೈ ವಿರುದ್ಧ ಹರಿಹಾಯದ್ದರು.

ಇನ್ನು ರಾಯಚೂರು ಜಿಲ್ಲೆಯ ಗಿಲ್ಲೆಸುಗೂರು ಗ್ರಾಮದಲ್ಲಿ ನಡೆದ ಬಿಜೆಪಿ ಜನಸಂಕಲ್ಪ ಯಾತ್ರೆಯಲ್ಲಿ ಪ್ರಪಂಚವೇ ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವವನ್ನು ಒಪ್ಪಿಕೊಂಡಿರುವಾಗ ಈ ಬಚ್ಚಾ ರಾಹುಲ್‌ ಗಾಂಧಿ ಟೀಕೆ ಮಾಡುತ್ತಾನೆ, ಇದರಿಂದಲೇ ತಿಳಿಯುತ್ತೆ ಯಾವ ಕೆಳಮಟ್ಟಕ್ಕೆ ಕಾಂಗ್ರೆಸ್‌ ಇಳಿದಿದೆ ಎಂಬುವುದು ಎಂದು ಬಿಎಸ್‌ವೈ ಹೇಳಿದ್ದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News