Karnataka Congress : ಬಿಎಸ್ವೈ ಸರ್ಕಾರ `ಕುಂಟು ಕುದುರೆಯ ಮೇಲೆ ಕುರುಡನ ಸವಾರಿ`ಯಂತಾಗಿದೆ
ಎಲ್ಲಿ ಹಾರುತ್ತದೋ, ಎಲ್ಲಿ ಬೀಳುತ್ತದೋ ತಿಳಿಯದೆ ಕಣ್ಮುಚ್ಚಿಕೊಂಡು `ದೇವರೇ ಗತಿ` ಎನ್ನುವ ಸ್ಥಿತಿಗೆ ಬಂದಿದ್ದಾರೆ ಜನ.
ಬೆಂಗಳೂರು : ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದ ಆಡಳಿತ ರಾಜ್ಯಕ್ಕೆ 'ಕುಂಟು ಕುದುರೆಯ ಮೇಲೆ ಕುರುಡನ ಸವಾರಿ'ಯಂತಾಗಿದೆ ಎಂದು ಕರ್ನಾಟಕ ಕಾಂಗ್ರೆಸ್ ಸಿಎಂ ಯಡಿಯೂರಪ್ಪ ನೇತೃತ್ವದ ಸರ್ಕಾರವನ್ನು ಟೀಕಿಸಿದೆ.
ಈ ಕುರಿತು ಅಧಿಕೃತ ಟ್ವಿಟ್ಟರ್ ನಲ್ಲಿ ಬರೆದುಕೊಂಡಿರುವ ಕರ್ನಾಟಕ ಕಾಂಗ್ರೆಸ್(Karnataka Congress), ಎಲ್ಲಿ ಹಾರುತ್ತದೋ, ಎಲ್ಲಿ ಬೀಳುತ್ತದೋ ತಿಳಿಯದೆ ಕಣ್ಮುಚ್ಚಿಕೊಂಡು 'ದೇವರೇ ಗತಿ' ಎನ್ನುವ ಸ್ಥಿತಿಗೆ ಬಂದಿದ್ದಾರೆ ಜನ.
ಇದನ್ನೂ ಓದಿ : Tauktae Cyclone : ರಾಜ್ಯದಲ್ಲಿ 2 ದಿನ ಭಾರೀ ಮಳೆ, ಕೆಲ ಜಿಲ್ಲೆಗಳಲ್ಲಿ 'ಯೆಲ್ಲೊ ಅಲರ್ಟ್'
ಹಪಹಪಿಯಿಂದ ವಾಮಮಾರ್ಗದಲ್ಲಿ ಅಧಿಕಾರ ಹಿಡಿದವರಿಂದ ರಾಜ್ಯ(State)ಕ್ಕೆ ನಿರಂತರ ಸಂಕಷ್ಟವೇ. ಆಪರೇಷನ್ ಕಮಲದ ಮೂಲಕ ಅಧಿಕಾರ ಹಿಡಿದಾಗ ನೆರೆ ಹಾವಳಿ, ಆ ಸಂದರ್ಭದಲ್ಲಿ ಸಂಪುಟವೇ ಇರಲಿಲ್ಲ.
ಇದನ್ನೂ ಓದಿ :Shashikala Jolle : ಕೋವಿಡ್ ಲಸಿಕೆ ಪಡೆಯಲು ಹಿರಿಯ ನಾಗರೀಕರಿಗೆ ಬೇಕಿಲ್ಲ 'ಆಧಾರ್ ಕಾರ್ಡ್'..!
ಆನಂತರ ನೆರೆ ಪರಿಹಾರ ತರುವಲ್ಲಿಯೂ 25 ಸಂಸದರ ಸಹಿತ ಇಡೀ ಸರ್ಕಾರ(Karnataka Govt) ಸೋತಿದ್ದ ಪರಿಣಾಮ ಇಂದಿಗೂ ರಾಜ್ಯದ ಜನತೆ ಚೇತರಿಸಿಕೊಳ್ಳಲಿಲ್ಲ. ಎರಡೆರೆದು ಭಾರಿ ನೆರೆ ಬಂದಾಗಲೂ ಕೇಂದ್ರದ ಅಸಡ್ಡೆ ಧೋರಣೆಯನ್ನು ಪ್ರಶ್ನಿಸದೆ ಹೇಡಿಗಳಾಗಿ ಕುಳಿತರು.
ಇದನ್ನೂ ಓದಿ : Black Fungus : ಬ್ಲ್ಯಾಕ್ ಫಂಗಸ್ ಬಗ್ಗೆ 'ಶಾಕಿಂಗ್' ಹೇಳಿಕೆ ನೀಡಿದ ಸಚಿವ ಸುಧಾಕರ್..!
ನೆರೆ, ಬರದ ಸಂಕಷ್ಟದ ನಂತರ ರಾಜ್ಯಕ್ಕೆ ಕರೋನಾ(Corona) ಭೀಕರತೆ ಎದುರಾಯಿತು, ಆಗಲೂ ಈ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿತೆ ವಿನಃ ಜನರ ಕೈ ಹಿಡಿಯಲಿಲ್ಲ. 2ನೇ ಅಲೆಯ ಬಗ್ಗೆ ತಜ್ಞರ ಎಚ್ಚರಿಕೆಯನ್ನು ಕಡೆಗಣಿಸಿ, ಸಂಪುಟ ಕಿತ್ತಾಟ, ಸಿಡಿ ರಂಪಾಟದಲ್ಲಿ ಮುಳುಗಿತ್ತು ಬೇಜವಾಬ್ದಾರಿ ಬಿಜೆಪಿ ಸರ್ಕಾರ.
ಇದನ್ನೂ ಓದಿ : S Suresh Kumar : SSLC - ದ್ವಿತೀಯ PUC ಪರೀಕ್ಷೆ ರದ್ದು? ಈ ಸುದ್ದಿ ನಿಜಾನಾ ಇಲ್ಲಿದೆ ನೋಡಿ!
ಡಬಲ್ ಇಂಜಿನ್ ಸರ್ಕಾರಗಳಿಂದ ಅಭಿವೃದ್ಧಿಯ ಮಹಾಪರ್ವವೇ ಶುರುವಾಗಲಿದೆ ಎಂದು ಪುಂಗಿ ಊದಿದವರು 15ನೇ ಹಣಕಾಸು ಆಯೋಗದಲ್ಲಿ ಬರಬೇಕಾದ ಹಣವನ್ನೂ ಕೇಳಲಿಲ್ಲ, GST ಬಾಕಿ ಕೇಳಲಿಲ್ಲ, ನೆರೆ ಪರಿಹಾರ 1500 ಕೋಟಿ ಬಿಟ್ಟು ಮತ್ತೆ ಬರಲೇ ಇಲ್ಲ.ಇಷ್ಟೆಲ್ಲಾ ಅನ್ಯಾಯವಾದರೂ ಮೋದಿ ಭಜನೆ ಬಿಟ್ಟು ಬೇರೇನೂ ಮಾಡಲಿಲ್ಲ ಬಿಜೆಪಿಗರು.
ಇದನ್ನೂ ಓದಿ : BC Patil : ಕೋವಿಡ್ ನಿಂದ ಮೃತಪಟ್ಟ ಕುಟುಂಬಗಳಿಗೆ ₹ 50 ಸಾವಿರ ಪರಿಹಾರ ಘೋಷಿಸಿದ ಕೃಷಿ ಸಚಿವ!
ಈಗ ಕರೋನಾ 2ನೇ ಅಲೆಯಿಂದ ರಾಜ್ಯ ಸ್ಮಶಾನದಂತಾಗುತ್ತಿದೆ. ಮೋದಿಯವರನ್ನು ಚಮತ್ಕಾರಿ ಬಾಬಾ ಎಂಬಂತೆ ಬಹುಪರಾಕ್ ಹಾಕುವ ಬಿಜೆಪಿ ಸಂಸದರು(BJP MP), ಸಚಿವರು ಆಕ್ಸಿಜನ್, ಪಿಎಂ ಕೇರ್ಸ್, ವ್ಯಾಕ್ಸಿನ್ ಎಲ್ಲದರಲ್ಲಿಯೂ ಕೇಂದ್ರ ಸರ್ಕಾರದ ಅನ್ಯಾಯವನ್ನು ಗಟ್ಟಿಯಾಗಿ ಪ್ರಶ್ನಿಸುವ ಧೈರ್ಯ ತೋರದೆ ಸರ್ವಾಧಿಕಾರಿಯ ಗುಲಾಮರಂತೆ ವರ್ತಿಸುತ್ತಿದ್ದಾರೆ.
ಇದನ್ನೂ ಓದಿ : Heavy Rain : ಗುಜರಾತಿನತ್ತ ಪಯಣ ಬಳಸಿದ ತೌಕ್ತೆ ಸೈಕ್ಲೋನ್ : ರಾಜ್ಯದಲ್ಲಿ ಮೇ 20ರವರೆಗೆ ಭಾರೀ ಮಳೆ!
ಕರ್ನಾಟಕದ ಬಗೆಗೆ ಕೇಂದ್ರ ಸರ್ಕಾರದ ಈ ಅಸಡ್ಡೆ, ದ್ವೇಷ ಯಡಿಯೂರಪ್ಪ(BS Yediyurappa)ನವರ ಕಾರಣಕ್ಕೋ, ಕನ್ನಡಿಗರ ಮೇಲಿನ ಅಸಹನೆಯ ಕಾರಣಕ್ಕೋ ಎನ್ನುವುದನ್ನ ಬಿಜೆಪಿಗರೇ ಉತ್ತರಿಸಬೇಕು. #BSYmuktaBJP ಮಾಡುವ ಇವರ ಅಜೆಂಡಾದ ಆಂತರಿಕ ಕಿತ್ತಾಟದಲ್ಲಿ ಕನ್ನಡಿಗರು ತಬ್ಬಲಿಗಳಾಗುತ್ತಿದ್ದಾರೆ, ಈ ತುರ್ತು ಪರಿಸ್ಥಿತಿಯ ನಡುವೆಯೂ #BJPvsBJP ಬೇಕೇ? ಎಂದು ಜನತೆಯನ್ನ ಪ್ರಶ್ನಿಸಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.