ಬೆಂಗಳೂರು: ರಾಜ್ಯದಲ್ಲಿ ಸಾರಿಗೆ ನಿಗಮಗಳ ನೌಕರರ ಮುಷ್ಕರದ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಪಕ್ಷ 'ರೋಮಾಂಚನಕಾರಿ' ಟ್ವೀಟ್ ಮಾಡಿದೆ. ಸಾರಿಗೆ ನೌಕರರ ಪ್ರತಿಭಟನೆ ನಿರ್ವಹಿಸುವುದರಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ಸೋತಿದೆ ಎಂದು ಕರ್ನಾಟಕ ಕಾಂಗ್ರೆಸ್ ಆರೋಪಿಸಿದೆ. ಪ್ರಯಾಣಿಕರ ಪರದಾಟ ಸರ್ಕಾರಕ್ಕೆ ಕಾಣಿಸದಂತಾಗಿದೆ ಎಂದು ಟ್ವೀಟ್‌ನಲ್ಲಿ ಬರೆದುಕೊಂಡಿದೆ.


ರಾಜ್ಯದ ಹಲವೆಡೆ ರಸ್ತೆಗಿಳಿದ KSRTC ಬಸ್​: ಎಸ್ಕಾರ್ಟ್​ ಭದ್ರತೆಯಲ್ಲಿ BMTC ಬಸ್​ ಸಂಚಾರ ಶುರು!


COMMERCIAL BREAK
SCROLL TO CONTINUE READING

ಈ ಕುರಿತು ಟ್ವೀಟ್ ಮಾಡಿರುವ ರಾಜ್ಯ ಕಾಂಗ್ರೆಸ್(Karnataka Congress), ಸಾರಿಗೆ ನೌಕರರ ಪ್ರತಿಭಟನೆ ನಿರ್ವಹಿಸುವುದರಿಲ್ಲಿ ರಾಜ್ಯ ಸರ್ಕಾರ ಸೋತಿದೆ. ಪ್ರಯಾಣಿಕರ ಪರದಾಟ, ಅನಾನುಭವಿ ಖಾಸಗಿ ಚಾಲಕರ ಪೀಕಲಾಟ, ಸರ್ಕಾರದ ಮೊಂಡು ಹಠ, ಖಾಸಗಿ ಬಸ್ ಮಾಲೀಕರ ನಿರಾಕರಣೆ. ಲಕ್ಷ್ಮಣ ಸವದಿ ಅವರೇ ಬಿಕ್ಕಟ್ಟುಗಳನ್ನು ನಿರ್ವಹಿಸುವುದೆಂದರೆ ಮೊಬೈಲ್ ನಲ್ಲಿ ರೋಮಾಂಚನದ ಚಿತ್ರ ವೀಕ್ಷಿಸಿದಂತಲ್ಲ ಎಂದು ಕಾಂಗ್ರೆಸ್ ಕಿಡಿಕಾರಿದೆ. 


'ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಮಾಡಲು ಸಾಧ್ಯವೇ ಇಲ್ಲ'