KN Rajanna resigns: ಸಚಿವ ಸ್ಥಾನಕ್ಕೆ ಕೆ.ಎನ್.ರಾಜಣ್ಣ ರಾಜೀನಾಮೆ

KN Rajanna resigns: ಕರ್ನಾಟಕ ಸಹಕಾರ ಸಚಿವ ಕೆ.ಎನ್. ರಾಜಣ್ಣ ರಾಜೀನಾಮೆ ತಮ್ಮ ಸ್ಥಾನಕ್ಕೆ ನೀಡಿದ್ದಾರೆ.

Written by - Chetana Devarmani | Last Updated : Aug 11, 2025, 04:55 PM IST
  • ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ "ಮತ ಕಳ್ಳತನ" ನಡೆದಿದೆ
  • ಸಾರ್ವಜನಿಕವಾಗಿ ಹೇಳಿಕೆ ನೀಡಿದ್ದ .ಎನ್. ರಾಜಣ್ಣ
  • ಸಚಿವ ಸ್ಥಾನಕ್ಕೆ ಕೆ.ಎನ್. ರಾಜಣ್ಣ ರಾಜೀನಾಮೆ
KN Rajanna resigns: ಸಚಿವ ಸ್ಥಾನಕ್ಕೆ ಕೆ.ಎನ್.ರಾಜಣ್ಣ ರಾಜೀನಾಮೆ

ಬೆಂಗಳೂರು: 2024 ರ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ "ಮತ ಕಳ್ಳತನ" ನಡೆದಿದೆ ಎಂದು ಸಾರ್ವಜನಿಕವಾಗಿ ಹೇಳಿಕೆ ನೀಡಿದ ವಿಚಾರ ಗಂಭೀರ ಸ್ವರೂಪ ಪಡೆದಿದೆ. ಇದೀಗ ಕರ್ನಾಟಕ ಸಹಕಾರ ಸಚಿವ ಕೆ.ಎನ್. ರಾಜಣ್ಣ ರಾಜೀನಾಮೆ ತಮ್ಮ ಸ್ಥಾನಕ್ಕೆ ನೀಡಿದ್ದಾರೆ.

Add Zee News as a Preferred Source

ರಾಜಣ್ಣ ಅವರ ಹೇಳಿಕೆ ರಾಜಕೀಯ ವಿವಾದಕ್ಕೆ ಕಾರಣವಾದ ನಂತರ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸುವಂತೆ ಕಾಂಗ್ರೆಸ್ ಹೈಕಮಾಂಡ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸೂಚಿಸಿದೆ.

ಸಚಿವರ ರಾಜೀನಾಮೆಯ ಅಧಿಕೃತ ಹೇಳಿಕೆಯನ್ನು ವಿಧಾನಸಭೆಯಲ್ಲಿ ನೀಡಲು ಮುಖ್ಯಮಂತ್ರಿಗೆ ಅವಕಾಶವಿಲ್ಲ. ರಾಜಣ್ಣ ಅವರ ಪುತ್ರ, ಎಂಎಲ್‌ಸಿ ಆಗಿರುವ ರಾಜೇಂದ್ರ ಅವರು ಮುಖ್ಯಮಂತ್ರಿಗೆ ರಾಜೀನಾಮೆ ಪತ್ರವನ್ನು ಹಸ್ತಾಂತರಿಸಿದ್ದಾರೆ ಎಂದು ಮೂಲಗಳು ಸೂಚಿಸಿವೆ.

ಇದನ್ನೂ ಓದಿ:ಸರ್ಕಾರ ಭ್ರಷ್ಟಾಚಾರ, ದುರಾಡಳಿತ ಮಾಡ್ತಿದೆ : ನಿಖಿಲ್‌ ಕುಮಾರಸ್ವಾಮಿ

ವಿಪಕ್ಷ ಬಿಜೆಪಿ ವಿಧಾನಸಭೆಯಲ್ಲಿ ರಾಜೀನಾಮೆ ಕುರಿತು ಸ್ಪಷ್ಟನೆಗಾಗಿ ಒತ್ತಾಯಿಸಿದಾಗ, ಸಿಎಂ ಹೇಳಿಕೆ ನೀಡುತ್ತಾರೆ ಎಂದು ರಾಜಣ್ಣ ವಿಧಾನಸಭೆಗೆ ತಿಳಿಸಿದರು. 

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತರಾಗಿರುವ ರಾಜಣ್ಣ ಅವರ ಮತದಾರರ ಪಟ್ಟಿಯ ದುರುಪಯೋಗದ ಆರೋಪ ಕಾಂಗ್ರೆಸ್ ಹೈಕಮಾಂಡ್ ಅನ್ನು ಮುಜುಗರಕ್ಕೀಡು ಮಾಡಿತ್ತು. ವರಿಷ್ಠರ ಸೂಚನೆ ಮೇರೆಗೆ ರಾಜಣ್ಣ ಅವರ ರಾಜೀನಾಮೆಯನ್ನು ಸಿಎಂ ಸಿದ್ದರಾಮಯ್ಯ ಅಂಗೀಕಾರ ಮಾಡಿದ್ದಾರೆ.

ರಾಜ್ಯಪಾಲರಿಗೆ ದೂರವಾಣಿ ಕರೆ ಮಾಡಿ ಅಂಗೀಕರಿಸುವಂತೆ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ರಾಜ್ಯಪಾಲರಿಂದ ರಾಜೀನಾಮೆ ಅಂಗೀಕಾರವಾಗಿದೆ ಎನ್ನಲಾಗುತ್ತಿದ್ದು, ಸಂಜೆ ವೇಳೆಗೆ ಅಧಿಕೃತ ಆದೇಶ ಹೊರ ಬರುವ ಸಾಧ್ಯತೆಯಿದೆ.

ಇದನ್ನೂ ಓದಿ:ಮಂಡ್ಯ ಜಿಲ್ಲೆಯಲ್ಲಿ ಕೈ ಶಾಸಕರು ಮತ್ತು ಸಚಿವರ ವಿರುದ್ಧ ತಿರುಗಿ ಬಿದ್ದ ಮತದಾರರು

ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.

About the Author

Chetana Devarmani

" ಚೇತನಾ ದೇವರಮನಿ ಅವರು ಪ್ರಸ್ತುತ ʻಜೀ ಕನ್ನಡ ನ್ಯೂಸ್‌ʼ ವೆಬ್‌ನಲ್ಲಿ Senior Sub Editor ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಚೇತನಾ ದೇವರಮನಿ ಅವರು ಅನುಭವಿ ಪತ್ರಕರ್ತರಾಗಿದ್ದು, ಮಾಧ್ಯಮ ಕ್ಷೇತ್ರದಲ್ಲಿ 7 ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿದ್ದಾರೆ. ಅವರು ಸಿನಿಮಾ, ಕ್ರೈಂ, ಆರೋಗ್ಯ, ಬ್ಯುಸಿನೆಸ್, ಆಧ್ಯಾತ್ಮಿಕ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. 2018ರಲ್ಲಿ ʻರಾಮೋಜಿ ಗ್ರೂಪ್‌ʼನ ಈಟಿವಿ ಭಾರತ ಕರ್ನಾಟಕ ಸಂಸ್ಥೆಯಲ್ಲಿ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು ಮೂರು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಬಳಿಕ 2021 ರಲ್ಲಿ ʻಇಂಡಿಯಾ ಡಾಟ್‌ ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ ತಂಡ ಸೇರಿದರು. ...Read More

Trending News