Karnataka Dam Water Level: ಕರ್ನಾಟಕದ ಪ್ರಮುಖ ಡ್ಯಾಂಗಳ ನೀರಿನ ಮಟ್ಟ
Karnataka Dam Water Level: ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ವರುಣ ಆರ್ಭಟ ಜೋರಾಗಿದೆ. ನಿರಂತರವಾಗಿ ಮಳೆಯಾಗುತ್ತಿರುವುದರಿಂದ ರಾಜ್ಯದ ಪ್ರಮುಖ ನದಿಗಳಲ್ಲಿ ಒಳಹರಿವು ಹೆಚ್ಚಾಗಿದೆ.
ಬೆಂಗಳೂರು: ಕಳೆದ ಕೆಲವು ದಿನಗಳಿಂದ ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಮಳೆ ಅಬ್ಬರ ಜೋರಾಗಿದೆ. ವರುಣನ ಆರ್ಭಟ ಜೋರಾಗಿದ್ದು, ವಾಡಿಕೆಗಿಂತ ಹೆಚ್ಚು ಮಳೆಯಾಗುತ್ತಿದೆ. ಕರಾವಳಿ ಪ್ರದೇಶಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಮಂಗಳೂರಿನಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಮೈಸೂರು ಭಾಗದಲ್ಲಿಯೂ ಮಳೆ ಅಬ್ಬರ ಜೋರಾಗಿದೆ.
ಉತ್ತರ ಕರ್ನಾಟಕದ ಬೆಳಗಾವಿ, ಧಾರವಾಡ, ಗದಗ, ಕಲ್ಯಾಣ ಕರ್ನಾಟಕದ ಕೊಪ್ಪಳ ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ವರುಣ ಆರ್ಭಟ ಜೋರಾಗಿದೆ. ನಿರಂತರವಾಗಿ ಮಳೆಯಾಗುತ್ತಿರುವುದರಿಂದ ರಾಜ್ಯದ ಪ್ರಮುಖ ನದಿಗಳಲ್ಲಿ ಒಳಹರಿವು ಹೆಚ್ಚಾಗಿದೆ. ಇದರಿಂದ ಜಲಾಶಯಗಳಲ್ಲಿ ನೀರಿನ ಮಟ್ಟ ಕ್ರಮೇಣ ಏರಿಕೆಯಾಗುತ್ತಿದ್ದು, ರೈತರ ಮೊಗದಲ್ಲಿ ಮಂದಹಾಸ ಮೂಡಿದಂತಾಗಿದೆ. ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ಸೋಮವಾರ(ಜುಲೈ 24) ನೀರಿನ ಮಟ್ಟ ಮತ್ತು ಒಳ ಹರಿವು ಎಷ್ಟಿದೆ? ಯಾವ ಡ್ಯಾಂನಲ್ಲಿ ಎಷ್ಟು ಪ್ರಮಾಣದ ನೀರು ಸಂಗ್ರಹವಾಗಿದೆ ಎಂಬ ಮಾಹಿತಿ ಇಲ್ಲಿದೆ.
ಇದನ್ನೂ ಓದಿ: ಗೃಹಲಕ್ಷ್ಮೀ ಯೋಜನೆಗೆ 22,90,782 ಮಹಿಳೆಯರಿಂದ ಅರ್ಜಿ ಸಲ್ಲಿಕೆ
ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಮಟ್ಟ
ಕರ್ನಾಟಕದ ಪ್ರಮುಖ ಜಲಾಶಯಗಳು | ಗರಿಷ್ಠ ನೀರಿನ ಮಟ್ಟ (ಮೀ) | ಒಟ್ಟು ಸಾಮರ್ಥ್ಯ (TMC) | ಇಂದಿನ ನೀರಿನ ಮಟ್ಟ (TMC) | ಕಳೆದ ವರ್ಷದ ನೀರಿನ ಮಟ್ಟ (TMC) | ಒಳಹರಿವು (ಕ್ಯೂಸೆಕ್ಸ್) | ಹೊರಹರಿವು (ಕ್ಯೂಸೆಕ್ಸ್) |
ಆಲಮಟ್ಟಿ ಜಲಾಶಯ | 519.60 | 123.08 | 53.25 | 96.58 | 1,07,769 | 6,671 |
ತುಂಗಭದ್ರಾ ಜಲಾಶಯ | 497.71 | 105.79 | 21.36 | 104.50 | 54,657 | 179 |
ಮಲಪ್ರಭಾ ಜಲಾಶಯ | 633.8 | 37.73 | 10.88 | 24.11 | 13,840 | 194 |
ಲಿಂಗನಮಕ್ಕಿ ಜಲಾಶಯ | 554.44 | 151.75 | 40.57 | 90.31 | 52,374 | 1,285 |
ಕಬಿನಿ ಜಲಾಶಯ | 696.13 | 19.52 | 14.60 | 19.52 | 13,114 | 2,146 |
ಭದ್ರಾ ಜಲಾಶಯ | 657.73 | 71.54 | 30.45 | 69.24 | 12,169 | 167 |
ಘಟಪ್ರಭಾ ಜಲಾಶಯ | 662.91 | 51 | 17.88 | 34.68 | 29,501 | 98 |
ಹೇಮಾವತಿ ಜಲಾಶಯ | 890.58 | 37.10 | 19.75 | 36.62 | 12,088 | 200 |
ವರಾಹಿ ಜಲಾಶಯ | 594.36 | 31.10 | 7.33 | 14.05 | 7,731 | 00 |
ಹಾರಂಗಿ ಜಲಾಶಯ | 871.38 | 8.50 | 7.28 | 7.51 | 16,646 | 8,916 |
ಸೂಫಾ ಜಲಾಶಯ | 564.33 | 145.33 | 52.61 | 66.03 | 51,431 | 00 |
ಇದನ್ನೂ ಓದಿ: ನೀರಿಲ್ಲದೇ ಕೆ.ಆರ್.ಎಸ್ ಜಲಾಶಯ ಖಾಲಿ.. ಖಾಲಿ!
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.