ಯತೀಂದ್ರ ಜವಾಬ್ದಾರಿಯುತ ನಾಯಕ, ಅವರ ಮಾತನ್ನು ತಿರುಚುವ ಅಗತ್ಯವಿಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್

Karnataka DCM DK Shivakumar: ಅವರು ಮುಖ್ಯಮಂತ್ರಿಯಾಗಿ, ನಾನು ಕಾಂಗ್ರೆಸ್ ಪಕ್ಷದ ರಾಜ್ಯ ಅಧ್ಯಕ್ಷನಾಗಿ ಇಬ್ಬರೂ ಒಟ್ಟಿಗೆ ಚುನಾವಣೆ ನಡೆಸುತ್ತೇವೆ. ಅವರ ನಾಯಕತ್ವದಲ್ಲಿ ಚುನಾವಣೆ ನಡೆಯಲಿದೆ. ಅದರಲ್ಲಿ ಅನುಮಾನವಿಲ್ಲ ಎಂದರು. 

Written by - Prashobh Devanahalli | Last Updated : Jan 17, 2024, 04:31 PM IST
  • ಯತೀಂದ್ರ ಅವರು ಜವಾಬ್ದಾರಿಯುತ ನಾಯಕ
  • ಅವರ ಹೇಳಿಕೆ ತಿರುಚುವ ಅಗತ್ಯವಿಲ್ಲ
  • ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿಕೆ
ಯತೀಂದ್ರ ಜವಾಬ್ದಾರಿಯುತ ನಾಯಕ, ಅವರ ಮಾತನ್ನು ತಿರುಚುವ ಅಗತ್ಯವಿಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್ title=

ಬೆಂಗಳೂರು: ಯತೀಂದ್ರ ಅವರು ಜವಾಬ್ದಾರಿಯುತ ನಾಯಕ. ತಮಗೆ ಶಕ್ತಿ ನೀಡುವಂತೆ ಜನರನ್ನು ಕೇಳುವುದು ಸ್ವಾಭಾವಿಕ. ಅವರ ಹೇಳಿಕೆ ತಿರುಚುವ ಅಗತ್ಯವಿಲ್ಲ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದರು. 

ನಮ್ಮ ಸರ್ಕಾರ ಐದು ವರ್ಷ ಬಲಿಷ್ಠವಾಗಿರುತ್ತದೆ. ಸಿದ್ದರಾಮಯ್ಯ ಅವರು ಈಗ ನಮ್ಮ ಮುಖ್ಯಮಂತ್ರಿಗಳು. ಅವರು ಮುಖ್ಯಮಂತ್ರಿಯಾಗಿ, ನಾನು ಕಾಂಗ್ರೆಸ್ ಪಕ್ಷದ ರಾಜ್ಯ ಅಧ್ಯಕ್ಷನಾಗಿ ಇಬ್ಬರೂ ಒಟ್ಟಿಗೆ ಚುನಾವಣೆ ನಡೆಸುತ್ತೇವೆ. ಅವರ ನಾಯಕತ್ವದಲ್ಲಿ ಚುನಾವಣೆ ನಡೆಯಲಿದೆ. ಅದರಲ್ಲಿ ಅನುಮಾನವಿಲ್ಲ ಎಂದರು. 

ಇದನ್ನೂ ಓದಿ:ಪ್ರಧಾನಿ ಮೋದಿ ಟೀಕಿಸಿದ್ದ ಸಿಎಂ ಸಿದ್ದರಾಮಯ್ಯಗೆ ಬಸವರಾಜ್ ಬೊಮ್ಮಾಯಿ ತಿರುಗೇಟು! 

ಆಸೆ ಪಡುವುದು, ಜನರಿಗೆ ಶಕ್ತಿ ನೀಡುವಂತೆ ಕೇಳುವುದು ತಪ್ಪಲ್ಲ. ನಮ್ಮ ಭಾಗದಲ್ಲಿ ನಾನು ಕೂಡ ಶಕ್ತಿ ನೀಡುವಂತೆ ಜನರ ಬಳಿ ಕೇಳುತ್ತೇನೆ. ಅದನ್ನು ತಿರುಚುವ ಅಗತ್ಯವಿಲ್ಲ. ಯತೀಂದ್ರ ಬಹಳ ಜವಾಬ್ದಾರಿಯುತ ನಾಯಕ. ನಾವು ಅವರಿಗೆ ಪ್ರೋತ್ಸಾಹ ನೀಡುತ್ತೇವೆ ಎಂದು ಹೇಳಿದರು. 

ಶಿವಕುಮಾರ್ ಅವರಿಗೆ ಅಧಿಕಾರ ಸಿಗಬಾರದು ಎಂಬ ಅಧಿಕಾರ ಹಂಚಿಕೆ ಸೂತ್ರ ಕಾಂಗ್ರೆಸ್ ನಲ್ಲಿ ಆಗಿದೆ ಎಂಬ ಬಿಜೆಪಿ ಟೀಕೆ ಬಗ್ಗೆ ಕೇಳಿದಾಗ, “ಬಿಜೆಪಿಯವರು ಅವರ ಪಕ್ಷದ ವಿಚಾರ ಸರಿ ಮಾಡಿಕೊಳ್ಳಲಿ” ಎಂದು ತಿರುಗೇಟು ನೀಡಿದರು.

ಮೈಸೂರು ಸ್ಯಾಂಡಲ್ ನಕಲಿ ಸೋಪು ತಯಾರಕರ ಜತೆ ಬಿಜೆಪಿ ನಾಯಕರ ಒಡನಾಟದ ವಿಚಾರವಾಗಿ ಕೇಳಿದಾಗ, ನಕಲಿ ಮೈಸೂರು ಸ್ಯಾಂಡಲ್ ಸೋಪ್ ಗಳನ್ನು ನಾನೂ ನೋಡಿದ್ದೇನೆ. ನೈಜ ಹಾಗೂ ನಕಲಿ ಎರಡೂ ಮಾದರಿಯ ಸಾಬೂನು ನೋಡಿದ್ದೇವೆ ಎಂದರು. 

ನಕಲಿ ಸೋಪುಗಳು ಒಂದು ದಿನದ ನಂತರ ಬಣ್ಣ ಕಳೆದುಕೊಳ್ಳುತ್ತವೆ. ಈ ಬಗ್ಗೆ ತನಿಖೆಯಾಗಬೇಕು ಎಂದು ನಾನು ಈಗಾಗಲೇ ಹೇಳಿದ್ದೆ. ಈ ಹಿಂದೆ ಮೈಸೂರು ಲ್ಯಾಂಪ್ಸ್ ಗಳನ್ನು ನಕಲು ಮಾಡಲಾಗುತ್ತಿತ್ತು. ಈಗ ಮೈಸೂರ್ ಸ್ಯಾಂಡಲ್ ನಕಲಿ ಸೋಪು ಬಗ್ಗೆ ತನಿಖೆ ಮಾಡಿ ಒಳ್ಳೆಯ ಕೆಲಸ ಮಾಡಿದ್ದಾರೆ. ಇದರ ವಿರುದ್ಧ ಕಾನೂನು ರೀತಿಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಇದನ್ನೂ ಓದಿ: ಬ್ರಿಟೀಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟಿದ್ದು ಕಾಂಗ್ರೆಸ್ : ಸಿಎಂ 

ಹುಬ್ಬಳ್ಳಿಯಲ್ಲಿ 300 ಕೋಟಿ ಮೌಲ್ಯದ ರೈಲ್ವೇ ಭೂಮಿಯನ್ನು ಕೇವಲ 80 ಕೋಟಿಗೆ ಬಿಡ್ ಕರೆಯಲು ಮುಂದಾಗಿದ್ದು, ಇದರ ಹಿಂದೆ ಬಿಜೆಪಿ ನಾಯಕರ ಕೈವಾಡದ ಬಗ್ಗೆ ಕೇಳಿದಾಗ, ಈ ಬಗ್ಗೆ ನನಗೆ ಮಾಹಿತಿ ಇಲ್ಲ. ಮಾಹಿತಿ ಇಲ್ಲದೆ ನಾನು ಮಾತನಾಡುವುದಿಲ್ಲ. ಅನಗತ್ಯವಾಗಿ ಮಾತನಾಡುವುದಿಲ್ಲ ಎಂದು ತಿಳಿಸಿದರು. 

ನಿಗಮ ಮಂಡಳಿ ಪಟ್ಟಿ ವಿಚಾರವಾಗಿ ಕೇಳಿದಾಗ, “ನಿಗಮ ಮಂಡಳಿ ನೇಮಕ ಪಟ್ಟಿ ಶೀಘ್ರವೇ ಬಿಡುಗಡೆ ಮಾಡಲಾಗುವುದು. ಮುಖ್ಯಮಂತ್ರಿಗಳು ಹೇಳಿದಾಗ ನಿಮ್ಮ ಗಮನಕ್ಕೆ ತರುತ್ತೇನೆ” ಎಂದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News