DK Shivakumar: ರಾಜಕೀಯ ನೆಲೆ ಕಂಡುಕೊಳ್ಳಲು ಬಿಜೆಪಿ ಜನರನ್ನು ಎತ್ತಿಕಟ್ಟುತ್ತಿದೆ: ಡಿಸಿಎಂ ಡಿಕೆ ಶಿವಕುಮಾರ್

DK Shivakumar On BJP : ರಾಜಕೀಯ ನೆಲೆ ಇಲ್ಲದ ಬಿಜೆಪಿಯು ಅಸ್ಥಿತ್ವ ಕಂಡುಕೊಳ್ಳಲು ಜನರನ್ನು ಎತ್ತಿಕಟ್ಟಲು ಪ್ರಯತ್ನಿಸುತ್ತಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಟೀಕಿಸಿದ್ದಾರೆ.

Written by - Prashobh Devanahalli | Last Updated : Jan 29, 2024, 01:56 PM IST
  • ರಾಜಕೀಯ ನೆಲೆ ಇಲ್ಲದ ಬಿಜೆಪಿ
  • ಅಸ್ಥಿತ್ವ ಕಂಡುಕೊಳ್ಳಲು ಜನರನ್ನು ಎತ್ತಿಕಟ್ಟುತ್ತಿದೆ
  • ಡಿಸಿಎಂ ಡಿ.ಕೆ. ಶಿವಕುಮಾರ್ ಟೀಕೆ
DK Shivakumar: ರಾಜಕೀಯ ನೆಲೆ ಕಂಡುಕೊಳ್ಳಲು ಬಿಜೆಪಿ ಜನರನ್ನು ಎತ್ತಿಕಟ್ಟುತ್ತಿದೆ: ಡಿಸಿಎಂ ಡಿಕೆ ಶಿವಕುಮಾರ್  title=

ಬೆಂಗಳೂರು: ಮಂಡ್ಯದಲ್ಲಿ ರಾಜಕೀಯ ನೆಲೆ ಇಲ್ಲದ ಬಿಜೆಪಿಯು ಅಸ್ಥಿತ್ವ ಕಂಡುಕೊಳ್ಳಲು ಜನರನ್ನು ಎತ್ತಿಕಟ್ಟಲು ಪ್ರಯತ್ನಿಸುತ್ತಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಟೀಕಿಸಿದ್ದಾರೆ. ಮಂಡ್ಯದಲ್ಲಿ ಹನುಮಧ್ವಜ ವಿಚಾರವಾಗಿ ಎದ್ದಿರುವ ವಿವಾದದ ಕುರಿತು ಮಾಧ್ಯಮಗಳು ಸೋಮವಾರ ಕೇಳಿದ ಪ್ರಶ್ನೆಗೆ ಶಿವಕುಮಾರ್ ಅವರು ಉತ್ತರಿಸಿದರು.

ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು ಬಿಜೆಪಿ ನಾಯಕರು ಪ್ರಯತ್ನಿಸುತ್ತಿದ್ದಾರೆ. ದೇಶದ ಕಾನೂನಿಗೆ ನಾವು ಗೌರವ ನೀಡಬೇಕು. ಬಿಜೆಪಿ ಅಭ್ಯರ್ಥಿಗಳು ಅನೇಕ ಕಡೆಗಳಲ್ಲಿ ಠೇವಣಿ ಕಳೆದುಕೊಂಡಿರುವ ಹಿನ್ನೆಲೆಯಲ್ಲಿ ಜೆಡಿಎಸ್ ಜತೆ ಸೇರಿಕೊಂಡಿದ್ದಾರೆ. ಮಂಡ್ಯದಲ್ಲಿ ರಾಜಕೀಯ ನೆಲೆ ಕಂದುಕೊಳ್ಳಲು ಇಂತಹ ಪ್ರಯತ್ನಕ್ಕೆ ಮುಂದಾಗಿದ್ದಾರೆ. ಇದರಿಂದ ಏನೂ ಪ್ರಯೋಜನವಿಲ್ಲ ಎಂದು ಹೇಳಿದರು. 

ಇದನ್ನೂ ಓದಿ: ನಾನೂ ಒಬ್ಬ ಹಿಂದೂ, ಎಲ್ಲಾ ಧರ್ಮಗಳ ಜನರನ್ನೂ ಪ್ರೀತಿಸುತ್ತೇನೆ.: ಮುಖ್ಯಮಂತ್ರಿ ಸಿದ್ದರಾಮಯ್ಯ 

ಮಂಡ್ಯದ ಜನರು ಬಹಳ ಸಹಿಷ್ಣುತೆಯುಳ್ಳವರು, ಜಾತ್ಯಾತೀತರಾಗಿದ್ದಾರೆ. ಅವರು ಇಂತಹ ವಿಚಾರಗಳಿಗೆ ಮಾರುಹೋಗುವುದಿಲ್ಲ. ನಮಗೆ ನಮ್ಮದೇ ಆದ ಸಂವಿಧಾನವಿದೆ. ಈ ಭಾಗವನ್ನು ನಮ್ಮ ಮಹಾರಾಜರು ಹೇಗೆ ಆಳ್ವಿಕೆ ನಡೆಸಿದ್ದಾರೆ ಎಂಬ ಇತಿಹಾಸವಿದೆ. ಈ ಎಲ್ಲಾ ಗೊಂದಲಗಳು ಬಿಜೆಪಿಯ ಸೃಷ್ಟಿ. ರಾಜ್ಯದಲ್ಲಿ ಶಾಂತಿ ಸ್ಥಾಪನೆ ಮಾಡುವುದು ನಮ್ಮ ಆದ್ಯತೆ ಎಂದು ಹೇಳಿದರು. 

ಹಿಂದೂ ವಿರೋಧಿ ಕಾಂಗ್ರೆಸ್ ಸರ್ಕಾರ ಎಂಬ ಬಿಜೆಪಿ ನಾಯಕರ ಟೀಕೆ ಬಗ್ಗೆ ಕೇಳಿದಾಗ, ಯಾರು ಹಿಂದೂ ವಿರೋಧಿ? ನಾವೆಲ್ಲರೂ ಮೊದಲು ಭಾರತೀಯರು. ಅಲ್ಲಿ ದಲಿತ ಸಂಘರ್ಷ ಸಮಿತಿ, ಕೆಂಪೇಗೌಡ ಸಮಿತಿ ಸೇರಿದಂತೆ ಅನೇಕರು ನಾವು ಬಾವುಟ ಹಾಕುತ್ತೇವೆ ಎಂದು ಕೇಳುತ್ತಿದ್ದಾರೆ. ನಾವೆಲ್ಲರೂ ಹಿಂದೂಗಳಲ್ಲವೇ? ನಮ್ಮ ಹಳ್ಳಿಯಲ್ಲಿರುವ ಜನ ಹಿಂದೂಗಳಲ್ಲವೇ? ಸಮಾಜದಲ್ಲಿ ಅಶಾಂತಿ ಮೂಡಿಸಲು ಬಿಜೆಪಿ ಈ ಪ್ರಯತ್ನ ಮಾಡುತ್ತಿದೆ ಎಂದು ತಿಳಿಸಿದರು.

ಇದನ್ನೂ ಓದಿ: ವಿವೇಚನೆಯುಳ್ಳ, ಸೂಕ್ಷ್ಮತೆಯನ್ನೊಳಗೊಂಡ ನವೀನ ಭಾರತ 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News