ಬೆಂಗಳೂರು: ಕರ್ನಾಟಕ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಹೆಸರನ್ನು ‘ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ’ ಎಂದು ಮರು ನಾಮಕರಣ ಮಾಡಿ ರಾಜ್ಯ ಸರ್ಕಾರವು ಆದೇಶ ಹೊರಡಿಸಿದೆ.


COMMERCIAL BREAK
SCROLL TO CONTINUE READING

ಈ ಕುರಿತು ಟ್ವೀಟ್‌ ಮಾಡಿರುವ ಶಿಕ್ಷಣ ಸಚಿವ ಬಿ.ಸಿ.ನಾಗೇಶ್, ‘ರಾಜ್ಯದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯನ್ನು ‘ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ’ ಎಂದು ಮರು ನಾಮಕರಣ ಮಾಡಲಾಗಿದೆ ಎಂದು ಹೇಳಿದ್ದಾರೆ.  


ಇದನ್ನೂ ಓದಿ: Mandya : ಮಗನಿಗೆ ಪಿಎಸ್ಐ ಕೆಲಸ ಕೊಡಿಸಲು ಹೋಗಿ 30 ಲಕ್ಷ ಕಳೆದು ಕೊಂಡ ರೈತ!


12ನೇ ತರಗತಿವರೆಗಿನ ಶಿಕ್ಷಣವು ಶಾಲಾ ಶಿಕ್ಷಣ ವ್ಯಾಪ್ತಿಗೆ ಒಳಪಡುತ್ತದೆ ಎಂಬ ಅಂಶವನ್ನು ‘ರಾಷ್ಟ್ರೀಯ ಶಿಕ್ಷಣ ನೀತಿ-2020’ರಲ್ಲಿ ತಿಳಿಸಿರುವ ಹಿನ್ನೆಲೆ ಮರುನಾಮಕರಣ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.


Dams Water Level: ರಾಜ್ಯದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ


ವಿವಿಧ ಹಂತಗಳಲ್ಲಿ ತಜ್ಞರೊಂದಿಗೆ ಸಮಾಲೋಚಿಸಿದ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ರಾಜ್ಯ ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ. ಭಾರತದ ಹೆಚ್ಚಿನ ರಾಜ್ಯಗಳು XII ತರಗತಿಯವರೆಗೆ ಶಾಲಾ ಶಿಕ್ಷಣವನ್ನು ಪರಿಗಣಿಸುವುದರಿಂದ ಹೆಸರು ಬದಲಾವಣೆಗೆ ಕ್ರಮ ಕೈಗೊಳ್ಳಲಾಯಿತು. ಹೆಸರು ಬದಲಾವಣೆಯಿಂದ ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯೂ ಶಾಲಾ ಶಿಕ್ಷಣ ವ್ಯಾಪ್ತಿಗೆ ಬರಲಿದೆ ಎಂದು ಸರ್ಕಾರ ತಿಳಿಸಿದೆ.


ರಾಜ್ಯಗಳ ಜೊತೆಗೆ ಕೇಂದ್ರವೂ ಶಾಲಾ ಶಿಕ್ಷಣ ಇಲಾಖೆ ಹೆಸರನ್ನು ಬಳಸುವುದರಿಂದ ಕರ್ನಾಟಕ ಶಿಕ್ಷಣ ಇಲಾಖೆ ಈ ನಿರ್ಧಾರವನ್ನು ತೆಗೆದುಕೊಂಡಿದೆ ಎಂದು ಹೇಳಿಕೆಯಲ್ಲಿ ಸ್ಪಷ್ಟಪಡಿಸಲಾಗಿದೆ.


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.