ಬೆಂಗಳೂರು, ಫೆಬ್ರವರಿ 12: ಏರೋಸ್ಪೇಸ್ ಅಭಿವೃದ್ಧಿಯ ಶ್ರೇಯಸ್ಸು ಕರ್ನಾಟಕಕ್ಕೆ ಸಲ್ಲಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.ಅವರು ಇಂದು ತಾಜ್ ವೆಸ್ಟ್ ಎಂಡ್ ಹೋಟೆಲ್ ನಲ್ಲಿ ಹಮ್ಮಿಕೊಳ್ಳಲಾಗಿದ್ದ ಏರೋ ಇಂಡಿಯಾ 2023 ರ ಕರ್ಟನ್ ರೈಸರ್ ಕಾರ್ಯಕ್ರಮದಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜ್ ನಾಥ್ ಸಿಂಗ್  ಅವರು  ಮಾತನಾಡಿದರು.


COMMERCIAL BREAK
SCROLL TO CONTINUE READING

ರಾಜ್ಯವು ಏರೊಸ್ಪೇಸ್ ನೀತಿ "ಹಾಗೂ ರಕ್ಷಣಾ ಪಾರ್ಕ್ ನ ಮೊದಲ ಹಂತ ಪೂರ್ಣಗೊಂಡಿದೆ. 2 ನೇ  ಹಂತವೂ ಪ್ರಾರಂಭವಾಗುತ್ತಿದೆ. ಬೆಂಗಳೂರು  ಏರೋಸ್ಪೇಸ್ ಕೇಂದ್ರವಾಗಿದೆ. ಇದು ಏರ್ ಶೊ ನಡೆಸಲು ಅತ್ಯಂತ ಸೂಕ್ತ ಸ್ಥಳ. ಭಾರತೀಯ ಏರೋಸ್ಪೇಸ್ ತಂತ್ರಜ್ಞಾನವನ್ನು ಇದರಿಂದ ಬಿಂಬಿಸಬಹುದಾಗಿದೆ. ಬೆಂಗಳೂರು ವಾಣಿಜ್ಯ ಮತ್ತು ರಕ್ಷಣಾ ಉತ್ಪಾದನೆ ಕೇಂದ್ರವಾಗಿದೆ. ಬೆಂಗಳೂರಿನಲ್ಲಿ ಸ್ವಂತ ಏರ್ ಕ್ರಾಪ್ಟ್ ತಯಾರಿಸುವ ಗುರಿಯನ್ನು ನಾವು ಹೊಂದಿದ್ದೇವೆ. ಈ ಕಾರ್ಯಸಾಧನೆಗೆ ಜಾಗತಿಕವಾಗಿ ಸಾಕಷ್ಟು ಕ್ರಮ ವಹಿಸಿದ್ದು, ಈ ದೇಶದ ಭವಿಷ್ಯಕ್ಕೆ ನಾವು ಸೂಕ್ತ ಸ್ಥಳ ಮತ್ತು ಸೂಕ್ತ ತೀರ್ಮಾನ ತೆಗೆದುಕೊಳ್ಳುತ್ತಿದ್ದೇವೆ ಎಂದರು. 


ಗೌರವದ ಸಂಕೇತ


ಏರೋ ಇಂಡಿಯಾ ಶೋ ಆತಿಥ್ಯ ವಹಿಸುವುದು ಗೌರವದ ಸಂಕೇತ. ಇದರ ಆಯೋಜಿಸುವುದು ಕರ್ನಾಟಕ ಮತ್ತು ಬೆಂಗಳೂರಿಗೆ ಅಭ್ಯಾಸವಾಗಿದೆ.ಏರೊ ಸ್ಪೇಸ್ ಇಕೋ ಸಿಸ್ಟಮ್  ಅಭಿವೃದ್ಧಿ ಪಡಿಸಿದ ನಮ್ಮ ಹಿರಿಯರಿಗೆ ಅಭಿನಂದಿಸಬೇಕು ಎಂದರು. 


ಏರೋಸ್ಪೇಸ್ ಉದ್ಯಮ ಹಾಗೂ ಸಾಮರ್ಥ್ಯದ  ಪ್ರದರ್ಶನ


ಪ್ರತಿ ಬಾರಿ ಆತಿಥ್ಯ ವಹಿಸಿದಾಗಲೂ ಅತ್ಯಂತ  ಯಶಸ್ವಿಯಾಗಿ ರಕ್ಷಣಾ ಹಾಗೂ ಏರೋಸ್ಪೇಸ್ ಉದ್ಯಮ ಹಾಗೂ ಸಾಮರ್ಥ್ಯದ  ಪ್ರದರ್ಶನ ಮಾಡಿದ್ದೇವೆ.ಕೋವಿಡ್ ಸಮಯದಲ್ಲಿಯೂ  ಕಾರ್ಯಕ್ರಮಗಳು ರದ್ದಾದರೂ ನಾವು ಎರಡು ವರ್ಷಗಳ ಹಿಂದೆ ಏರ್ ಶೊ ಯಶಸ್ವಿಯಾಗಿ ಜರುಗಿತು. ಅದು ನಮ್ಮ ಆತ್ಮವಿಶ್ವಾಸವನ್ಬು ಹೆಚ್ಚಿಸಿದೆ.


ಇದನ್ನೂ ಓದಿ: ಈ ಬಾರಿ ಬಿಜೆಪಿ ಸೋಲಿಸಿ ಜನರು ಮತ್ತೆ ಕಾಂಗ್ರೆಸ್‍ಗೆ ಮತ್ತೆ ಆಶೀರ್ವಾದ ಮಾಡಲಿದ್ದಾರೆ: ಸಿದ್ದರಾಮಯ್ಯ


ಇದು ಅತ್ಯಂತ ದೊಡ್ಡ  ಏರ್‌ ಶೋ ಆಗಿದ್ದು, ಅತಿ ಹೆಚ್ಚು ವಿದೇಶಿ ರಕ್ಷಣಾ  ಮಂತ್ರಿಗಳು, ಏರ್ ಪೋರ್ಸ್ ಸಿಇಒ ಗಳು, 35000 ಚದರ ಅಡಿ ವಿಸ್ತೀರ್ಣದ ಪ್ರದರ್ಶನ,  67 ವಸ್ತುಪ್ರದರ್ಶನ , 600 ರಿಂದ 809 ಗೆ  ಪ್ರದರ್ಶನಗಳು, 98 ವಿದೇಶಿ ಗಣ್ಯರು  ಪಾಲ್ಗೊಳ್ಳುತ್ತಿದ್ದಾರೆ. ಒಪ್ಪಂದಗಳ ಸಂಖ್ಯೆಯೂ ಹೆಚ್ಚಾಗಲಿದೆ ಎಂದರು.


ವಾಯುಪಡೆಯ ಬಲವರ್ಧನೆ


ವಾಯುಪಡೆಯ ತಂತ್ರಜ್ಞಾನ, ಸಾಮರ್ಥ್ಯ, ಮಾನವ ಸಂಪನ್ಮೂಲ ಬಲಪಡಿಸುವುದು ನಿರಂತರ ಪ್ರಕ್ರಿಯೆಯಾಗಿದೆ. ರಾಜ್ ನಾಥ್  ಸಿಂಗ್ ಅವರ ನಾಯಕತ್ವದಲ್ಲಿ ರಕ್ಷಣಾ ಉತ್ಪಾದನೆಯಲ್ಲಿ, ತಂತ್ರಜ್ಞಾನ ಮೇಲ್ದರ್ಜೆಗೆರುವಲ್ಲಿ ಭಾರತ  ಆತ್ಮನಿರ್ಭರವಾಗುತ್ತಿದೆ.ನಮ್ಮ ರಕ್ಷಣಾ ಉಪಕರಣಗಳು ಶೇ 75% ರಷ್ಟು ಆಮದು ಮಾಡಿಕೊಳ್ಳುತ್ತಿದ್ದೆವು‌.  ಈಗ ರಪ್ತು ಮಾಡುತ್ತಿದ್ದೇವೆ‌. ಏರೊ ಸ್ಪೇಸ್ ಗೆ ಸಂಬಂಧಿಸಿದಂತೆ ಕರ್ನಾಟಕ ಮಹತ್ವದ ಪಾತ್ರ ವಹಿಸುತ್ತದೆ. ಕರ್ನಾಟಕದಲ್ಲಿ   1940 ರಲ್ಲಿ ಎಚ್ ಎ ಎಲ್ ಸ್ಥಾಪನೆಯಾಗಿದ್ದು, ಎನ್ ಎ ಎಲ್ , ಬಿಎಚ್ ಇ ಎಲ್, ಡಿಆರ್ ಡಿಒ ಎಲ್ಲವೂ  ಆರ್ ಆಂಡ್ ಡಿ  ಸಾಮರ್ಥ್ಯವನ್ನು ಹೆಚ್ಚಿಸಿವೆ. 


1960 ರಲ್ಲಿ ಬೆಂಗಳೂರಿನಲ್ಲಿ ಇಸ್ರೊ ಆರಂಭವಾಯಿತು. ಪ್ರತಿ ದಶಕದಲ್ಲಿ ಏರೊ ಸ್ಪೇಸ್ ಅಭಿವೃದ್ಧಿಯಾಗಿದೆ. ಸ್ಥಳ ,  ಸಾಮರ್ಥ್ಯ, ವೃದ್ಧಿಯಾಯಿತು. 1960 ಆರ್ಯಭಟ ಉಪಗ್ರಹ ಬೆಂಗಳೂರಿನಿಂದ ಉಡಾವಣೆ ಮಾಡಲಾಯಿತು.  ಶೇ 67 % ರಷ್ಟು ಏರೋಸ್ಪೇಸ್  ಉಪಕರಣಗಳು ಕರ್ನಾಟಕದಿಂದ ಉತ್ಪಾದನೆಯಾಗುತ್ತದೆ ಎಂದರು.


ಇದನ್ನೂ ಓದಿ: Tax Saving Schemes: ಈ ಅದ್ಭುತ ಯೋಜನೆಗಳಲ್ಲಿ ಹೂಡಿಕೆ ಮಾಡಿ ಲಾಭದ ಜೊತೆಗೆ ತೆರಿಗೆ ಉಳಿಸಿ


ಏರೋಸ್ಪೇಸ್ ಹಾಗೂ ರಕ್ಷಣಾ ಉದ್ಯಮದ ವಿಸ್ತರಣೆಗೆ ಏರೋಷೋ  ಸಹಕಾರಿ


ಏರೊ ಇಂಡಿಯಾ ಶೊ  2023 ನ್ನು ಜನರು ನೆನಪಿನಲ್ಲಿಡುತ್ತಾರೆ‌. ಹಾಗೂ  ಅಲ್ಲದೇ ಇಲ್ಲಿಂದ ಒಳ್ಳೆಯ ನೆನಪುಗಳನ್ನು ತೆಗೆದುಕೊಂಡು ಹೋಗುತ್ತಾರೆ. ಈ ಕಾರ್ಯಕ್ರಮ ಯಶಸ್ವಿಯಾಗುವ ವಿಶ್ವಾಸವಿದ್ದು, ಏರೋಸ್ಪೇಸ್ ಹಾಗೂ ರಕ್ಷಣಾ ಉದ್ಯಮದ ವಿಸ್ತರಣೆಗೆ ಇದು ಸಹಕಾರಿಯಾಗಲಿದೆ. ಅರ್ಧ ಜಗತ್ತು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿದ್ದು, ಇಡೀ ವಿಶ್ವವೇ ನಮ್ಮ ಕಡೆ ನೋಡುವಂತಾಗಬೇಕು ಎಂದು ಆಶಿಸಿದರು. 


ಹದಿನಾಲ್ಕನೇ ಬಾರಿ ಏರೋ ಇಂಡಿಯಾ ಶೋ ಆಯೋಜನೆ ಮಾಡಲು ನಮಗೆ ಈ ಅವಕಾಶ ನೀಡಿರುವ ಪ್ರಧಾನಿ ನರೇಂದ್ರ ಮೋದಿ,ರಕ್ಷಣಾ ಸಚಿವ  ರಾಜನಾಥ ಸಿಂಗ್ ಅವರಿಗೆ ಮುಖ್ಯಮಂತ್ರಿಗಳು ಧನ್ಯವಾದಗಳನ್ನು ತಿಳಿಸಿದರು.ಕೇಂದ್ರ ರಕ್ಷಣ ಇಲಾಖೆ ರಾಜ್ಯ ಸಚಿವ ಅಜಯ್ ಭಟ್, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಗಿರಿಧರ್ , ಎ. ಸಿ.ಎಸ್ ರಮಣ ರೆಡ್ಡಿ, ನಟರಾಜನ್, ಅನುರಾಗ್ ಬಾಜಪೇಯಿ ಉಪಸ್ಥಿತರಿದ್ದರು.https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.