ಬೆಂಗಳೂರು: ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಹರಾಜು ಹಾಕುತ್ತಿರುವ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿರುವುದರಿಂದ ಅಂತಹ ಸದಸ್ಯರ ಸದಸ್ಯತ್ವವನ್ನು ಅಸಿಂಧುಗೊಳಿಸಲು ಚುನಾವಣಾ  ಆಯೋಗ ಮುಂದಾಗಿದೆ. ಯಾವುದೇ ಗ್ರಾಮ ಪಂಚಾಯಿತಿ ಸದಸ್ಯರು ನಿಯಮಗಳಿಗೆ ವಿರುದ್ಧವಾಗಿ ಹರಾಜಿನಲ್ಲಿ ಅವಿರೋಧವಾಗಿ ಆಯ್ಕೆಗೊಂಡಿರುವುದು ಸಾಬೀತಾದಾರೆ ಅಂತಹ ಸದಸ್ಯರ ಸದಸ್ಯತ್ವ ಅಸಿಂಧುಗೊಳ್ಳಲಿದೆ ಎಂದು ಆಯೋಗ ಕಟ್ಟುನಿಟ್ಟಿನ ಸೂಚನೆ ನೀಡಿದೆ.


COMMERCIAL BREAK
SCROLL TO CONTINUE READING

ಪ್ರಜಪ್ರತಿನಿಧಿ ಕಾಯ್ದೆ, ಗ್ರಾಮ ಸ್ವರಾಜ್ ಕಾಯ್ದೆಯಡಿ ಪ್ರಕರಣ ದಾಖಲಿಸುವಂತೆ ಚುನಾವಣಾ ಆಯೋಗ(Election commission) ಸೂಚಿಸಿದೆ. ಹರಾಜು ಹಾಕುವುದು 1951ರ ಪ್ರಜಾ ಪ್ರತಿನಿಧಿ ಕಾಯ್ದೆಯ ಸ್ಪಷ್ಟ ಉಲ್ಲಂಘನೆಯಾಗಿದೆ. ಇದು ಪ್ರಜೆಗಳಿಂದ, ಪ್ರಜೆಗಳಿಗಾಗಿ, ಪ್ರಜೆಗಳಿಗೋಸ್ಕರ ಎನ್ನುವ ಮೂಲ ತತ್ವಕ್ಕೆ  ಮೂಲಕ ಸದಸ್ಯರು ಆಯ್ಕೆಯಾಗುವುದು ಕರ್ನಾಟಕ ಪಂಚಾಯತ್‍ರಾಜ್ ಕಾಯ್ದೆಯ ಆಶಯಕ್ಕೆ ವಿರುದ್ಧವಾದುದು. ಚುನಾವಣೆ ನಡೆಸದೆ ಅವಿರೋಧವಾಗಿ ಆಯ್ಕೆಯಾದರೆ ತಕಾರಾರಿಲ್ಲ. ಇದಕ್ಕೆ ವಿರುದ್ಧವಾಗಿ ಆಯ್ಕೆಯಾದರೆ ಸದಸ್ಯತ್ವ ರದ್ದುಪಡಿಸುವಂತೆ ನಿರ್ದೇಶನ ನೀಡಲಾಗಿದೆ. ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಯಾವುದೇ ಸ್ಥಾನಗಳನ್ನು ಹರಾಜು ಹಾಕುವುದು ಸರಿಯಲ್ಲ ಎಂದು ಆಯೋಗ ತಿಳಿಸಿದೆ.


ಸಾರಿಗೆ ಸಚಿವರ ಮೇಲೆ ಗರಂ ಆದ ಸಿಎಂ ಬಿಎಸ್ ವೈ, ಗೃಹಸಚಿವ..!


ಪ್ರತಿನಿತ್ಯ ಹರಾಜು ಹಾಕುತ್ತಿರುವುದು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಚುನಾವಣಾ ಆಯೋಗದ ಆಯುಕ್ತ ಬಸವರಾಜು ಎಲ್ಲಾ ಜಿಲ್ಲಾಧಿಕಾರಿಗಳ ಜತೆ ವಿಡಿಯೋ ಸಂವಾದ ನಡೆಸಿ, ಈ ರೀತಿ ಹರಾಜು ಹಾಕುವ, ಆಮೀಷ ಒಡ್ಡುವ, ಚುನಾವಣಾ ನಿಯಮಗಳನ್ನು ಮೀರಿ ಪಂಚಾಯತ್ ಗಳಿಗೆ ಆಯ್ಕೆ ಮಾಡುವುದು ಪ್ರಜಾಪ್ರಭುತ್ವಕ್ಕೆ ಮಾರಕವಾಗಿದೆ. ಈ ಕುರಿತು ಅರಿವು ಮೂಡಿಸುವ ಕೆಲಸ ಮಾಡುವಂತೆ ಆಯೋಗ ಜಿಲ್ಲಾಡಳಿತಕ್ಕೆ ಸೂಚಿಸಿದೆ.


ಕೋಲಾರದ ನರಸಾಪುರದಲ್ಲಿ ತಲೆ ಎತ್ತಿದ್ದ 'ದೇಶದ ಮೊದಲ iPhone ಕಂಪನಿ' ಧ್ವಂಸ!


ಗ್ರಾಮ ಪಂಚಾಯಿತಿ ಚುನಾವಣೆ ದಿನಾಂಕ ಘೋಷಣೆಯಾದ ನಂತರ ಅನೇಕ ಜಿಲ್ಲೆಗಳಲ್ಲಿ ಚುನಾವಣೆ ನಡೆಸದೆ ಸದಸ್ಯರನ್ನೇ ಹರಾಜು ಹಾಕುವ ಪ್ರಕರಣಗಳು ಮರುಕಳಿಸುತ್ತಲೇ ಇವೆ.


ಕಲಬುರಗಿ, ಯಾದಗಿರಿ, ವಿಜಯಪುರ, ಬೀದರ್, ಬಳ್ಳಾರಿ, ದಾವಣಗೆರೆ, ಶಿವಮೊಗ್ಗ, ಚಿಕ್ಕಮಗಳೂರು, ಮಂಡ್ಯ, ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರ ಸೇರಿದಂತೆ ಅನೇಕ ಕಡೆ ಒಬ್ಬೊಬ್ಬ ಸದಸ್ಯರನ್ನು 5 ಲಕ್ಷದಿಂದ 1 ಕೋಟಿವರೆಗೂ ಹರಾಜು ಹಾಕಲಾಗಿದೆ ಎಂದು ಹೇಳಲಾಗುತ್ತಿದೆ.


KSRTC-BMTC: 2ನೇ ದಿನಕ್ಕೆ ಕಾಲಿಟ್ಟ ಸಾರಿಗೆ ನೌಕರರ ಮುಷ್ಕರ, ಪ್ರಯಾಣಿಕರ ಪರದಾಟ