ನವದೆಹಲಿ: ತಮಿಳುನಾಡು ಸರ್ಕಾರ ಕೈಗೊಂಡಿರುವ ಹೊಗೆನಕಲ್ ಜಲವಿದ್ಯುತ್ ಯೋಜನೆ ಮತ್ತು ಕಾವೇರಿ, ಗುಂಡಾರ್ ಹಾಗೂ ವೈಗೈ ನದಿಜೋಡಣೆ ಯೋಜನೆಗಳನ್ನು ನ್ಯಾಯಾಲಯದ ಮೂಲಕ ವಿರೋಧಿಸುವ ತೀರ್ಮಾನ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ(Basavaraj Bommai) ಹೇಳಿದ್ದಾರೆ.


COMMERCIAL BREAK
SCROLL TO CONTINUE READING

ಅಂತರರಾಜ್ಯ ಜಲವಿವಾದ(Interstate River Water Disputes)ಗಳಿಗೆ ಸಂಬಂಧಿಸಿದಂತೆ ಕಾನೂನು ತಜ್ಞರೊಂದಿಗೆ ಮಂಗಳವಾರ ನಡೆದ ಸಭೆಯ ನಂತರ ಮಾಧ್ಯಮದವರಿಗೆ ಈ ವಿಷಯ ತಿಳಿಸಿದರು. ಅಂತರರಾಜ್ಯ ಜಲವಿವಾದಗಳ ಬಗ್ಗೆ ಸಚಿವರು, ಹಿರಿಯ ನ್ಯಾಯವಾದಿಗಳು, ಅಡ್ವೊಕೇಟ್ ಜನರಲ್  ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಸಿಎಂ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಕರ್ನಾಟಕ ರಾಜ್ಯ ನೆಲ-ಜಲದ ವಿಚಾರ(River Joining Projects)ದಲ್ಲಿ ಎಂದಿಗೂ ಒಂದಾಗಿದೆ. ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ NGT ಹಾಗೂ ಮತ್ತೊಂದು ಪ್ರಕರಣ ಒಟ್ಟಿಗೆ ವಿಚಾರಣೆಗೆ ಬರಲಿದ್ದು, ನಮ್ಮ ಆಕ್ಷೇಪಗಳನ್ನು ಸಲ್ಲಿಸಿ ರಾಜ್ಯದ ನಿಲುವನ್ನು ಸ್ಪಷ್ಟಪಡಿಸಲಿದ್ದೇವೆ ಎಂದು ಅವರು ಹೇಳಿದರು.  


ಇದನ್ನೂ ಓದಿ: Hijab Controversy: ಕರ್ನಾಟಕದಲ್ಲಿ ಮೂರು ದಿನಗಳು ಶಾಲೆ ಬಂದ್, ಹೈಕೋರ್ಟ್ ಹೇಳಿದ್ದೇನು?


ನ್ಯಾಯಮೂರ್ತಿಗಳ ನೇಮಕ


ನೆಲ, ಜಲ ಮತ್ತು ಭಾಷೆಯ ಹಕ್ಕು ಸಾಧನೆಗಾಗಿ ನಮ್ಮ ಗುಲಾಮಗಿರಿ ಇನ್ನೆಷ್ಟು ದಿನ?: ಎಚ್‌ಡಿಕೆ ಪ್ರಶ್ನೆ


ಮುಂಬರುವ ದಿನಗಳಲ್ಲಿ ಯಾವ ರೀತಿ ನಮ್ಮ ಯೋಜನೆಗಳನ್ನು ಪ್ರಾರಂಭ ಮಾಡಬೇಕು. ನ್ಯಾಯಾಲಯದ ಪ್ರಕರಣಗಳು ಯಾವ ಹಂತದಲ್ಲಿವೆ, ಈಗಾಗಲೇ ಪ್ರಾರಂಭಿಸಿರುವ ಯೋಜನೆಗಳನ್ನು ಹೇಗೆ ಮುಂದುವರೆಸಬೇಕೆಂಬ ಬಗ್ಗೆ ಚರ್ಚೆ ಮಾಡಲಾಗಿದೆ. ಒಟ್ಟಾರೆ ಸಲಹೆಗಳನ್ನು ಸ್ವೀಕರಿಸಲಾಗಿದೆ. ಗೋದಾವರಿ, ಕೃಷ್ಣಾ, ಕಾವೇರಿ, ಪೆನ್ನಾರ್ ನದಿ ಜೋಡಣೆ(River Joining Projects)ಗೆ ಸಂಬಂಧಿಸಿದಂತೆಯೂ ಚರ್ಚೆಯಾಗಿದ್ದು, ಆಕ್ಷೇಪಗಳನ್ನು ದಾಖಲಿಸಬೇಕಿದೆ. ಇತರೆ ರಾಜ್ಯಗಳೂ ಸೇರಿದಂತೆ ನಮ್ಮ ಪಾಲೂ ನಿರ್ಧರಿಸುವವರೆಗೂ DPRಗೆ ಒಪ್ಪಿಗೆ ನೀಡಬೇಕೆಂದು ಹೊಸದಾಗಿ ಆಕ್ಷೇಪ ಸಲ್ಲಿಸಬೇಕಿದೆ. ಎಲ್ಲಾ ರಾಜ್ಯಗಳೂ ಈ ಬಗ್ಗೆ ಒಪ್ಪಿಗೆ ನೀಡಬೇಕೆಂದು ಆರ್ಥಿಕ ಸಚಿವರಿಗೂ ತಿಳಿಸಲಾಗಿದೆ ಎಂದು ಹೇಳಿದ್ದಾರೆ.


ಸಂಪುಟ ವಿಸ್ತರಣೆ: ಇನ್ನು ರಾಜ್ಯ ಸಚಿವ ಸಂಪುಟ ವಿಚಾರವಾಗಿ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿಎಂ, ರಾಷ್ಟ್ರೀಯ ಅಧ್ಯಕ್ಷರನ್ನು ಭೇಟಿಯಾದ ಸಂದರ್ಭದಲ್ಲಿ  ಈ ಬಗ್ಗೆ ಚರ್ಚೆಯಾಗಬೇಕು ಎಂದು ಹೇಳಿದರು.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು  Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.