Monkeypox Case : ರಾಜ್ಯದ ಜನರೇ ಎಚ್ಚರ : ಬೆಂಗಳೂರಲ್ಲಿ ಮಂಕಿಪಾಕ್ಸ್ ಗುಣಲಕ್ಷಣಗಳಿರುವ ವ್ಯಕ್ತಿ ಪತ್ತೆ

ಆಫ್ರಿಕಾ ಮೂಲದ ವ್ಯಕ್ತಿಯಲ್ಲಿ ಮಂಕಿಪಾಕ್ಸ್ ಗುಣ ಲಕ್ಷಣಗಳು ಪತ್ತೆಯಾಗಿವೆ. ಕೂಡಲೇ ನಗರದ ಖಾಸಗಿ ಆಸ್ಪತ್ರೆಯಲ್ಲಿ ರೋಗಿಗೆ ಹೆಚ್ಚಿನ ಶುಶ್ರೂಶೆ ಹಾಗೂ ನಿಗಾ ವಹಿಸಿದ್ದಾರೆ. 

Written by - Channabasava A Kashinakunti | Last Updated : Jul 30, 2022, 05:14 PM IST
  • ಮಂಕಿಪಾಕ್ಸ್ ಗುಣಲಕ್ಷಣ ಇರುವ ವ್ಯಕ್ತಿ ಪತ್ತೆ
  • ಆಫ್ರಿಕಾ ಮೂಲದ ವ್ಯಕ್ತಿಯಲ್ಲಿ ಮಂಕಿಪಾಕ್ಸ್ ಗುಣ ಲಕ್ಷಣಗಳು
  • ಜುಲೈ 4ಕ್ಕೆ ಇಥಿಯೋಪಿಯದಿಂದ ಬೆಂಗಳೂರಿಗೆ ಆಗಮಿಸಿದ್ದ
Monkeypox Case : ರಾಜ್ಯದ ಜನರೇ ಎಚ್ಚರ : ಬೆಂಗಳೂರಲ್ಲಿ ಮಂಕಿಪಾಕ್ಸ್ ಗುಣಲಕ್ಷಣಗಳಿರುವ ವ್ಯಕ್ತಿ ಪತ್ತೆ title=

ಬೆಂಗಳೂರು : ರಾಜಧಾನಿಯಲ್ಲಿ ಮಂಕಿಪಾಕ್ಸ್ ಗುಣಲಕ್ಷಣ ಇರುವ ವ್ಯಕ್ತಿ ಪತ್ತೆಯಾಗಿದ್ದಾನೆ. 

ಆರೋಗ್ಯ ಇಲಾಖೆ ಅಧಿಕಾರಿಗಳು ಮಂಕಿ ಪಾಕ್ಸ್ ಲಕ್ಷಣಗಳು ಇರುವ ವ್ಯಕ್ತಿಯನ್ನು ಪತ್ತೆ ಹಚ್ಚಿದ್ದಾರೆ. ಆಫ್ರಿಕಾ ಮೂಲದ ವ್ಯಕ್ತಿಯಲ್ಲಿ ಮಂಕಿಪಾಕ್ಸ್ ಗುಣ ಲಕ್ಷಣಗಳು ಪತ್ತೆಯಾಗಿವೆ. ಕೂಡಲೇ ನಗರದ ಖಾಸಗಿ ಆಸ್ಪತ್ರೆಯಲ್ಲಿ ರೋಗಿಗೆ ಹೆಚ್ಚಿನ ಶುಶ್ರೂಶೆ ಹಾಗೂ ನಿಗಾ ವಹಿಸಿದ್ದಾರೆ. 

ಇದನ್ನೂ ಓದಿ : PSI Recruitment scam : ಪಿಎಸ್ಐ ನೇಮಕಾತಿ ಅಕ್ರಮ : ಸ್ಟ್ರಾಂಗ್ ರೂಮ್ ಗೆ ನುಗ್ಗಿ 22 OMR ಶೀಟ್ ತಿದ್ದಿದ್ದ ಪೊಲೀಸರು

ಮಂಕಿ ಪಾಕ್ಸ್ ಶಂಕಿತ ವ್ಯಕ್ತಿ ಜುಲೈ 4ಕ್ಕೆ ಇಥಿಯೋಪಿಯದಿಂದ ಬೆಂಗಳೂರಿಗೆ ಕಿಡ್ನಿ ಕಸಿ ಮಾಡಲು ಬೆಂಗಳೂರಿಗೆ ಆಗಮಿಸಿದ್ದ. ಮೈಮೇಲೆ ತುರಿಕೆ ಹಾಗೂ ದೇಹದ ಕೆಲ ಭಾಗದಲ್ಲಿ ಸಣ್ಣ ಗುಳ್ಳೆಗಳು ಕಂಡು ಬಂದಿದೆ. ಸಧ್ಯ ಮಂಕಿಪಾಕ್ಸ್ ಶಂಕಿತನ ಸ್ಯಾಂಪಲ್ಸ್ ಪುಣೆಗೆ ಕಳುಹಿಸಲಾಗಿದೆ ಎಂದು ಆರೋಗ್ಯ ಇಲಾಖೆ ಆಯುಕ್ತ ರಂದೀಪ್ ಮಾಹಿತಿ ನೀಡಿದ್ದಾರೆ. 

ಈ ಬಗ್ಗೆ ಮಾಹಿತಿ ನೀಡಿದ ಆರೋಗ್ಯ ಇಲಾಖೆ ಆಯುಕ್ತ ರಂದೀಪ್, 55 ವರ್ಷದ ವ್ಯಕ್ತಿಯಲ್ಲಿ ಮಂಕಿಪಾಕ್ಸ್ ಗುಣ ಲಕ್ಷಣ ಕಂಡು ಬಂದಿದೆ. ಇವರ ಸಂಪರ್ಕದಲ್ಲಿರುವ ಎಲ್ಲರ ಮೇಲೂ ನಿಗ ಇಡಲಾಗಿದೆ. ಈ ವ್ಯಕ್ತಿ ಹೊರತಾಗಿ ಸಂಪರ್ಕಿತ ವ್ಯಕ್ತಿಗಳಲ್ಲಿ ಯಾವುದೇ ಗುಣ ಲಕ್ಷಣಗಳು ಕಂಡು ಬಂದಿಲ್ಲ. ಈ ವ್ಯಕ್ತಿಗೆ ಇಂಟರ್ ನ್ಯಾಷನಲ್ ಟ್ರಾವೆಲ್ ಹಿಸ್ಟರಿ ಇದೆ. ಈ ವ್ಯಕ್ತಿಯ ಜೊತೆಗೆ ಇಬ್ಬರು ಇದ್ದಾರೆ ಅವರನ್ನೂ ಪರೀಕ್ಷೆ ಮಾಡಲಾಗುತ್ತೆ. 55 ವರ್ಷದ ವ್ಯಕ್ತಿಗೆ ಎಡಗೈ ಮೇಲೆ ತುರಿಕೆ ಕಾಣಿಸಿಕೊಂಡಿದೆ ಮತ್ತು ತೀವ್ರಥರನಾದ ಜ್ವರವೂ ಇತ್ತು. ಆದರೆ ಸ್ಯಾಂಪಲ್‌ ಅನ್ನು ಲ್ಯಾಬ್ ಗೆ ಕಳುಹಿಸಲಾಗಿದೆ ವರದಿ ಬಳಿಕೆ‌ ಗೊತ್ತಾಗುತ್ತೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ : Anand Singh : ಕೊನೆಗೂ ಜಿಲ್ಲಾ ಉಸ್ತುವಾರಿ ಸ್ಥಾನ ಗಿಟ್ಟಿಸಿಕೊಂಡ ಸಚಿವ ಆನಂದ್ ಸಿಂಗ್!

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News