ಬೆಂಗಳೂರು: ಕರ್ನಾಟಕದಲ್ಲಿ ಭೀಕರ ಪ್ರವಾಹದಿಂದಾಗಿ ಜನರು ತತ್ತರಿಸಿದ್ದು, ಇದುವರೆಗೆ ಉತ್ತರ ಕರ್ನಾಟಕ, ಕರಾವಳಿ ಮತ್ತು ಮಲೆನಾಡು ಪ್ರದೇಶಗಳಲ್ಲಿ 24 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ 45 ವರ್ಷಗಳಲ್ಲಿ ಸಂಭವಿಸಿದ ‘ಅತಿ ದೊಡ್ಡ ವಿಪತ್ತು’ ಎಂದು ಹೇಳಿದ್ದಾರೆ. ತಮ್ಮ ಸರ್ಕಾರವು ಕೇಂದ್ರದಿಂದ ಪರಿಹಾರವಾಗಿ 3,000 ಕೋಟಿ ರೂ. ನೀಡುವಂತೆ ಮನವಿ ಮಾಡಿಕೊಳ್ಳುವುದಾಗಿ ಹೇಳಿದ್ದಾರೆ. ಇದುವರೆಗಿನ ಮಳೆ ಮತ್ತು ಪ್ರವಾಹದಿಂದ ಸಾವಿರಾರು ಕೋಟಿ ರೂ ನಷ್ಟವಾಗಿದೆ ಎಂದು ರಾಜ್ಯ ಸರ್ಕಾರ ಹೇಳಿದೆ.
ರಾಜ್ಯದಲ್ಲಿ ಇದುವರೆಗೆ 68 ತಾಲ್ಲೂಕುಗಳಲ್ಲಿ 874 ಹಳ್ಳಿಗಳು ಭೀಕರ ಪ್ರವಾಹಕ್ಕೆ ತುತ್ತಾಗಿದ್ದು, ಹೆಚ್ಚಿನ ನದಿಗಳು ಅಪಾಯದ ಮಟ್ಟಕ್ಕಿಂತ ಮೇಲಕ್ಕೆ ಹರಿಯುತ್ತಿವೆ ಎನ್ನಲಾಗಿದೆ. ಶುಕ್ರವಾರ ಸಂಜೆಯ ಹೊತ್ತಿಗೆ 2.07 ಲಕ್ಷ ಜನರನ್ನು ಸ್ಥಳಾಂತರಿಸಲಾಗಿದೆ. ಕರ್ನಾಟಕ ಸರ್ಕಾರ ರಾಜ್ಯ ವಿಪತ್ತು ಪ್ರತಿಕ್ರಿಯೆ ನಿಧಿಯಡಿ 100 ಕೋಟಿ ರೂ.ಗಳನ್ನು 14 ಜಿಲ್ಲೆಗಳಿಗೆ ಬಿಡುಗಡೆ ಮಾಡಿದ್ದು, ಅದರಲ್ಲಿ 25 ಕೋಟಿ ರೂ.ಗಳನ್ನು ಬೆಳಗಾವಿ ಜಿಲ್ಲೆಗೆ ನೀಡಲಾಗಿದೆ.
Karnataka: Security forces carry out rescue operations near Badami town. pic.twitter.com/16aZm50ev5
— ANI (@ANI) August 10, 2019
ಮಲೆನಾಡು ಮತ್ತು ರಾಜ್ಯದ ಕರಾವಳಿ ಪ್ರದೇಶಗಳಿಂದ ಭೂಕುಸಿತ ಸಂಭವಿಸಿದ್ದು, ಕೊಡಗು ಜಿಲ್ಲೆಯಲ್ಲಿ ಭೂಕುಸಿತಕ್ಕೆ ಏಳು ಜನರು ಸಾವನ್ನಪ್ಪಿದ್ದಾರೆ ಮತ್ತು ಮೈಸೂರಿನ ಹುಣಸೂರಿನಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ. ಕೊಡಗಿನಲ್ಲಿ ಭಾರಿ ಮಳೆಯಾಗುತ್ತಿದ್ದು ಜಿಲ್ಲೆಯ ಹೆಚ್ಚಿನ ಭಾಗಗಳಿಗೆ ಕಳೆದ ನಾಲ್ಕು ದಿನಗಳಿಂದ ವಿದ್ಯುತ್ ಸರಬರಾಜು ಇಲ್ಲ ಎನ್ನಲಾಗಿದೆ.ಭೂಕುಸಿತದಿಂದಾಗಿ ದಕ್ಷಿಣ ಕನ್ನಡ ಜಿಲ್ಲೆಗೆ ರಸ್ತೆ ಸಂಪರ್ಕ ಕಡಿತಗೊಂಡಿದ್ದು, ಜಿಲ್ಲಾ ಅಧಿಕಾರಿಗಳು ಚಾರ್ಮಡಿ ಘಾಟ್ ರಸ್ತೆ ಮತ್ತು ಶಿರಡಿ ಘಾಟ್ ಮಾರ್ಗವನ್ನು ಮುಚ್ಚಿದ್ದಾರೆ. ಸಕಲೇಶಪುರದಿಂದ ಶಿರಡಿ ಘಾಟ್ ಕಡೆಗೆ 15 ಕಿ.ಮೀ ದೂರದಲ್ಲಿರುವ ದೋಡಕೋಪ್ಪಲು / ಕಪ್ಪಲ್ಲಿ ಭೂಕುಸಿತದಿಂದಾಗಿ ಬೆಂಗಳೂರಿನಿಂದ ಮಂಗಳೂರು ರಸ್ತೆ ನಿರ್ಬಂಧಿಸಲಾಗಿದೆ ಎಂದು ವರದಿಯಾಗಿದೆ.
ಕೊಡಗು ಜಿಲ್ಲೆಯ ಕುಶಾಲ್‌ನಗರ-ಮೈಸೂರು ರಸ್ತೆಯ ಕೊಪ್ಪಾ ಸೇತುವೆಯಲ್ಲಿ ಕಾವೇರಿ ನದಿ ತುಂಬಿ ಹರಿಯುತ್ತಿದ್ದು, ವಾಹನ ಸಂಚಾರಕ್ಕೆ ತೊಂದರೆಯಾಗಿದೆ. ಉತ್ತರ ಕೊಡಗಿನ ಭಾಗಮಂಡಲದಲ್ಲಿ ಕಾವೇರಿ ನದಿ ಅಪಾಯದ ಮಟ್ಟವನ್ನು ತಲುಪಿದ್ದು, ಮಾವಿನಗುಂಡಿಯಲ್ಲಿ ಭಾರಿ ಮಳೆ ಮತ್ತು ಭೂಕುಸಿತದಿಂದಾಗಿ ಸಾಗರಾದ ಹೊನ್ನವರ ರಸ್ತೆ ನಿರ್ಬಂಧಿಸಲಾಗಿದೆ ಎಂದು ಕೆಎಸ್‌ಆರ್‌ಟಿಸಿ ವಕ್ತಾರರು ತಿಳಿಸಿದ್ದಾರೆ.ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಶನಿವಾರ ಬೆಳಗಾವಿಗೆ ಆಗಮಿಸಿ ಉತ್ತರ ಕರ್ನಾಟಕದ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದರು. ಜೊತೆಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಉತ್ತರ ಕರ್ನಾಟಕದ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದರು.
ಬೆಂಗಳೂರಿನ ಸಿಎಂ ಗೃಹ ಕಚೇರಿಯಲ್ಲಿ ಪ್ರವಾಹ ಮತ್ತು ಪರಿಹಾರ ಕಾರ್ಯಗಳಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಶನಿವಾರ ಕರ್ನಾಟಕ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯ ಭಾಸ್ಕರ್ ಮತ್ತು ಇತರ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿ ಚರ್ಚಿಸಿದರು.
Former Karnataka CM HD Kumaraswamy in Sankeshwar, Belgaum: Refugees need a new life. The government should take all possible measures in this regard. Action has to be taken in the same manner that Kodagu had undergone during our government last year. #KarnatakaFloods pic.twitter.com/LLsd0XUJHy
— ANI (@ANI) August 10, 2019
ರಾಜ್ಯ ಸರ್ಕಾರದ ಪ್ರವಾಹ ಪರಿಸ್ಥಿತಿಯ ವರದಿಯ ಆರಂಭಿಕ ಮೌಲ್ಯಮಾಪನದ ಪ್ರಕಾರ ಬೆಳಗಾವಿ ಜಿಲ್ಲೆಯಲ್ಲಿ ಸುಮಾರು 1,410 ಕಿ.ಮೀ ರಸ್ತೆ, 211 ಸೇತುವೆಗಳು, 4,019 ಸರ್ಕಾರಿ ಕಟ್ಟಡಗಳು, 92 ನೀರು ಸರಬರಾಜು ಮೂಲಸೌಕರ್ಯ, 2575 ವಿದ್ಯುತ್ ಕಂಬಗಳು ಹಾನಿಗೊಳಗಾಗಿವೆ ಎನ್ನಲಾಗಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಸುಲ್ತಾನ್ ಬ್ಯಾಟರಿ, ಮಂಗಳೂರು, ಕ್ಯಾಲಿಕಟ್, ತ್ರಿಶೂರ್ ಮತ್ತು ಧರ್ಮಸ್ಥಳ ಕಡೆಗಿನ ಬಸ್ ಸೇವೆಗಳನ್ನು ಸ್ಥಗಿತಗೊಳಿಸಿದೆ.