ಬೆಂಗಳೂರು: ಕೇಂದ್ರ ಸರ್ಕಾರ ಪ್ರಕಟಿಸಿರುವ ಆನ್‌ಲಾಕ್‌ 6 ಮಾರ್ಗಸೂಚಿಯನ್ನು ಯಥಾವತ್ತಾಗಿ ಜಾರಿಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಡಿಸೆಂಬರ್ 1ರಿಂದ ಡಿಸೆಂಬರ್ 31 ವರೆಗೆ ಹೊಸ ಮಾರ್ಗ ಸೂಚಿ  ಜಾರಿಯಲ್ಲಿರುತ್ತದೆ. ಮಾರ್ಗಸೂಚಿಯಲ್ಲಿ ಕೊರೊನಾ ನಿಯಂತ್ರಣ ಮತ್ತು ಕಟ್ಟುನಿಟ್ಟಾದ ಪಾಲನೆಯನ್ನು ಸೂಚಿಸಲಾಗಿದೆ.


COMMERCIAL BREAK
SCROLL TO CONTINUE READING

ಕಂಟೇನ್ಮೆಂಟ್ ವಲಯದಲ್ಲಿ ಕಟ್ಟುನಿಟ್ಟಿನ ನಿಗಾ ವಹಿಸುವುದು, ಮಾಸ್ಕ್, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಖಾತ್ರಿ ಪಡಿಸಿಕೊಳ್ಳಬೇಕು ಎಂದು ಸೂಚಿಸಲಾಗಿದೆ. ಕೋವಿಡ್-19(Covid-19) ಹರಡುವುದನ್ನು ನಿಯಂತ್ರಿಸಲು ರಾತ್ರಿ ಕಫ್ರ್ಯೂನಂತಹ ಸ್ಥಳೀಯ ನಿರ್ಬಂಧಗಳನ್ನು ವಿಧಿಸಬಹುದು. ಆದರೆ, ಕಂಟೇನ್ಮೆಂಟ್ ವಲಯಗಳ ಹೊರಗೆ ಯಾವುದೇ ಲಾಕ್ಡೌನ್ ವಿಧಿಸಲು ರಾಜ್ಯ ಸರ್ಕಾರದ ಅನುಮತಿ ಅತ್ಯಗತ್ಯ ಎಂದು ತಿಳಿಸಲಾಗಿದೆ.


ಅಲ್ಪಸಂಖ್ಯಾತರ ಬಿ.ಎಡ್ ಹಾಗೂ ಡಿ.ಎಡ್ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ


ಶೇ.50ರಷ್ಟು ಸಾಮರ್ಥ್ಯದೊಂದಿಗೆ  ಪ್ರಯಾಣಿಕರ ಅಂತಾರಾಷ್ಟ್ರೀಯ ವಿಮಾನ ಪ್ರಯಾಣ- ಕ್ರೀಡಾಪಟುಗಳ ತರಬೇತಿಗಾಗಿ ಈಜುಕೊಳಗಳ ಬಳಕೆ- ಚಿತ್ರಮಂದಿರಗಳು, ಸಿನಿಮಾ ಹಾಲ್‍ಗಳಿಗೆ ಅನುಮತಿ- ಸಾಮಾಜಿಕ, ಧಾರ್ಮಿಕ, ಕ್ರೀಡೆ, ಮನರಂಜನೆ, ಶೈಕ್ಷಣಿಕ, ಸಾಂಸ್ಕೃತಿಕ, ಧಾರ್ಮಿಕ ಸಭೆಗಳನ್ನು ನಡೆಸಬಹುದು. ಜನರು ಮತ್ತು ಸರಕುಗಳ ಅಂತರ್-ರಾಜ್ಯ ಸಂಚಾರಕ್ಕೆ ಯಾವುದೇ ನಿರ್ಬಂಧವಿರುವುದಿಲ್ಲ. ಪ್ರತ್ಯೇಕ ಅನುಮೋದನೆ ಅಥವಾ ಇ-ಪರ್ಮಿಟ್ ಅಗತ್ಯವಿಲ್ಲ.


ರಾಜ್ಯ ಸರ್ಕಾರದಿಂದ ʼBPL ಕಾರ್ಡ್ ಹೊಂದಿರುವ ಕುಟುಂಬʼಗಳಿಗೆ ಸಿಹಿ ಸುದ್ದಿ!