ರಂಗಕರ್ಮಿ ಹೆಗ್ಗೋಡು ಪ್ರಸನ್ನ ಅವರಿಗೆ ಮಹಾತ್ಮಾಗಾಂಧಿ ಸೇವಾ ಪ್ರಶಸ್ತಿ
ರಂಗಕರ್ಮಿ ಹೆಗ್ಗೋಡು ಪ್ರಸನ್ನ ಅವರಿಗೆ 5 ಲಕ್ಷ ರೂ. ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಗುವುದು ಎಂದು ಸಿಎಂ ಕುಮಾರಸ್ವಾಮಿ ತಿಳಿಸಿದ್ದಾರೆ.
ಬೆಂಗಳೂರು: ಖ್ಯಾತ ರಂಗಕರ್ಮಿ ಹೆಗ್ಗೋಡು ಪ್ರಸನ್ನ ಅವರನ್ನು 2018ರ ಮಹಾತ್ಮಾ ಗಾಂಧಿ ಸೇವಾ ಪ್ರಶಸ್ತಿಗೆ ಆಯ್ಕೆ ಮಾಡಿರುವುದಾಗಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಪ್ರಕಟಿಸಿದ್ದಾರೆ.
ವಾರ್ತಾ ಮತ್ತು ಪ್ರಚಾರ ಇಲಾಖೆಯಿಂದ ನೀಡಲಾಗುವ ಈ ಪ್ರಶಸ್ತಿಯನ್ನು ಅಕ್ಟೋಬರ್ 2ರ ಗಾಂಧೀ ಜಯಂತಿಯಂದು ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಹಿರಿಯ ರಂಗಕರ್ಮಿ ಹೆಗ್ಗೋಡು ಪ್ರಸನ್ನ ಅವರಿಗೆ 5 ಲಕ್ಷ ರೂ. ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಗುವುದು ಎಂದು ಸಿಎಂ ಕುಮಾರಸ್ವಾಮಿ ತಿಳಿಸಿದ್ದಾರೆ.
ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ಗೋಪಾಲಗೌಡ ಅವರ ಅಧ್ಯಕ್ಷತೆಯ ಸಮಿತಿ ಅವರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಿದೆ. ಸಂಯುಕ್ತ ಕರ್ನಾಟಕ ಪತ್ರಿಕೆಯ ಸಂಪಾದಕ ಹುಣಸವಾಡಿ ರಾಜನ್, ಗಾಂಧೀ ಸ್ಮಾರಕ ನಿಧಿ ಅಧ್ಯಕ್ಷ ವೂಡೆ ಪಿ. ಕೃಷ್ಣ ಈ ಸಮಿತಿಯ ಸದಸ್ಯರಾಗಿದ್ದು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನಿರ್ದೇಶಕ ಎನ್.ಆರ್. ವಿಶುಕುಮಾರ್ ಸದಸ್ಯ ಕಾರ್ಯದರ್ಶಿಗಳಾಗಿದ್ದರು.