ಬೆಂಗಳೂರು : ಕರ್ನಾಟಕ ಸರ್ಕಾರವು ರಾಜ್ಯದಲ್ಲಿ ಸಸ್ಯಾಹಾರಿ,ಚಿಕನ್ ಮತ್ತು ಫಿಶ್ ಕಬಾಬ್‌ಗಳ ತಯಾರಿಕೆಯಲ್ಲಿ ಕೃತಕ ಬಣ್ಣ ಬಳಸುವುದನ್ನು ನಿಷೇಧಿಸಿದೆ.ಇದು ಸಾರ್ವಜನಿಕರ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುವ ಹಿನ್ನೆಲೆಯಲ್ಲಿ ಸರ್ಕಾರ ಈ ಕ್ರಮ ಕೈಗೊಂಡಿದೆ.ಈ ಬಗ್ಗೆ ಸರ್ಕಾರದ ನಿರ್ಧಾರವನ್ನು ಎಕ್ಸ್ ಖಾತೆಯಲ್ಲಿ ರಾಜ್ಯದ ಆರೋಗ್ಯ ಸಚಿವ ದಿನೇಶ್ ಗುಂಡೂ ರಾವ್ ಪ್ರಕಟಿಸಿದ್ದಾರೆ.ಸರ್ಕಾರ ಜಾರಿಗೆ ತಂದಿರುವ ನಿಯಮ ಉಲ್ಲಂಘಿಸುವ ಆಹಾರ ಮಾರಾಟಗಾರರ ವಿರುದ್ಧ ಏಳು ವರ್ಷಗಳ ಜೈಲು ಶಿಕ್ಷೆ ಮತ್ತು 10 ಲಕ್ಷದವರೆಗೆ ದಂಡ ಸೇರಿದಂತೆ ಗಂಭೀರ ಕ್ರಮವನ್ನು ಜರಗಿಸಲಾಗುವುದು ಎಂದು ಹೇಳಿದ್ದಾರೆ.ಕೃತಕ ಬಣ್ಣಗಳು ದೇಹಕ್ಕೆ ಹಾನಿಕಾರಕವಾಗಿದ್ದು, ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟು ಮಾಡುತ್ತವೆ ಎಂದು ದಿನೇಶ್ ಗುಂಡೂರಾವ್ ಹೇಳಿದ್ದಾರೆ. 


COMMERCIAL BREAK
SCROLL TO CONTINUE READING

ರಾಜ್ಯದಾದ್ಯಂತ ಕಬಾಬ್‌ಗಳಲ್ಲಿ ಕೃತಕ ಬಣ್ಣಗಳನ್ನು ಬಳಸುತ್ತಿರುವ ಕುರಿತು ಕರ್ನಾಟಕದ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಗೆ ವಿವಿಧ ದೂರುಗಳು ಬಂದಿದ್ದವು.ಈ ಹಿನ್ನೆಲೆಯಲ್ಲಿ ಇಲಾಖೆಯು ಪ್ರಯೋಗಾಲಯಗಳಲ್ಲಿ 39 ಕಬಾಬ್‌ಗಳ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಿತ್ತು. ಆ ಕಬಾಬ್ ಗಳಲ್ಲಿ ಎಂಟು ಕಬಾಬ್ ಗಳಲ್ಲಿ ಕೃತಕ ಬಣ್ಣವನ್ನು ಬಳಸಿರುವುದು ಪತ್ತೆಯಾಗಿದ್ದು, ಅವುಗಳು ತಿನ್ನಲು ಯೋಗ್ಯಕರವಾಗಿರಲಿಲ್ಲ ಎನ್ನುವುದು ಕಂಡು ಬಂದಿದೆ. 


ಇದನ್ನೂ ಓದಿ : Karnataka Lok Sabha Election Results 2024: ಕರ್ನಾಟಕದ 'ಲೋಕ' ಸಮರದಲ್ಲಿ ಗೆದ್ದವರು ಯಾರು ಸೋತವರು ಯಾರು?


ಇನ್ನು ಏಳು ಮಾದರಿಗಳಲ್ಲಿ ಸನ್ಸೆಟ್ ಹಳದಿ ಕಂಡುಬಂದರೆ ಮತ್ತೊಂದು ಮಾದರಿಯಲ್ಲಿ ಸನ್ಸೆಟ್ ಹಳದಿ ಮತ್ತು ಕಾರ್ಮೋಸಿನ್ ಕಂಡುಬಂದಿವೆ.


ಕಬಾಬ್‌ಗಳ ತಯಾರಿಕೆಯಲ್ಲಿ ಯಾವುದೇ ಕೃತಕ ಬಣ್ಣಗಳ ಬಳಕೆಯನ್ನು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ನಿಯಮಗಳು, (Food Products Standards and Food Additives) 2011 ರ ನಿಯಮ 16 ರ ಅಡಿಯಲ್ಲಿ ಅನುಮತಿಸಲಾಗುವುದಿಲ್ಲ ಎಂದು ಅವರು ಹೇಳಿದ್ದಾರೆ.


 


'ಗೋಬಿ ಮಂಚೂರಿಯನ್' ಮತ್ತು ' ಕಾಟನ್ ಕ್ಯಾಂಡಿ'ಗಳಲ್ಲಿ ಕೃತಕ ಬಣ್ಣಗಳ ಬಳಕೆಯನ್ನು ನಿಷೇಧಿಸಿತು.ಅವುಗಳ ಬಳಕೆ ಸಾರ್ವಜನಿಕ ಆರೋಗ್ಯದ ಮೇಲೆ, ವಿಶೇಷವಾಗಿ ಮಕ್ಕಳ ಮೇಲೆ ಪ್ರತಿಕೂಲ ಪರಿಣಾಮಗಳನ್ನು ಉಂಟುಮಾಡುತ್ತದೆ ಎನ್ನುವ ಕಾರಣದಿಂದಾಗಿ ಸರ್ಕಾಟ ಈ ಕ್ರಮ ಕೈಗೊಂಡಿತ್ತು. 


ಇದನ್ನೂ ಓದಿ : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪ್ರಜ್ವಲ್‌ ರೇವಣ್ಣಗೆ ಮತ್ತೆ ನ್ಯಾಯಾಂಗ ಬಂಧನ!


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ