ಸಮ್ಮಿಶ್ರ ಸರ್ಕಾರದ ಎಲ್ಲಾ ಸಚಿವರಿಂದ ಸಾಮೂಹಿಕ ರಾಜೀನಾಮೆ!

ರಾಜ್ಯದಲ್ಲಿ ಮತ್ತೆ ಪ್ರಾರಂಭವಾಗಲಿದೆಯೇ ರೆಸಾರ್ಟ್ ರಾಜಕಾರಣ?

Last Updated : Jul 8, 2019, 11:39 AM IST
ಸಮ್ಮಿಶ್ರ ಸರ್ಕಾರದ ಎಲ್ಲಾ ಸಚಿವರಿಂದ ಸಾಮೂಹಿಕ ರಾಜೀನಾಮೆ! title=
File Image

ಬೆಂಗಳೂರು: ರಾಜ್ಯ ರಾಜಕೀಯ ಕ್ಷಿಪ್ರ ಕ್ರಾಂತಿ ಇದೀಗ ಮತ್ತೊಂದು ಘಟ್ಟ ತಲುಪಿದ್ದು, ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರದ ಎಲ್ಲಾ ಸಚಿವರು ರಾಜೀನಾಮೆ ನೀಡಲಿದ್ದಾರೆ ಎನ್ನಲಾಗಿದೆ. ಕಳೆದೆರಡು ದಿನಗಳಿಂದ ಮೈತ್ರಿ ಪಾಳಯದಲ್ಲಿ ನಡೆಯುತ್ತಿರುವ ಬಿರುಸಿನ ಚಟುವಟಿಕೆಗಳ ಬಗ್ಗೆ ಇಂದೂ ಕೂಡ ಮುಂಜಾನೆಯಿಂದ ಸರಣಿ ಸಭೆ ನಡೆಸಿರುವ ಮೈತ್ರಿ ನಾಯಕರು ಸಚಿವರ ರಾಜೀನಾಮೆ ಮುಂದಾಗಿದ್ದಾರೆ ಎನ್ನಲಾಗಿದೆ.

ಎಲ್ಲ ಸಚಿವರ ರಾಜೀನಾಮೆ ಪಡೆಯಲು ಮುಖ್ಯಮಂತ್ರಿ ನಿರ್ಧಾರ:
ಮಧ್ಯಾಹ್ನ 2 ಗಂಟೆಯೊಳಗೆ ಎಲ್ಲ ಸಚಿವರು, ಶಾಸಕರು ತಾಜ್ ವೆಸ್ಟ್​ಎಂಡ್​ ಹೋಟೆಲ್​ಗೆ ಬರುವಂತೆ ಸೂಚನೆ ನೀಡಿರುವ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ, ಮಧ್ಯಾಹ್ನ ಭೋಜನದ ಬಳಿಕ ಎಲ್ಲಾ ಸಚಿವರಿಂದ ರಾಜೀನಾಮೆ ಪಡೆಯೋ ಸಾಧ್ಯತೆ ಎನ್ನಲಾಗಿದೆ. ರಾಜೀನಾಮೆ ಪಡೆದ ಬಳಿ 34 ಜನ ಶಾಸಕರು ರೆಸಾರ್ಟ್ ಗೆ ಶಿಫ್ಟ್ ಆಗುವ ಸಾಧ್ಯತೆ ಕೂಡ ಇದೇ.

ಏತನ್ಮಧ್ಯೆ, ಎಲ್ಲಾ ಸಚಿವರಿಂದ ರಾಜೀನಾಮೆ ಪಡೆದು ಹೊಸಬರನ್ನು ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳುವ ಕುರಿತು ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರ ಜೊತೆ ಸಿಎಂ ಮಾತುಕತೆ ನಡೆಸಿದ್ದಾರೆ ಎನ್ನಲಾಗುತ್ತಿದ್ದು, ಮಧ್ಯಾಹ್ನ ಶಾಸಕರು-ಸಚಿವರ ಜೊತೆ ಮಾತನಾಡಿ ಮುಂದಿನ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ನಿರೀಕ್ಷಿಸಲಾಗಿದೆ.
 

Trending News