Good News: ಖಾಸಗಿ ಶಾಲೆಗಳ ಶುಲ್ಕ ವಸೂಲಿ ಕ್ರಮಕ್ಕೆ ಬ್ರೇಕ್ ಹಾಕಿದ ರಾಜ್ಯ ಸರ್ಕಾರ
ಖಾಸಗಿ ಶಾಲೆಗಳು 2019ರ ಬೋಧನಾ ಶುಲ್ಕದ ಶೇ.70 ರಷ್ಟು ಮಾತ್ರ ಪಡೆಯಬೇಕು- ಸಚಿವ ಸುರೇಶ್ ಕುಮಾರ್
ಬೆಂಗಳೂರು: ರಾಜ್ಯ ಸರ್ಕಾರ ಕೊನೆಗೂ ಖಾಸಗಿ ಶಾಲೆಗಳ ಶುಲ್ಕ ವಸೂಲಿ ಕ್ರಮಕ್ಕೆ ಬ್ರೇಕ್ ಹಾಕಿದ್ದು, ಎಲ್ಲಾ ಮಾದರಿಯ ಖಾಸಗಿ ಶಾಲೆಗಳು ಬೋಧನಾ ಶುಲ್ಕ ಹೊರತುಪಡಿಸಿ ಯಾವುದೇ ಅಭಿವೃದ್ಧಿ ಶುಲ್ಕವನ್ನು ಪಡೆಯುವಂತಿಲ್ಲ ಎಂದು ತಿಳಿಸಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶಿಕ್ಷಣ ಸಚಿವ ಸುರೇಶ್ ಕುಮಾರ್(S.Sursh Kumar), ಕೊರೊನಾದಿಂದಾಗಿ ಎಲ್ಲಾ ಕ್ಷೇತ್ರಗಳೂ ಆರ್ಥಿಕ ಸಂಕಷ್ಟಕ್ಕೀಡಾಗಿವೆ. ಪೋಷಕರು ಶುಲ್ಕ ನೀಡಲಾಗದ ಸ್ಥಿತಿಯಲ್ಲಿದ್ದಾರೆ. ಇತ್ತ ಶುಲ್ಕ ನೀಡದಿದ್ದರೆ ಶಾಲೆಗಳು ಶಿಕ್ಷಕರಿಗೆ ವೇತನ ನೀಡಲಾಗದ ಸ್ಥಿತಿಯಿದೆ. ಹೀಗಾಗಿ ಖಾಸಗಿ ಶಾಲೆಗಳು 2019ರ ಬೋಧನಾ ಶುಲ್ಕದ ಶೇ.70 ರಷ್ಟು ಮಾತ್ರ ಪಡೆಯಬೇಕು ಎಂದರು.
BIG NEWS: ದ್ವಿತೀಯ PUC ಪರೀಕ್ಷಾ ವೇಳಾಪಟ್ಟಿ ಪ್ರಕಟ: ಇಲ್ಲಿದೆ ಫುಲ್ ಡಿಟೈಲ್!
ಯಾವುದೇ ಶಾಲೆಗಳು ಅಭಿವೃದ್ಧಿ, ಟ್ರಸ್ಟ್ ಗಳ ಅಭಿವೃದ್ಧಿ ಹೆಸರಲ್ಲಿ ಶುಲ್ಕ ಪಡೆಯುವಂತಿಲ್ಲ. ಒಂದು ವೇಳೆ ಈಗಾಗಲೇ ಹೆಚ್ಚಿನ ಶುಲ್ಕ ಪಡೆದಿದ್ದರೆ ಅದನ್ನು ಮುಂದಿನ ವರ್ಷಕ್ಕೆ ಹೊಂದಾಣಿಕೆ ಮಾಡಿಕೊಳ್ಳಬೇಕು. ಮೂರು ಕಂತುಗಳಲ್ಲೂ ಶುಲ್ಕ ಪಾವತಿ ಮಾಡಬಹುದು ಎಂದು ತಿಳಿಸಿದರು.
Prakash Rathod: ಕಲಾಪದ ನಡುವೆ ಅಶ್ಲೀಲ ಚಿತ್ರ ವೀಕ್ಷಿಸಿ ಸಿಕ್ಕಬಿದ್ದ ಕಾಂಗ್ರೆಸ್ MLC
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.