ವರುಣನ ಆರ್ಭಟ: ನಾಳೆ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ!
Bangalore weather forecast: ಬೆಂಗಳೂರಿನಲ್ಲಿ ಸೋಮವಾರ ರಾತ್ರಿಯಿಂದ ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ವಿದ್ಯಾರ್ಥಿಗಳು ಶಾಲಾ-ಕಾಲೇಜುಗಳಿಗೆ ಹೋಗಲು ಪರದಾಡುವಂತಾಗಿದೆ.
Bengaluru rain updates: ರಾಜ್ಯ ರಾಜಧಾನಿ, ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತವಾಗಿದೆ. ಮಳೆಯ ಆರ್ಭಟಕ್ಕೆ ವಾಹನ ಸವಾರರು ಪರದಾಡುವಂತಾಗಿದೆ. ನಿರಂತವಾಗಿ ಸುರಿಯುತ್ತಿರುವ ಮಳೆಯಿಂದ ಕೆಲವು ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ.
ಧಾರಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಾಲಾ-ಕಾಲೇಜುಗಳಿಗೆ ತೆರಳಲು ವಿದ್ಯಾರ್ಥಿಗಳು ಪರದಾಟ ನಡೆಸುತ್ತಿದ್ದಾರೆ. ಈ ಹಿನ್ನೆಲೆ ಬೆಂಗಳೂರು ನಗರ ಜಿಲ್ಲಾಧಿಕಾರಿ ನಾಳೆ(ಅ.೧೬) ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ ಎಂದು ವರದಿಯಾಗಿದೆ.
ಇದನ್ನೂ ಓದಿ: "ಮಾದಕ ವಸ್ತುಗಳ ದಂಧೆಯನ್ನು ನಿಗ್ರಹಿಸುವುದೇ ಸರ್ಕಾರದ ಗುರಿ"
ಬೆಂಗಳೂರಿನಲ್ಲಿ ಸೋಮವಾರ ರಾತ್ರಿಯಿಂದ ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ವಿದ್ಯಾರ್ಥಿಗಳು ಶಾಲಾ-ಕಾಲೇಜುಗಳಿಗೆ ಹೋಗಲು ಪರದಾಡುವಂತಾಗಿದೆ. ಬೆಂಗಳೂರಿನ ಹಲವಡೆ ರಸ್ತೆಗಳು ಸಂಪೂರ್ಣವಾಗಿ ಜಲಾವೃತವಾಗಿದ್ದು, ಕೆರೆಗಳಂತೆ ನೀರು ತುಂಬಿಕೊಂಡಿವೆ.
ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಬೆಂಗಳೂರಿನಲ್ಲಿ ಸಾರ್ವಜನಿಕರು, ವಾಹನ ಸವಾರರು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಇದನ್ನು ಗಮನದಲ್ಲಿಟ್ಟುಕೊಂಡು ಬೆಂಗಳೂರು ನಗರ ಡಿಸಿ ಜಿ.ಜಗದೀಶ್ ಅವರು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ. ಈಗಾಗಲೇ ಸರ್ಕಾರಿ ಶಾಲೆಗಳಿಗೆ ದಸರಾ ಹಬ್ಬದ ಅಂಗವಾಗಿ ಅಕ್ಟೋಬರ್ 20ರವರೆಗೆ ರಜೆಯನ್ನು ಘೋಷಿಸಲಾಗಿತ್ತು.
ಇದನ್ನೂ ಓದಿ: cm ಸಿದ್ದರಾಮಯ್ಯನವರ ವಿರುದ್ಧ ಮತ್ತೊಂದು ದೂರು
ಖಾಸಗಿ ಶಾಲೆಯ ವಿದ್ಯಾರ್ಥಿಗಳಿಗೆ ಶಾಲಾ-ಕಾಲೇಜುಗಳಿಗೆ ತೆರಳಲು ಸಮಸ್ಯೆ ಉಂಟಾಗಿದ್ದರಿಂದ ಡಿಸಿ ಜಗದೀಶ್ ಅವರು ರಜೆ ಘೋಷಿಸಿದ್ದಾರೆ. ನಾಳೆ ಮತ್ತು ನಾಡಿದ್ದು ಮಳೆಯ ಅಬ್ಬರ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮನ್ಸೂಚನೆ ನೀಡಿದೆ. ಈ ಹಿನ್ನೆಲೆ ನಾಳೆ ಮತ್ತು ನಾಡಿದ್ದು ಶಾಲಾ-ಕಾಲೇಜುಗಳಿಗೆ ರಜೆ ನೀಡುವ ಕುರಿತು ಜಿಲ್ಲಾಧಿಕಾರಿ ಇಂದು(ಮಂಗಳವಾರ) ಸಭೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.