ಟೆಂಡರ್ ಪೂರ್ವ ಪರಿಶೀಲನೆಗೆ ನ್ಯಾಯಮೂರ್ತಿ ರತ್ನಕಲಾ ಅಧ್ಯಕ್ಷತೆಯ ಸಮಿತಿ ರಚನೆ

ಜಲ ಸಂಪನ್ಮೂಲ ಇಲಾಖೆಯ ನಿವೃತ್ತ ಕಾರ್ಯದರ್ಶಿ ಬಿ.ಜಿ. ಗುರುಪಾದಸ್ವಾಮಿ (ಎಂಜಿನಿಯರಿಂಗ್ ಪರಿಣಿತ) ಹಾಗೂ ರಾಜ್ಯ ಲೆಕ್ಕಪತ್ರ ಇಲಾಖೆಯ ನಿವೃತ್ತ ನಿರ್ದೇಶಕ ಕೆ. ನಂದಕುಮಾರ್ (ಹಣಕಾಸು ವಿಷಯ ಪರಿಣಿತ) ಈ ಸಮಿತಿಯ ಸದಸ್ಯರಾಗಿ ನೇಮಕಗೊಂಡಿದ್ದಾರೆ.  

Written by - RACHAPPA SUTTUR | Edited by - Bhavishya Shetty | Last Updated : May 8, 2022, 03:43 PM IST
  • ಟೆಂಡರ್ ಪೂರ್ವ ಪರಿಶೀಲನೆಗೆ ಸಮಿತಿ
  • ನ್ಯಾಯಮೂರ್ತಿ ರತ್ನಕಲಾ ಅಧ್ಯಕ್ಷತೆಯ ಸಮಿತಿ ರಚನೆ
  • ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ
ಟೆಂಡರ್ ಪೂರ್ವ ಪರಿಶೀಲನೆಗೆ ನ್ಯಾಯಮೂರ್ತಿ ರತ್ನಕಲಾ ಅಧ್ಯಕ್ಷತೆಯ ಸಮಿತಿ ರಚನೆ title=
Karnataka Government

ಬೆಂಗಳೂರು: ರಾಜ್ಯದಲ್ಲಿ ವಿವಿಧ ಸರಕು ಮತ್ತು ಸೇವೆ ಪಡೆಯಲು ಕರೆಯುವ ಟೆಂಡರ್ ಪ್ರಕ್ರಿಯೆಯಲ್ಲಿ  ಪಾರದರ್ಶಕತೆ ಹಾಗೂ ದುಂದು ವೆಚ್ಚಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಡಿಸೆಂಬರ್‌ನಲ್ಲಿ ಸರ್ಕಾರ ಹೊರಡಿಸಿದ ಆದೇಶದಂತೆ ಉಚ್ಛನ್ಯಾಯಾಲಯದ ನಿವೃತ್ತ ನ್ಯಾಯಾಧೀಶರಾದ ರತ್ನಕಲಾ ಅವರ ಅಧ್ಯಕ್ಷತೆಯಲ್ಲಿ ಟೆಂಡರ್ ಪೂರ್ವ ಪರಿಶೀಲನಾ ಸಮಿತಿಯನ್ನು ರಚಿಸಿ ರಾಜ್ಯ  ಸರ್ಕಾರ  ಆದೇಶ ಹೊರಡಿಸಿದೆ. 

ಇದನ್ನು ಓದಿ: ಧರಣಿ ಮಂಡಲ ಮಧ್ಯದೊಳಗಿʼನಿಂದ ಬಂತು ಮೆಲೋಡಿ ಸಾಂಗ್!

ಜಲ ಸಂಪನ್ಮೂಲ ಇಲಾಖೆಯ ನಿವೃತ್ತ ಕಾರ್ಯದರ್ಶಿ ಬಿ.ಜಿ. ಗುರುಪಾದಸ್ವಾಮಿ (ಎಂಜಿನಿಯರಿಂಗ್ ಪರಿಣಿತ) ಹಾಗೂ ರಾಜ್ಯ ಲೆಕ್ಕಪತ್ರ ಇಲಾಖೆಯ ನಿವೃತ್ತ ನಿರ್ದೇಶಕ ಕೆ. ನಂದಕುಮಾರ್ (ಹಣಕಾಸು ವಿಷಯ ಪರಿಣಿತ) ಈ ಸಮಿತಿಯ ಸದಸ್ಯರಾಗಿ ನೇಮಕಗೊಂಡಿದ್ದಾರೆ.

​ಇದನ್ನು ಓದಿ: ಕರ್ನಾಟಕಕ್ಕೆ ʼಅಸಾನಿʼ ಭೀತಿ: ರಾಜ್ಯದ ವಿವಿಧೆಡೆ ಇಂದಿನಿಂದ ಭಾರೀ ಮಳೆ ಸಾಧ್ಯತೆ

ಈ ಸಮಿತಿಯು ಈಗಾಗಲೇ ಸರ್ಕಾರ ಹೊರಡಿಸಿದ ಮಾರ್ಗಸೂಚಿಗಳಂತೆ 50 ಕೋಟಿ ರೂ. ಗಳಿಗೂ ಹೆಚ್ಚು ಮೊತ್ತದ ಟೆಂಡರ್‌ಗಳು ಪಾರದರ್ಶಕ, ನ್ಯಾಯ ಸಮ್ಮತವಾಗಿರುವ ಕುರಿತು ಪರಿಶೀಲನೆ ನಡೆಸಲಿದೆ. ಯೋಜನೆಯನ್ನು ರೂಪಿಸಲಾಗಿರುವ ರೀತಿ, ಅದಕ್ಕೆ ತಗುಲುವ ವೆಚ್ಚದ ಕುರಿತು ಸಮಿತಿ ಪರಿಶೀಲನೆ ನಡೆಸಲಿದೆ.

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News